50 ಸಾವಿರಕ್ಕೂ ಹೆಚ್ಚು ಕೂಲಿ ಕಾರ್ಮಿಕರು ಯಾದಗಿರಿಗೆ ವಾಪಸ್

Public TV
1 Min Read

– ಗುಳೆಹೋಗಿ ವಾಪಸ್ಸಾದ ಕಾರ್ಮಿಕರ ಸಂಖ್ಯೆ 1 ಲಕ್ಷ

ಯಾದಗಿರಿ: ಜಿಲ್ಲೆಯಲ್ಲಿ ಇದೀಗ ಕೊರೊನಾ ಆತಂಕ ಹೆಚ್ಚಾಗಿದೆ. ಎರಡು ದಿನದ ಅಂತರದಲ್ಲಿ 50 ಸಾವಿರಕ್ಕೂ ಅಧಿಕ ಕೂಲಿ ಕಾರ್ಮಿಕರು ಜಿಲ್ಲೆಗೆ ವಾಪಸ್ಸಾಗಿದ್ದಾರೆ.

ಒಂದು ವಾರದಲ್ಲಿ ಗುಳೆಹೋಗಿ ವಾಪಸ್ಸಾದ ಕಾರ್ಮಿಕರ ಸಂಖ್ಯೆ 1 ಲಕ್ಷ ದಾಟಿದೆ. ಇದರಲ್ಲಿ ಬೆಂಗಳೂರು ಮತ್ತು ಪುಣೆಯಿಂದ ಬಂದವರೇ ಹೆಚ್ಚು ಮಂದಿ ಇದ್ದಾರೆ. ಆದರೆ ಈ ಎಲ್ಲರೂ ಸಹ ತಮ್ಮ ಆರೋಗ್ಯ ತಪಾಸಣೆ ಮಾಡಿಸಿಕೊಂಡಿಲ್ಲ.

ಕೆಲವರು ತಪಾಸಣೆಗೆ ಅಂಜಿ ಮಾಹಿತಿ ನೀಡುತ್ತಿಲ್ಲ. ಇದು ಈಗ ಜಿಲ್ಲಾಡಳಿತಕ್ಕೆ ತಲೆನೋವು ತರಿಸಿದೆ. ಈ ಬಗ್ಗೆ ಜಿಲ್ಲಾ ಆರೋಗ್ಯ ಇಲಾಖೆಯ ಮುಖ್ಯಾಧಿಕಾರಿ ಡಾ. ಎಂ.ಎಸ್ ಪಾಟೀಲ್, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಂದ ಸಮೀಕ್ಷೆ ನಡೆಸಿದ್ದು, ಆರೋಗ್ಯ ಇಲಾಖೆ ಸಮೀಕ್ಷೆಯಲ್ಲಿ ಇದು ಬಹಿರಂಗವಾಗಿದೆ.

Share This Article
Leave a Comment

Leave a Reply

Your email address will not be published. Required fields are marked *