ಪ್ರತಿಭಟನೆಯಿಂದ ಹಿಂದೆ ಸರಿದ ಕುಸ್ತಿಪಟುಗಳು – ಮರಳಿ ರೈಲ್ವೇ ಉದ್ಯೋಗಕ್ಕೆ

Public TV
1 Min Read

ನವದೆಹಲಿ: ಲೈಂಗಿಕ ಕಿರುಕುಳ ಆರೋಪದ ಮೇಲೆ ಬಿಜೆಪಿ (BJP) ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಪ್ರತಿಭಟನೆಯಿಂದ ಕುಸ್ತಿಪಟುಗಳು (Wrestlers) ಸೋಮವಾರ ಹಿಂದೆ ಸರಿದಿದ್ದಾರೆ.

ಕುಸ್ತಿಪಟುಗಳಾದ ಸಾಕ್ಷಿ ಮಲಿಕ್ (Sakshi Malik), ವಿನೇಶ್ ಫೋಗಟ್ (Vinesh Phogat) ಹಾಗೂ ಬಜರಂಗ್ ಪುನಿಯಾ (Bajrang Punia) ಅವರು ಪ್ರತಿಭಟನೆಯಿಂದ ಹಿಂದೆ ಸರಿದ ಬಳಿಕ ರೈಲ್ವೆಯಲ್ಲಿ (Railways) ಕೆಲಸವನ್ನು ಪುನರಾರಂಭಿಸಿದ್ದಾರೆ. ಶನಿವಾರ ಕುಸ್ತಿಪಟುಗಳು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಬಳಿಕ ಈ ಬೆಳವಣಿಗೆ ನಡೆದಿದೆ. ಇದನ್ನೂ ಓದಿ: ಕಾನೂನು ಎಲ್ಲರಿಗೂ ಒಂದೇ, ತನ್ನದೇ ಆದ ಕ್ರಮ ತೆಗೆದುಕೊಳ್ಳಲಿ- ಕುಸ್ತಿಪಟುಗಳಿಗೆ ಅಮಿತ್ ಶಾ ಭರವಸೆ

ಕಳೆದ ಒಂದು ತಿಂಗಳ ಕಾಲ ಧರಣಿ ನಡೆಸಿದ್ದ ಕುಸ್ತಿಪಟುಗಳು ರಜೆಯಲ್ಲಿದ್ದರು. ಈ ಬಗ್ಗೆ ಪ್ರತಿಭಟನೆ ವೇಳೆ ಮಾತನಾಡಿದ್ದ ಬಜರಂಗ್ ಪುನಿಯಾ, ಆರಂಭದಲ್ಲಿ 10 ದಿನಗಳವರೆಗೆ ರಜೆ ತೆಗೆದುಕೊಂಡಿದ್ದೇವೆ. ಅಲ್ಲದೆ ನಾವು ನಮ್ಮ ರಜೆಯನ್ನು ವಿಸ್ತರಿಸುತ್ತಲೇ ಇದ್ದೇವೆ. ಇಲ್ಲಿಯವರೆಗೆ ಸರ್ಕಾರ ಯಾವುದೇ ಒತ್ತಡ ಹಾಕಿಲ್ಲ. ನಮ್ಮ ರಜೆಯ ಸಮಯದಲ್ಲಿ ನಮಗೆ ಬೇಕಾದುದನ್ನು ಮಾಡಲು ನಾವು ಸ್ವತಂತ್ರರಾಗಿದ್ದೇವೆ. ಅಲ್ಲದೆ ಪ್ರತಿಭಟನೆ ಮಾಡುವುದು ನಮ್ಮ ಪ್ರಜಾಸತ್ತಾತ್ಮಕ ಹಕ್ಕು ಎಂದು ಕಳೆದ ತಿಂಗಳು ಹೇಳಿದ್ದರು.

ಕುಸ್ತಿಪಟುಗಳು ನೂತನ ಸಂಸತ್ ಭವನದ ಉದ್ಘಾಟನೆಯ ವೇಳೆ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದರು. ಬಳಿಕ ರೈಲ್ವೆ ಇಲಾಖೆ ಅವರಿಗೆ ಶೋಕಾಸ್ ನೋಟಿಸ್ ಕಳುಹಿಸಿತ್ತು ಎಂದು ತಿಳಿದುಬಂದಿದೆ. ಇದನ್ನೂ ಓದಿ: ಒಡಿಶಾ ರೈಲು ದುರಂತ- ಪತ್ರದ ಮೂಲಕ ಮೋದಿ ಸರ್ಕಾರದ ವಿರುದ್ಧ ಖರ್ಗೆ ವಾಗ್ದಾಳಿ

Share This Article