ಬಿಎಸ್‍ವೈ ನಮ್ಮ ನಾಯಕರು ರಾಜ್ಯ ಪ್ರವಾಸ ಮಾಡೋದರಲ್ಲಿ ತಪ್ಪೇನಿದೆ: ಭೈರತಿ ಬಸವರಾಜ್

Public TV
1 Min Read

ದಾವಣಗೆರೆ: ಬಿ.ಎಸ್ ಯಡಿಯೂರಪ್ಪನವರು ನಮ್ಮ ನಾಯಕರು ರಾಜ್ಯ ಪ್ರವಾಸ ಮಾಡೋದರಲ್ಲಿ ತಪ್ಪೇನಿದೆ, ಪಕ್ಷದ ಸಂಘಟನೆ ದೃಷ್ಟಿಯಿಂದ ಪ್ರವಾಸ ಮಾಡುತ್ತಿದ್ದಾರೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಪ್ರತಿಕ್ರಿಯಿಸಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪನವರು ಪಕ್ಷ ಸಂಘಟನೆ ಮಾಡುತ್ತೇನೆ ಅಂದರೆ ಬೇಡ ಎಂದು ಹೇಳಲಾಗುತ್ತಾ, ಈಶ್ವರಪ್ಪನವರು ನಮ್ಮ ಪಕ್ಷದ ಹಿರಿಯ ಸಚಿವರು, ಯಡಿಯೂರಪ್ಪನವರನ್ನು ಭೇಟಿ ಮಾಡಿ ಮಾತಾಡಿರುವುದರಲ್ಲಿ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ ಎಂದಿದ್ದಾರೆ.

ಮೈಸೂರು ಗ್ಯಾಂಗ್ ರೇಪ್ ಪ್ರಕರಣ ಕುರಿತಂತೆ ಮಾತನಾಡಿದ ಅವರು, ಯಾರೇ ತಪ್ಪು ಮಾಡಿದ್ದರು ನಮ್ಮ ಸರ್ಕಾರ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳುತ್ತದೆ. ನಮ್ಮ ಗೃಹ ಸಚಿವ ಅರಗ ಜ್ಞಾನೇಂದ್ರರವರು ಅದಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿದ್ದಾರೆ. ಅಲ್ಲದೇ ಮುಖ್ಯಮಂತ್ರಿಗಳು ಸಹ ವಿಶೇಷ ಗಮನ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಗ್ಯಾಂಗ್‍ರೇಪ್ ಪ್ರಕರಣದ ಆರೋಪಿಗಳಲ್ಲಿ ಓರ್ವ ಮಾವನನ್ನೇ ಕೊಲೆ ಮಾಡಿದವನು!

ಗೃಹಮಂತ್ರಿ ತಾಲಿಬಾನ್ ಪ್ರತೀಕ ಎಂಬ ಕಾಂಗ್ರೆಸ್ ಮುಖಂಡ ಉಗ್ರಪ್ಪನವರ ಹೇಳಿಕೆ ಕುರಿತಂತೆ, ಆ ಹೇಳಿಕೆ ಬಗ್ಗೆ ನನಗೆ ಗೊತ್ತಿಲ್ಲ. ಗೃಹ ಸಚಿವರಿಗೆ ಗೊತ್ತು ಎಂದು ಜಾರಿಕೊಂಡಿದ್ದಾರೆ. ಜೊತೆಗೆ ಎಸ್‍ಬಿಎಂ ಸಚಿವರಲ್ಲಿ ಯಾವುದೇ ಅಸಮಾಧಾನವಿಲ್ಲ, ಅವರ ಕಚೇರಿ ಉದ್ಘಾಟನೆಗೆ ಹೋಗಿದ್ದೆ. ಸಚಿವ ಸ್ಥಾನ ಸಿಕ್ಕಿಲ್ಲ ಎನ್ನುವ ಬೇಸರವಿತ್ತು. ಇದೀಗ ಎಲ್ಲವು ಸರಿಯಾಗಿದೆ ಎಂದು ತಿಳಿಸಿದ್ದಾರೆ.

ಸೆಪ್ಟೆಂಬರ್ 2ಕ್ಕೆ ದಾವಣಗೆರೆಗೆ ಕೇಂದ್ರ ಗೃಹಸಚಿವ ಅಮಿತ್ ಶಾ ಆಗಮಿಸುತ್ತಿದ್ದು, ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕೊಂಡಜ್ಜಿಯಲ್ಲಿ ನಿರ್ಮಾಣವಾದ ಪೊಲೀಸ್ ವಸತಿ ಶಾಲೆಯನ್ನು ಅಮಿತ್ ಶಾ ಉದ್ಘಾಟನೆ ಮಾಡಲಿದ್ದಾರೆ. ಇದಲ್ಲದೆ ಸೆಪ್ಟಂಬರ್ 24, 25 ಹಾಗೂ 26 ರಂದು ದಾವಣಗೆರೆಯಲ್ಲಿ ಬಿಜೆಪಿ ರಾಜ್ಯ ಕಾರ್ಯಕರಣಿ ಸಭೆ ನಡೆಯಲಿದ್ದು, ಬಿ.ಎಲ್.ಸಂತೋಷ್, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಬಸವರಾಜ್ ಬೊಮ್ಮಾಯಿ, ಬಿಎಸ್.ಯಡಿಯೂರಪ್ಪ ಸೇರಿದಂತೆ ಪ್ರಮುಖ ನಾಯಕರು ಭಾಗಿಯಾಗಲಿದ್ದಾರೆ. ಇದನ್ನೂ ಓದಿ:ಗೃಹ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು: ಈಶ್ವರ್ ಖಂಡ್ರೆ

Share This Article
Leave a Comment

Leave a Reply

Your email address will not be published. Required fields are marked *