ದೆಹಲಿಯಲ್ಲಿ ಯಮುನಾ ನದಿ ಮಟ್ಟ ಮತ್ತಷ್ಟು ಏರಿಕೆ – ಕೇಜ್ರಿವಾಲ್ ನಿವಾಸದ ಬಳಿಯೂ ಪ್ರವಾಹ ಸ್ಥಿತಿ

Public TV
2 Min Read

ನವದೆಹಲಿ: ಯಮುನಾ ನದಿಯಲ್ಲಿ (Yamuna River) ರಾತ್ರಿ ವೇಳೆ ನೀರಿನ ಮಟ್ಟ ಏರಿಕೆಯಾಗಿದ್ದು, ದೆಹಲಿಯಲ್ಲಿ (Delhi) ಮನೆ, ರಸ್ತೆಗಳಿಗೆ ನೀರು ನುಗ್ಗಿ ಪ್ರವಾಹದ ಸ್ಥಿತಿ ಉಂಟಾಗಿದೆ.

ಹರಿಯಾಣದ ಹತ್ನಿಕುಂಡ್ ಬ್ಯಾರೇಜ್‌ನಿಂದ ನದಿಗೆ ನೀರು ಬಿಡುತ್ತಿರುವ ಹಿನ್ನೆಲೆ ಗುರುವಾರ ಬೆಳಗ್ಗೆ 7 ಗಂಟೆ ವೇಳೆಗೆ ನೀರಿನ ಮಟ್ಟ 208.46 ಮೀ. ಆಗಿದೆ. ಪ್ರಸ್ತುತ ನೀರಿನ ಮಟ್ಟ ಅಪಾಯದ ಮಟ್ಟಕ್ಕಿಂತಲೂ 3 ಮೀ.ನಷ್ಟು ಹೆಚ್ಚಾಗಿದೆ.

ಈ ನಡುವೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಬ್ಯಾರೇಜ್ ನೀರು ಬಿಡುವುದನ್ನು ನಿಲ್ಲಿಸುವಂತೆ ಕೇಂದ್ರವನ್ನು ಒತ್ತಾಯಿಸಿದ್ದಾರೆ. ಆದರೆ ಕೇಂದ್ರ ಬ್ಯಾರೇಜ್‌ನಿಂದ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡುವುದು ಅಗತ್ಯವಾಗಿದೆ ಎಂದು ಹೇಳಿದೆ.

ಹಿಮಾಚಲ ಪ್ರದೇಶದಲ್ಲಿ ಮುಂಗಾರು ಅವಾಂತರವನ್ನೇ ಸೃಷ್ಟಿಸಿದ್ದು, ಭಾರೀ ಪ್ರಮಾಣದ ನಾಶವಾಗಿದೆ. ಉತ್ತರ ಭಾಗದಲ್ಲಿ ಭಾರೀ ಮಳೆಯಿಂದಾಗಿ ಬ್ಯಾರೇಜ್ ತುಂಬಿದ್ದು, ಈ ಹಿನ್ನೆಲೆ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ. ಇದರಿಂದ ದೆಹಲಿಯಾದ್ಯಂತ ರಸ್ತೆ, ಮನೆಗಳಿಗೆ ನೀರು ನುಗ್ಗಿದೆ. ಇದನ್ನೂ ಓದಿ: ಜೆಜೆಎಂ ಪೈಪ್‌ಗೆ ಚರಂಡಿ ನೀರು ಸೇರ್ಪಡೆ; ನೀರು ಸೇವಿಸಿದ 30ಕ್ಕೂ ಹೆಚ್ಚು ಜನರು ಅಸ್ವಸ್ಥ

ಸಿವಿಲ್ ಲೈನ್ಸ್ ಪ್ರದೇಶದ ರಿಂಗ್ ರೋಡ್ ಜಲಾವೃತಗೊಂಡಿದೆ. ಮಜ್ನು ಕಾ ತಿಲಾವನ್ನು ಕಾಶ್ಮೀರಿ ಗೇಟ್ ಐಎಸ್‌ಬಿಟಿಗೆ ಸಂಪರ್ಕಿಸುವ ಮಾರ್ಗವನ್ನು ಮುಚ್ಚಲಾಗಿದೆ. ಈ ಸ್ಥಳ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಮತ್ತು ದೆಹಲಿ ವಿಧಾನಸಭೆಯಿಂದ ಕೇವಲ 500 ಮೀ. ದೂರದಲ್ಲಿದೆ.

ಪ್ರವಾಹ ಪರಿಸ್ಥಿತಿಯ ಹಿನ್ನೆಲೆ ಕೇಜ್ರಿವಾಲ್ ತುರ್ತು ಸಭೆ ನಡೆಸಿ, ನಿವಾಸಿಗಳಿಗೆ ಹಲವು ಸಲಹೆಗಳನ್ನು ನೀಡಿದ್ದಾರೆ. ಯಮುನಾ ನದಿಯ ನೀರಿನ ಮಟ್ಟ ಹೆಚ್ಚಾಗುವ ಸಾಧ್ಯತೆಯಿದ್ದು, ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಮನೆಗಳನ್ನು ಖಾಲಿ ಮಾಡಿ, ನಿಮ್ಮ ಅಗತ್ಯ ವಸ್ತುಗಳನ್ನು ತೆಗೆದುಕೊಂಡು ಟೆಂಟ್‌ಗಳು ಅಥವಾ ಸುರಕ್ಷಿತ ಸ್ಥಳಗಳಿಗೆ ಹೊರಡಿ. ಪ್ರವಾಹದ ನೀರನ್ನು ವೀಕ್ಷಿಸಲು ಹೋಗಬೇಡಿ. ನೀರಿನ ಮಟ್ಟದಲ್ಲಿ ತ್ವರಿತ ಏರಿಕೆ ಅಪಾಯಕಾರಿ ಎಂದಿದ್ದಾರೆ.

ಹರಿಯಾಣ ಬ್ಯಾರೇಜ್‌ನಿಂದ ನೀರಿನ ಹರಿವು ಮಧ್ಯಾಹ್ನ 2 ಗಂಟೆಯ ನಂತರ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಜಲ ಆಯೋಗ ತಿಳಿಸಿದೆ. ಕಳೆದೆರಡು ದಿನಗಳಿಂದ ರಾಷ್ಟ್ರ ರಾಜಧಾನಿಯಲ್ಲಿ ಭಾರೀ ಮಳೆಯಾಗದಿದ್ದರೂ ಹರಿಯಾಣದಿಂದ ಯಮುನಾಗೆ ಬಿಡುತ್ತಿರುವ ನೀರಿನಿಂದಾಗಿ ಅದರ ಸಮೀಪ ವಾಸಿಸುವ ಜನರಿಗೆ ಅಪಾರ ತೊಂದರೆಯಾಗಿದೆ. ನೀರು ನುಗ್ಗಿದ ನೂರಾರು ಮನೆಗಳನ್ನು ಜನರು ಖಾಲಿ ಮಾಡಬೇಕಾದ ಪರಿಸ್ಥಿತಿ ಎದುರಾಗಿದೆ. ಸದ್ಯ ಸಾವಿರಾರು ಜನರನ್ನು ಸ್ಥಳಾಂತರಿಸಲಾಗಿದ್ದು, ದುರ್ಘಟನೆಗಳನ್ನು ನಿಯಂತ್ರಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ 12 ತಂಡಗಳು ರಕ್ಷಣಾ ಕಾರ್ಯದಲ್ಲಿ ತೊಡಗಿವೆ. ಇದನ್ನೂ ಓದಿ: 12 ಮದುವೆ, 6 ಮಕ್ಕಳು – ವಿಧವೆಯರು, ಡಿವೋರ್ಸ್‌ ಪಡೆದ ಮಹಿಳೆಯರನ್ನೇ ಟಾರ್ಗೆಟ್‌ ಮಾಡ್ತಿದ್ದ ವಂಚಕ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್