ಗದಗ: ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ ಎನ್ನುವದು ತಪ್ಪು ಕಲ್ಪನೆ. ರಾಯರೆಡ್ಡಿ ಅವರು ಸಲಹೆ ಕೊಡುತ್ತಾರೆ. ಆದ್ರೆ, ಜನರಿಗೆ ಗ್ಯಾರಂಟಿ ಯೋಜನೆ ಕೊಟ್ಟು, ಅಭಿವೃದ್ಧಿ ಕಾರ್ಯಗಳನ್ನು ನಾವು ಮಾಡುತ್ತಿದ್ದೇವೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಹೇಳಿದ್ದಾರೆ.
ಗದಗದಲ್ಲಿ (Gadag) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಂಡರಗಿಯಲ್ಲಿ ನಾಲ್ಕು ಕೋಟಿ ರೂ. ವೆಚ್ಚದಲ್ಲಿ ಕನಕ ಸಮುದಾಯ ಭವನ ನಿರ್ಮಾಣ ಮಾಡಲಾಗುತ್ತಿದೆ. ಅಲ್ಲದೆ, ಎಲ್ಲಾ ಕ್ಷೇತ್ರಗಳಿಗೆ ಸಿಎಂ ತಲಾ 50 ಕೋಟಿ ರೂ. ಹಾಗೂ ಬೆಂಗಳೂರಿಗೆ 2 ಸಾವಿರ ಕೋಟಿ ರೂ. ಅನುದಾನ ಮೀಸಲಿಟ್ಟಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ ಎನ್ನುವದು ತಪ್ಪು ಕಲ್ಪನೆ ಎಂದಿದ್ದಾರೆ. ಇದನ್ನೂ ಓದಿ: ಕೊಹ್ಲಿ, ರೋಹಿತ್, ಇಮ್ರಾನ್ ನಿರ್ಮಾಣ ಮಾಡದ ವಿಶಿಷ್ಟ ದಾಖಲೆ ನಿರ್ಮಿಸಿದ ಗಿಲ್
5 ವರ್ಷಗಳ ಕಾಲ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಎಂದು ಸ್ವತಃ ಸಿಎಂ ಹಾಗೂ ಪಕ್ಷದ ಎಲ್ಲರೂ ಹೇಳಿದ್ದಾರೆ. ಬಿಜೆಪಿ ಅವಧಿಯಲ್ಲಿ ಎಷ್ಟು ಅನುದಾನ ಸಿಗುತ್ತಿತ್ತು ಎನ್ನುವದನ್ನು ನೋಡಿ ಹೇಳಿದ್ದಾರೆ. ಬಿಜೆಪಿಗೆ ಹೋಲಿಸಿದರೆ ಅಭಿವೃದ್ಧಿ ಕೆಲಸ ಚೆನ್ನಾಗಿಯೇ ಆಗುತ್ತಿವೆ. ಈಗಾಗಲೇ 25 ಕೋಟಿ ರೂ. ಅನುದಾನವನ್ನು ಎಲ್ಲಾ ಕ್ಷೇತ್ರಕ್ಕೂ ಕೊಟ್ಟಿದಾರೆ. ಅಭಿವೃದ್ಧಿ ಕಾರ್ಯ ನಡೆಯುತ್ತಿದೆ. ಯಾವ ಕಾರ್ಯಗಳೂ ನಿಂತಿಲ್ಲ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ನಾನು ಬಾಸ್ಕೆಟ್‌ಬಾಲ್ ಪ್ಲೇಯರ್, ಸ್ಪೋರ್ಟ್ಸ್‌ಗೆ ಹೈಟ್ ಮ್ಯಾಟರ್ ಆಗಲ್ಲ: ರಮ್ಯಾ
`ಹೈ’ ಸಿಎಂ ಬದಲಾವಣೆಗೆ ಸೂಚನೆ ಕೊಟ್ಟಿಲ್ಲ
ಸಿಎಂ ಬದಲಾವಣೆ ಕುರಿತು ಪ್ರತಿಕ್ರಿಯಿಸಿದ ಅವರು, ಸಿಎಂ ಬದಲಾವಣೆ ವರಿಷ್ಠರಿಗೆ ಬಿಟ್ಟಿದ್ದು. ಹೈಕಮಾಂಡ್ ಸಿಎಂ ಬದಲಾವಣೆಗೆ ಸೂಚನೆ ಕೊಟ್ಟಿಲ್ಲ. ಸಣ್ಣ-ಪುಟ್ಟ ಭಿನ್ನಾಭಿಪ್ರಾಯದಿಂದ ಕೆಲ ಶಾಸಕರು ಮಾತಾಡಿರಬಹುದು. ಅದು ಅವರ ವೈಯಕ್ತಿಕ ವಿಚಾರ. ಅದರ ಅರ್ಥ ಸರ್ಕಾರ ಅಸ್ಥಿರವಾಗಿದೆ ಅಂತಲ್ಲ. ಸುರ್ಜೇವಾಲ ಅವರೇ ಸಿಎಂ ಬದಲಾವಣೆ ಇಲ್ಲ ಎಂದು ಹೇಳಿದ್ದಾರೆ. ಹಾಗಾಗಿ 5 ವರ್ಷಗಳ ಕಾಲವೂ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ ಎಂದಿದ್ದಾರೆ. ಇದನ್ನೂ ಓದಿ: ದುರಹಂಕಾರಿ ಅಂದ್ರೂ ಐ ಡೋಂಟ್ ಕೇರ್, ನಾನು ಸ್ವಾಭಿಮಾನಿ: ಸಿದ್ದರಾಮಯ್ಯ
ಎಐಸಿಸಿ, ಒಬಿಸಿ ಘಟಕಕ್ಕೆ ಸಿದ್ದರಾಮಯ್ಯರನ್ನು (Siddaramaiah) ಸದಸ್ಯರನ್ನಾಗಿ ಮಾಡಿದ್ದಾರೆ. ಅಧ್ಯಕ್ಷರನ್ನಾಗಿ ಮಾಡಿಲ್ಲ. ತಪ್ಪು ಮಾಹಿತಿ ರವಾನೆಯಾಗಿದೆ. ಹಿಂದುಳಿದ ವರ್ಗಗಳ ಧ್ವನಿಯಾಗಿ ಕೆಲಸ ಮಾಡುವವರನ್ನು ಸದಸ್ಯರನ್ನಾಗಿ ಮಾಡಿದ್ದಾರೆ. ನಮ್ಮ ತಂದೆಯವರು ಹಿಂದುಳಿದ ವರ್ಗಗಳ ಹಾಗೂ ಸಾಮಾಜಿಕ ನ್ಯಾಯದ ಪರ ಕೆಲಸ ಮಾಡಿದ್ದಾರೆ. ಹೀಗಾಗಿ ಅವರನ್ನು ಸದಸ್ಯರನ್ನಾಗಿ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಡಿಕೆಶಿ ಪಕ್ಷಕ್ಕಾಗಿ ಶ್ರಮಪಟ್ಟಿದ್ದಾರೆ
ಇನ್ನು ಡಿ.ಕೆ.ಶಿವಕುಮಾರ್ ಪರ ರಂಭಾಪುರಿ ಸ್ವಾಮೀಜಿ ಹೇಳಿಕೆ ಕುರಿತು ಪ್ರತಿಕ್ರಿತಿಸಿದ ಅವರು, ಸ್ವಾಮೀಜಿ ಅವರು ತಮ್ಮ ವೈಯಕ್ತಿಕ ಅಭಿಪ್ರಾಯ ಹೇಳಿದ್ದಾರೆ. ನಮ್ಮ ಪಕ್ಷ ಅಧಿಕಾರಕ್ಕೆ ಬರಲು ಡಿ.ಕೆ.ಶಿವಕುಮಾರ್ (DK Shivakumar) ಅವರ ಕೊಡುಗೆ ಇದ್ದೇ ಇದೆ. ಅಧ್ಯಕ್ಷರಾಗಿ ಬಹಳಷ್ಟು ಶ್ರಮ ಪಟ್ಟಿದ್ದಾರೆ. ಪಕ್ಷದ ಬಲವರ್ಧನೆ ಮಾಡಿದ್ದಾರೆ ಎಂದಿದ್ದಾರೆ.