ಬಹುನಿರೀಕ್ಷಿತ ರಾಮಾಯಣ (Ramayana) ಸಿನಿಮಾದಲ್ಲಿ ರಾವಣ ಪಾತ್ರದ ಮೂಲಕ ಕಾಣಿಸಿಕೊಳ್ಳುತ್ತಿರುವ ರಾಕಿಂಗ್ ಸ್ಟಾರ್ ಯಶ್ (Yash) ಅವರ ಮೊದಲ ಆಕ್ಷನ್ ಸೀಕ್ವೆನ್ಸ್ ಲುಕ್ ರಿವಿಲ್ ಆಗಿದೆ.
ನಿತೇಶ್ ತಿವಾರಿ ನಿರ್ದೇಶನ ಹಾಗೂ ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ರಾಮಾಯಣ ಸಿನಿಮಾದಲ್ಲಿ ಯಶ್ ನಟನಾಗಿಯೂ ಹಾಗೂ ನಿರ್ಮಾಪಕನಾಗಿಯೂ ಕಾಣಿಸಿಕೊಳ್ಳುತ್ತಿರುವುದು ಬಹು ವಿಶೇಷ. ರಾಮನ ಪಾತ್ರದಲ್ಲಿ ರಣಬೀರ್ ಕಪೂರ್, ಸೀತಾ ಪಾತ್ರದಲ್ಲಿ ಸಾಯಿ ಪಲ್ಲವಿ ಹಾಗೂ ರಾವಣನ ಪಾತ್ರದಲ್ಲಿ ಯಶ್ ಕಾಣಿಸಿಕೊಳ್ಳುತ್ತಿದ್ದಾರೆ.ಇದನ್ನೂ ಓದಿ: ಯಶ್ ನಟನೆಯ ‘ರಾಮಾಯಣ’ ಚಿತ್ರದ ಮೊದಲ ಪೋಸ್ಟರ್ ರಿಲೀಸ್
ಯಶ್ ರಾವಣನಾಗಿ ಅಬ್ಬರಿಸುವುದನ್ನು ಕಣ್ತುಂಬಿಕೊಳ್ಳಲು ಕನ್ನಡಿಗರು ಮಾತ್ರವಲ್ಲದೇ ಭಾರತೀಯ ಸಿನಿಮಾರಂಗ ಕಾತುರದಿಂದ ಕಾಯುತ್ತಿದ್ದು, ಇದೀಗ ಆಕ್ಷನ್ ಸೀಕ್ವೆನ್ಸ್ನ ಮೊದಲ ಲುಕ್ ರಿವಿಲ್ ಆಗಿದೆ. ಸಿನಿಮಾ ಶೂಟಿಂಗ್‌ನಲ್ಲಿ ಬೃಹತ್ ಸೆಟ್‌ಗಳು ತಲೆಯೆತ್ತಿ ನಿಂತಿದ್ದು, ಆಕ್ಷನ್ ಸೀಕ್ವೆನ್ಸ್‌ಗಳನ್ನು ಹಾಲಿವುಡ್‌ನ ಖ್ಯಾತ ಮ್ಯಾಡ್ ಮ್ಯಾಕ್ಸ್ ಸ್ಟಂಟ್ ನಿರ್ದೇಶಕ ಗೈ ನೋರಿಸ್ ನಿರ್ದೇಶನ ಮಾಡುತ್ತಿದ್ದಾರೆ.
ರಾಮಾಯಣ ಭಾಗ 1ಕ್ಕಾಗಿ ಯಶ್ 60-70 ದಿನಗಳ ಕಾಲ ಚಿತ್ರೀಕರಣ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಾಮಾಯಣ ಸಿನಿಮಾ 2 ಭಾಗಗಳಲ್ಲಿ ಮೂಡಿ ಬರಲಿದ್ದು, ಮೊದಲ ಭಾಗ 2026ರಲ್ಲಿ ರಿಲೀಸ್ ಆಗಲಿದೆ. ಎರಡನೇ ಭಾಗ 2027ರಲ್ಲಿ ರಿಲೀಸ್ ಆಗಲಿದೆ ಎಂದು ಚಿತ್ರತಂಡ ಅಧಿಕೃತವಾಗಿ ತಿಳಿಸಿದೆ. ಟಾಕ್ಸಿಕ್ ಸಿನಿಮಾ ಜೊತೆಗೆ ರಾವಣನ ಪಾತ್ರದಲ್ಲಿ ಯಶ್‌ರನ್ನು ನೋಡಲು ಅಭಿಮಾನಿಗಳು ಬಹುಉತ್ಸುಕರಾಗಿದ್ದಾರೆ.ಇದನ್ನೂ ಓದಿ: ಯಶ್ ‘ರಾಮಾಯಣ’ ಪ್ರಾಜೆಕ್ಟ್‌ನಲ್ಲಿ ವಿವೇಕ್ ಒಬೆರಾಯ್?