ಹುಬ್ಬಳ್ಳಿಯಲ್ಲಿ ವಿಶ್ವಕಪ್ ಫೈನಲ್ಸ್ ಬೆಟ್ಟಿಂಗ್ ಭರಾಟೆ – 15 ದಿನದಲ್ಲಿ 30 ಕೇಸ್, 42 ಮಂದಿ ಅರೆಸ್ಟ್

Public TV
1 Min Read

ಹುಬ್ಬಳ್ಳಿ: ದೇಶದೆಲ್ಲೆಡೆ ವಿಶ್ವಕಪ್ (World Cup) ಕ್ರಿಕೆಟ್ (Cricket) ಫೈನಲ್ (Final) ಜ್ವರ ಹೆಚ್ಚಾಗಿದೆ. ಆದರೆ ಹುಬ್ಬಳ್ಳಿಯಲ್ಲಿ (Hubballi) ಮಾತ್ರ ಬೆಟ್ಟಿಂಗ್ (Betting) ಭರಾಟೆ ಜೋರಾಗಿದ್ದು, ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಗೆ ಹುಬ್ಬಳ್ಳಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಅತ್ಯಧಿಕವಾಗಿ ನಡೆಯುತ್ತಿದೆ. ಹೀಗಾಗಿ ದೇಶದಲ್ಲಿಯೇ ಬೆಟ್ಟಿಂಗ್ ಹಬ್ ಆಗಿ ಹುಬ್ಬಳ್ಳಿ ಕುಖ್ಯಾತಿ ಪಡೆಯುತ್ತಿದೆ.

ಇದಕ್ಕೆ ಸಾಕ್ಷಿಯೆಂಬಂತೆ ಕಳೆದ ಹಲವು ದಿನಗಳ ಹಿಂದೆ ಇಡಿ (ED) ಸಹ ಹುಬ್ಬಳ್ಳಿ ಮನೆಯೊಂದರ ಮೇಲೆ ದಾಳಿ ನಡೆಸಿ ಶೋಧ ನಡೆಸಿತ್ತು. ಈ ಬೆನ್ನಲ್ಲೇ ಹುಬ್ಬಳ್ಳಿ ಧಾರವಾಡ ಪೋಲಿಸ್ ಕಮಿಷನರೇಟ್ ಹೈ ಅಲರ್ಟ್ ಆಗಿದೆ. ಬೆಟ್ಟಿಂಗ್ ದಂಧೆ ವಿರುದ್ಧ ಕಮಿಷನರ್ ರೇಣುಕಾ ಸುಕುಮಾರ್ ಸಮರ ಸಾರಿದ್ದಾರೆ. ಅಪರಾಧ ವಿಭಾಗದ ಡಿಸಿಪಿ ರವೀಶ್ ಮತ್ತು ಕಾನೂನು ಸುವ್ಯವಸ್ಥೆ ಡಿಸಿಪಿ ರಾಜೀವ್ ನೇತೃತ್ವದಲ್ಲಿ ವಿಶೇಷ ತಂಡಗಳನ್ನು ರಚಿಸಲಾಗಿದೆ. ಇದನ್ನೂ ಓದಿ: ಮಹಿಳೆಯಿಂದ ಬ್ಲ್ಯಾಕ್‌ಮೇಲ್ – ಎಂಪಿ ದೇವೇಂದ್ರಪ್ಪ ಪುತ್ರನಿಂದ ದೂರು, ಎಫ್‌ಐಆರ್ ದಾಖಲು

ವಿಶ್ವಕಪ್ ಮ್ಯಾಚ್‌ಗೆ ಸಂಬಂಧಪಟ್ಟಂತೆ ಕಳೆದ ಹದಿನೈದು ದಿನದಲ್ಲಿ ಬೆಟ್ಟಿಂಗ್ ವಿರುದ್ಧ 30 ಕೇಸ್ ದಾಖಲಾಗಿದ್ದು, 42 ಮಂದಿಯನ್ನು ಅರೆಸ್ಟ್ ಮಾಡಲಾಗಿದೆ. ಅಲ್ಲದೇ 200ಕ್ಕೂ ಅಧಿಕ ಜನರ ವಿಚಾರಣೆ ನಡೆಸಲಾಗಿದೆ. ಆನ್‌ಲೈನ್ ಗೇಮ್ ಆ್ಯಪ್‌ಗಳ ಮೇಲೂ ಕಟ್ಟೆಚ್ಚರ ವಹಿಸಲಾಗಿದೆ. ಇನ್ನೂ ಬೆಟ್ಟಿಂಗ್ ದಂಧೆಕೋರರಿಗೆ ಕಮಿಷನರ್ ಖಡಕ್ ವಾರ್ನಿಂಗ್ ನೀಡಿದ್ದಾರೆ. ಇದನ್ನೂ ಓದಿ: 15 ನಿಮಿಷದಲ್ಲಿ 4 ಕೊಲೆ, ಇದು ವಿಶ್ವ ದಾಖಲೆ – ಸ್ಟೇಟಸ್ ಹಾಕಿದಾತನಿಗೆ ಬಿಸಿ ಮುಟ್ಟಿಸಿದ ಪೊಲೀಸರು

Share This Article