WPL 2024: ಶಾರುಖ್‌ ಖಾನ್‌ ಉಪಸ್ಥಿತಿಯಲ್ಲಿ ವುಮೆನ್‌ ಪ್ರೀಮಿಯರ್‌ ಲೀಗ್‌ಗೆ ಅದ್ಧೂರಿ ಚಾಲನೆ

Public TV
1 Min Read

ವುಮೆನ್ ಪ್ರೀಮಿಯರ್ ಕ್ರಿಕೆಟ್ ಲೀಗ್‌ಗೆ (WPL 2024) ಇಂದು (ಫೆ.23) ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವರ್ಣರಂಜಿತ ಚಾಲನೆ ಸಿಕ್ಕಿದೆ. ಮಹಿಳಾ ಕ್ರಿಕೆಟ್ ತಂಡಕ್ಕೆ ಬೆಂಬಲ ಸೂಚಿಸಲು ಶಾರುಖ್ ಖಾನ್ (Sharukh Khan) ಸೇರಿದಂತೆ ಅನೇಕ ಬಾಲಿವುಡ್‌ ನಟರು ಭಾಗಿಯಾಗಿ ಸಾಥ್ ನೀಡಿದ್ದಾರೆ. ಇದನ್ನೂ ಓದಿ:ಮೊದಲ ದಿನವೇ ‘ಆರ್ಟಿಕಲ್ 370’ ಚಿತ್ರಕ್ಕೆ ಅತ್ಯುತ್ತಮ ರೆಸ್ಪಾನ್ಸ್

ಬೆಂಗಳೂರಿಗೆ ಬಾಲಿವುಡ್‌ನ ಸೂಪರ್ ಸ್ಟಾರ್‌ಗಳು ವಿಸಿಟ್ ಮಾಡಿದ್ದಾರೆ. ಬಾದಶಾ ಶಾರುಖ್ ಖಾನ್ ಜೊತೆ ಟೈಗರ್ ಶ್ರಾಫ್, ಶಾಹಿದ್ ಕಪೂರ್ (Shahid Kapoor), ವರುಣ್ ಧವನ್ (Varun Dhawan), ಸಿದ್ಧಾರ್ಥ್ ಮಲ್ಹೋತ್ರಾ ಕೂಡ ವುಮೆನ್ ಪ್ರೀಮಿಯರ್ ಕ್ರಿಕೆಟ್ ಲೀಗ್‌ನ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿದ್ದಾರೆ. ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮಕ್ಕೆ ಅದ್ಧೂರಿಯಾಗಿ ಚಾಲನೆ ಸಿಕ್ಕಿದೆ.

ಅದಷ್ಟೇ ಅಲ್ಲ, ಕಾರ್ಯಕ್ರಮದಲ್ಲಿ ಶಾರುಖ್ ಖಾನ್ ತಮ್ಮ ನಟನೆಯ ಹಾಡುಗಳಿಗೆ ಹೆಜ್ಜೆ ಹಾಕಿ ಮನರಂಜನೆ ನೀಡಿದ್ದಾರೆ. ಶಾಹಿದ್, ಸಿದ್ಧಾರ್ಥ್, ಟೈಗರ್‌ ಶ್ರಾಫ್‌ ಸೇರಿದಂತೆ ಅನೇಕರು ವೇದಿಕೆಯಲ್ಲಿ ಹೆಜ್ಜೆ ಹಾಕಿದ್ದಾರೆ.

ಕಳೆದ ವರ್ಷ ವುಮೆನ್ ಪ್ರೀಮಿಯರ್ ಲೀಗ್ ಮುಂಬೈನಲ್ಲಿ ನಡೆದಿತ್ತು. ಈ ಬಾರಿ ಬೆಂಗಳೂರು ಮತ್ತು ನವದೆಹಲಿಯಲ್ಲಿ ನಡೆಯಲಿದೆ. ಕಳೆದ ವರ್ಷದ ಫೈನಲಿಸ್ಟ್‌ಗಳಾದ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಇಂದು (ಫೆ.23) ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಟ ಆಡ್ತಿದ್ದಾರೆ. ಅಂತಿಮ ಪಂದ್ಯ ಮಾರ್ಚ್ 17ರಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿದೆ.

Share This Article