ಡಿಸೆಂಬರ್ ನಲ್ಲಿ ‘ಯಶ್ 19’ ಸಿನಿಮಾ ಶೂಟಿಂಗ್: ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡಿಂಗ್

Public TV
2 Min Read

ಶ್ ನಟನೆಯ ಹೊಸ ಸಿನಿಮಾದ (New Movie) ಕುರಿತಂತೆ ದಿನಕ್ಕೊಂದು ಸುದ್ದಿ ಹೊರ ಬರುತ್ತಿದ್ದರೂ, ಅಧಿಕೃತವಾಗಿ ಚಿತ್ರತಂಡ ಯಾವುದೇ ಮಾಹಿತಿ ಹೊರ ಹಾಕುತ್ತಿಲ್ಲ. ಅಧಿಕೃತ ಮಾಹಿತಿಯನ್ನು ಯಶ್ ಹಂಚಿಕೊಳ್ಳದೇ ಇದ್ದರೂ ಚಿತ್ರದ ನಿರ್ದೇಶಕರು, ನಿರ್ಮಾಣ ಸಂಸ್ಥೆ, ನಾಯಕಿಯ ಹೆಸರು ಎಲ್ಲವೂ ಆಚೆ ಬಂದಿದೆ. ಅವೆಲ್ಲವೂ ಎಷ್ಟು ನಿಜವೋ, ಸುಳ್ಳೋ ಗೊತ್ತಿಲ್ಲ. ಆದರೂ, ದಿನಕ್ಕೊಂದು ಮಾಹಿತಿಯಂತೂ ಸಿಗುತ್ತಿದೆ.

ನಿನ್ನೆಯಷ್ಟೇ ಸಿನಿಮಾದ ನಾಯಕಿಯ ಹೆಸರು ಬಹಿರಂಗವಾಗಿತ್ತು. ಇದೀಗ ಸಿನಿಮಾದ ಶೂಟಿಂಗ್ ವಿವರಗಳು ಸಿಗುತ್ತಿವೆ. ಈಗಾಗಲೇ ಕಥೆ ಲಾಕ್ ಆಗಿದ್ದು, ಡಿಸೆಂಬರ್ 23ರಿಂದ ಚಿತ್ರೀಕರಣಕ್ಕೆ ಹೋಗಲು ಚಿತ್ರತಂಡ ರೆಡಿಯಾಗಿದೆ ಎನ್ನುವ ಮಾಹಿತಿ ಹರಿದಾಡುತ್ತಿದೆ. ನಿನ್ನೆ ರಾತ್ರಿಯಿಂದ ಟ್ವಿಟರ್ ನಲ್ಲಿ ಈ ವಿಷಯ ಟ್ರೆಂಡಿಂಗ್ ನಲ್ಲಿದೆ. ಇದು ಕೂಡ ಅಧಿಕೃತವಲ್ಲವಾದರೂ ಸಾಕಷ್ಟು ಸದ್ದು ಮಾಡುತ್ತಿರುವುದು ಸುಳ್ಳಲ್ಲ.

ನಿನ್ನೆಯಷ್ಟೇ ಈ ಸಿನಿಮಾದ ನಾಯಕಿಯ ಸುದ್ದಿ ಹೊರ ಬಂದಿತ್ತು. ಈ ಚಿತ್ರಕ್ಕೆ ನಾಯಕಿಯಾಗಿ ಮಲಯಾಳಂ ನಟಿ ಸಂಯುಕ್ತಾ ಮೆನನ್ (Samyukta Menon)  ಆಯ್ಕೆಯಾಗಿದ್ದಾರೆ ಎನ್ನಲಾಗುತ್ತಿದೆ. ಚಿತ್ರತಂಡದಿಂದ ಯಾವುದೇ ಮಾಹಿತಿ ಹೊರ ಬರದಿದ್ದರೂ, ಸಂಯುಕ್ತಾ ಹೆಸರು ಮಾತ್ರ ಜೋರಾಗಿ ಕೇಳಿ ಬರುತ್ತಿದೆ.

ಕೆಜಿಎಫ್ 2 (KGF 2) ಸಕ್ಸಸ್ ಬಳಿಕ ಸಿನಿಮಾದಿಂದ ನ್ಯಾಷನಲ್ ಸ್ಟಾರ್ ಯಶ್(Yash) ಬ್ರೇಕ್ ತೆಗೆದುಕೊಂಡಿದ್ದಾರೆ. ಕುಟುಂಬಕ್ಕೆ ಹೆಚ್ಚು ಸಮಯ ಮೀಸಲಿಡುತ್ತಿದ್ದಾರೆ. ಸದ್ಯ ಯಶ್ ಜೊತೆ ಸಮುದ್ರ ತೀರದಲ್ಲಿ ಕಾಲ ಕಳೆಯುತ್ತಿರುವ ಸುಂದರ ಫೋಟೋವನ್ನು ರಾಧಿಕಾ ಪಂಡಿತ್ (Radhika Pandit) ಹಂಚಿಕೊಂಡಿದ್ದಾರೆ. ನಟಿಯ ಹೊಸ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

ರಾಧಿಕಾ ಪಂಡಿತ್ ಅವರು ಪ್ರತಿ ವಾರಾಂತ್ಯ ಫ್ಯಾನ್ಸ್‌ಗಾಗಿ ಹೊಸ ಪೋಸ್ಟ್ ಶೇರ್ ಮಾಡುತ್ತಾರೆ. ಈ ವಾರವೂ ಅದನ್ನು ಮುಂದುವರಿಸಿಕೊಂಡು ಹೋಗಿದ್ದಾರೆ. ರಾಧಿಕಾ ಪಂಡಿತ್ ಅವರು ಸಮುದ್ರ ತೀರದಲ್ಲಿ ಕುಳಿತಿದ್ದಾರೆ. ಯಶ್ ಕೂಡ ಅವರ ಜೊತೆ ಇದ್ದಾರೆ. ಯಶ್ ಹೆಗಲ ಮೇಲೆ ಆಯ್ರಾ ಯಶ್ ಕೂಡ ಕುಳಿತಿದ್ದಾರೆ. ಅವರ ಕುಟುಂಬದ ಚೆಂದದ ಫೋಟೋ ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

 

ಯಶ್ 19 (Yash 19) ಸಿನಿಮಾಗಾಗಿ ರಾಕಿಭಾಯ್ ತೆರೆಮರೆಯಲ್ಲಿ ತಯಾರಿ ಮಾಡ್ತಿದ್ದಾರೆ. ಮುಂದಿನ ಸಿನಿಮಾ ಬಗ್ಗೆ ಅಧಿಕೃತವಾಗಿ ಅನೌನ್ಸ್ ಆಗುವವರೆಗೂ ತಮ್ಮ ಪ್ರಾಜೆಕ್ಟ್ ಬಗ್ಗೆ ಎಲ್ಲಿಯೂ ಲೀಕ್ ಆಗದಂತೆ ನಟ ನೋಡಿಕೊಳ್ತಿದ್ದಾರೆ. ಕೆಲವೇ ದಿನಗಳಲ್ಲಿ ಯಶ್ ಮುಂದಿನ ಸಿನಿಮಾ ಬಗ್ಗೆ ಉತ್ತರ ಸಿಗಲಿದೆ ಎನ್ನಲಾಗುತ್ತಿದೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್