ಸ್ವಂತ ಕಾರಿಲ್ಲ, ಸಾಲ ಇಲ್ಲ – ಶಿಗ್ಗಾಂವಿ ಕಾಂಗ್ರೆಸ್‌ ಅಭ್ಯರ್ಥಿ ಯಾಸಿರ್‌ ಆಸ್ತಿ ಎಷ್ಟಿದೆ?

Public TV
1 Min Read

ಹಾವೇರಿ: ಶಿಗ್ಗಾಂವಿ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಯಾಸಿರ್‌ ಅಹ್ಮದ್‌ ಖಾನ್‌ ಪಠಾಣ್‌ ತಮ್ಮ ಆಸ್ತಿ ವಿವರ ಘೋಷಿಸಿಕೊಂಡಿದ್ದಾರೆ.

ಚುನಾವಣಾಧಿಕಾರಿಗೆ ನಾಮಪತ್ರದೊಂದಿಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಕುಟುಂಬದ ಆಸ್ತಿ ಘೋಷಣೆ ಮಾಡಿದ್ದಾರೆ. ಯಾಸಿರ್‌ ಅವರು ಒಟ್ಟು 3.04 ಕೋಟಿ ಮೌಲ್ಯದ ಆಸ್ತಿ ಹೊಂದಿದ್ದಾರೆ. 85 ಸಾವಿರ ನಗದು, 4.27 ಲಕ್ಷ ಮೌಲ್ಯದ 60 ಗ್ರಾಂ ಚಿನ್ನಾಭರಣ ಸೇರಿದಂತೆ 6.02 ಲಕ್ಷ ರೂ. ಮೌಲ್ಯದ ಚರಾಸ್ತಿಯಿದೆ.

ಹಾನಗಲ್ಲ ತಾಲೂಕು ಬಾದಾಮಗಟ್ಟಿ, ಬೊಮ್ಮನಹಳ್ಳಿ, ನೆಲ್ಲಿಕೊಪ್ಪ, ಶಿಗ್ಗಾಂವಿ ತಾಲೂಕು ಹುಲಗೂರು ಗ್ರಾಮಗಳಲ್ಲಿ 14.35 ಲಕ್ಷ ಮೌಲ್ಯದ ಕೃಷಿ ಭೂಮಿ ಹೊಂದಿದ್ದಾರೆ. ಹಾನಗಲ್ಲ ಪುರಸಭೆ ವ್ಯಾಪ್ತಿಯಲ್ಲಿ 10,098 ಚದರಡಿ ವಿಸ್ತೀರ್ಣದ 28 ಲಕ್ಷ ಮೌಲ್ಯದ ಕೃಷಿಯೇತರ ಭೂಮಿ ಸೇರಿದಂತೆ 42.35 ಲಕ್ಷ ಮೌಲ್ಯದ ಸ್ಥಿರಾಸ್ತಿಯಿದೆ.

ಕಾಂಗ್ರೆಸ್‌ ಅಭ್ಯರ್ಥಿ ಬಳಿ ಯಾವುದೇ ವಾಹನಗಳಿಲ್ಲ. ಸಾಲವನ್ನೂ ಹೊಂದಿಲ್ಲ. ಯಾಸಿರ್‌ ಅವರ ಪತ್ನಿ ಬಳಿ 3 ಲಕ್ಷ ನಗದು, 35.60 ಲಕ್ಷ ಮೌಲ್ಯದ 500 ಗ್ರಾಂ ಚಿನ್ನಾಭರಣ ಸೇರಿದಂತೆ 38.86 ಲಕ್ಷ ಮೌಲ್ಯದ ಚರಾಸ್ತಿಯಿದೆ. ಇವರು 24 ಲಕ್ಷ ಮೌಲ್ಯದ ಕೃಷಿ ಭೂಮಿ ಹೊಂದಿದ್ದಾರೆ. ಇವರ ಬಳಿ 1.93 ಕೋಟಿ ರೂ. ಮೌಲ್ಯದ ಕೃಷಿಯೇತರ ಭೂಮಿ ಸೇರಿದಂತೆ 2.17 ಕೋಟಿ ಮೌಲ್ಯದ ಸ್ಥಿರಾಸ್ತಿಯಿದೆ. ದಂಪತಿಗೆ ಮೂವರು ಗಂಡು ಮಕ್ಕಳು ಮತ್ತು ಒಬ್ಬಳು ಹೆಣ್ಣುಮಗಳಿದ್ದಾಳೆ. ಅವರ ಹೆಸರಿನಲ್ಲಿ ಯಾವುದೇ ಆಸ್ತಿಯಿಲ್ಲ.

Share This Article