ಗೋವಾದಲ್ಲಿ ಕೇಕ್ ಕತ್ತರಿಸಿ ಯಶ್ ಬರ್ತ್‌ಡೇ ಸಂಭ್ರಮ

Public TV
1 Min Read

ನ್ಯಾಷನಲ್ ಸ್ಟಾರ್ ಯಶ್‌ಗೆ (Yash) ಇಂದು (ಜ.8) 39ನೇ ವರ್ಷದ ಹುಟ್ಟುಹಬ್ಬದ ಸಂಭ್ರಮವಾಗಿದ್ದು, ಪತ್ನಿ ರಾಧಿಕಾ (Radhika Pandit) ಹಾಗೂ ಆಪ್ತರೊಂದಿಗೆ ಬರ್ತ್‌ಡೇ ಸೆಲೆಬ್ರೇಟ್ ಮಾಡಿದ್ದಾರೆ. ಗೋವಾದಲ್ಲಿ ಹುಟ್ಟುಹಬ್ಬ ಆಚರಿಸಿದ್ದಾರೆ. ಇದನ್ನೂ ಓದಿ:ಗ್ಯಾಂಗ್‌ಸ್ಟರ್‌ ಲುಕ್‌ನಲ್ಲಿ ಯಶ್-‌ ‘ಟಾಕ್ಸಿಕ್‌’ ಬರ್ತ್‌ಡೇ ಪೀಕ್‌ ಗ್ಲಿಂಪ್ಸ್‌ ಔಟ್‌

ಗೋವಾದಲ್ಲಿ ಮಧ್ಯರಾತ್ರಿ ಯಶ್‌ ಕೇಕ್‌ ಕತ್ತರಿಸಿ ಬರ್ತ್‌ಡೇ ಸೆಲೆಬ್ರೇಟ್‌ ಮಾಡಿದ್ದಾರೆ. ಪತ್ನಿ ರಾಧಿಕಾ ಮತ್ತು ಮಕ್ಕಳೊಂದಿಗೆ ಬರ್ತ್‌ಡೇ ಆಚರಿಸಿ ಯಶ್ ಖುಷಿಪಟ್ಟಿದ್ದಾರೆ. ನಟನ ಆಪ್ತ ಪಾನಿ ಪುರಿ ಕಿಟ್ಟಿ, KVN ಸಂಸ್ಥೆಯ ರೂವಾರಿ ವೆಂಕಟ್ ಸೇರಿದಂತೆ ಅನೇಕರು ಹುಟ್ಟುಹಬ್ಬದ ಸಂಭ್ರಮದಲ್ಲಿ ಭಾಗಿಯಾಗಿ ಶುಭಕೋರಿದ್ದಾರೆ.

ಈ ಮೊದಲೇ ತಾವು ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ. ಅಭಿಮಾನಿಗಳಿಗೆ ನೀವು ಇರುವ ಕಡೆಯಿಂದಲೇ ಹಾರೈಸಿ ಎಂದು ನಟ ತಿಳಿಸಿದ್ದರು. ಆದರೆ ಇದೀಗ ‘ಟಾಕ್ಸಿಕ್‌’ (Toxic) ಲುಕ್‌ನಿಂದ ಫ್ಯಾನ್ಸ್‌ಗೆ ಸರ್ಪ್ರೈಸ್‌ ಕೊಟ್ಟಿದ್ದಾರೆ. ಫ್ಯಾನ್ಸ್‌ ನಿರೀಕ್ಷೆಗೆ ಅವರು ನಿರಾಸೆ ಮಾಡಿಲ್ಲ. ರಾಕಿ ಭಾಯ್ ಬರ್ತ್‌ಡೇ ಪ್ರಯುಕ್ತ 59 ಸೆಕೆಂಡ್ ಗ್ಲಿಂಪ್ಸ್ ರಿವೀಲ್ ಆಗಿದ್ದು, ಡ್ರಗ್ಸ್ ಮಾಫಿಯಾ ಕುರಿತ ಚಿತ್ರವಾಗಿದೆ. ರಿಲೀಸ್ ಆದ ಗ್ಲಿಂಪ್ಸ್‌ನಲ್ಲಿ ಕಲರ್‌ಫುಲ್ ಸೆಟ್‌ನಲ್ಲಿ ನಟನ ಸ್ಟೈಲೀಶ್ ವಾಕ್, ಹಾಟ್ ಮ್ಯಾನರಿಸಮ್‌ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ಇನ್ನೂ ‘ಟಾಕ್ಸಿಕ್’ ಸಿನಿಮಾವು ಬೆಂಗಳೂರಿನ HMT ಮೈದಾನದಲ್ಲಿ ಮೊದಲ ಹಂತದ ಚಿತ್ರೀಕರಣ ಶುರುವಾದ ಬಳಿಕ ಮುಂಬೈ, ಗೋವಾ, ಮಂಗಳೂರಿನಲ್ಲಿ ಶೂಟಿಂಗ್ ನಡೆಸಿದೆ ಚಿತ್ರತಂಡ.

ಈ ಸಿನಿಮಾವನ್ನು KVN ಪ್ರೊಡಕ್ಷನ್ಸ್ ಹಾಗೂ ಯಶ್ ನಿರ್ಮಾಣದ ಸಂಸ್ಥೆ ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ಜಂಟಿಯಾಗಿ ನಿರ್ಮಾಣ ಮಾಡುತ್ತಿದೆ. ಚಿತ್ರಕ್ಕೆ ಗೀತು ಮೋಹನ್‌ದಾಸ್ ನಿರ್ದೇಶನ ಮಾಡುತ್ತಿದ್ದಾರೆ. ಇನ್ನೂ ಯಶ್ ನಟನೆಯ 19ನೇ ಸಿನಿಮಾ ಟಾಕ್ಸಿಕ್ ಚಿತ್ರವಾಗಿದ್ದು, ಕೆಜಿಎಫ್ 2 ಸಕ್ಸಸ್ ಬಳಿಕ ಈ ಸಿನಿಮಾ ಮೇಲೆ ಫ್ಯಾನ್ಸ್‌ಗೆ ಭಾರೀ ನಿರೀಕ್ಷೆಯಿದೆ.

Share This Article