ಬೆಂಗಳೂರು: ಅಧಿಕಾರದ ಮದದಿಂದ ಸಚಿವ ಪ್ರಿಯಾಂಕ್ ಖರ್ಗೆ ಆರ್‌ಎಸ್‌ಎಸ್‌ಅನ್ನು ಬ್ಯಾನ್ ಮಾಡ್ತೀವಿ ಅಂತ ಹೇಳ್ತಿದ್ದಾರೆ. ಮೊದಲು ಪ್ರಿಯಾಂಕ್ ಖರ್ಗೆ ದೇಶದ ಕ್ಷಮೆ ಕೇಳಬೇಕು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ (B S Yediyurappa) ಕಿಡಿಕಾರಿದ್ದಾರೆ.
ಕೇಂದ್ರದಲ್ಲಿ ಕಾಂಗ್ರೆಸ್ (Congress) ಅಧಿಕಾರಕ್ಕೆ ಬಂದರೆ ಆರ್‌ಎಸ್‌ಎಸ್ ಬ್ಯಾನ್ ಮಾಡ್ತೀವಿ ಎಂಬ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಬಿಜೆಪಿ ಕಚೇರಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಪ್ರಿಯಾಂಕ್ ಖರ್ಗೆ ಅವರು ಅಧಿಕಾರದ ಮದದಿಂದ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್‌ಎಸ್‌ಎಸ್ ಬ್ಯಾನ್ ಮಾಡ್ತೀವಿ ಅಂತ ಹೇಳಿದ್ದಾರೆ. ಪ್ರಿಯಾಂಕ್ ಖರ್ಗೆ (Priyank Kharge) ಅವರೇ ಇಡೀ ದೇಶದ ಉದ್ದಗಲಕ್ಕೂ ಪ್ರಧಾನಿ ಮೋದಿ, ನಾನು ಸೇರಿದಂತೆ ಆರ್‌ಎಸ್‌ಎಸ್ ಗರಡಿಯಲ್ಲಿ ಬೆಳೆದಿದ್ದೇವೆ. ಮೊದಲು ನೀವು ಅಧಿಕಾರ ಬರುತ್ತೇವೆ ಅನ್ನೋದು ಕನಸಿನ ಮಾತು ಅಂತ ಲೇವಡಿ ಮಾಡಿದ್ದಾರೆ. ಇದನ್ನೂ ಓದಿ: ಮಂಗಳೂರು | ಲವ್-ಸೆಕ್ಸ್ ದೋಖಾ ಕೇಸ್ – ಬಿಜೆಪಿ ಪ್ರಭಾವಿ ಮುಖಂಡನ ಪುತ್ರ ಅರೆಸ್ಟ್
ಮುಂದಿನ ಚುನಾವಣೆಯಲ್ಲಿ ಪ್ರಧಾನಿ ಮೋದಿ (Narendra Modi) ಅವರು ಸ್ಪಷ್ಟ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರ್ತಾರೆ. ಪ್ರಿಯಾಂಕ್ ಅವರು ಇಂತಹ ಹುಚ್ಚು ಹೇಳಿಕೆ ಕೊಟ್ಟು ಜನರ ಮುಂದೆ ಹಗರುವಾಗಬೇಡಿ. ಇಂತಹ ಹೇಳಿಕೆ ಕೊಟ್ಟ ಪ್ರಿಯಾಂಕ್ ಖರ್ಗೆ ಇಡೀ ದೇಶದ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.