ಕುಡಿದ ಮತ್ತಿನಲ್ಲಿ ಪೊಲೀಸರ ಮೇಲೆ ಹಲ್ಲೆ – ಕಾಂಗ್ರೆಸ್ ಮಾಜಿ ಶಾಸಕನ ಪುತ್ರ ಅರೆಸ್ಟ್‌

Public TV
1 Min Read

ಕಾರವಾರ: ಕುಡಿದ ಮತ್ತಿನಲ್ಲಿ ಕರ್ತವ್ಯ ನಿರತ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ಮತ್ತು ಹಣದ ವಂಚನೆಯ ಪ್ರಕರಣದಲ್ಲಿ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ (Congress) ಮಾಜಿ ಶಾಸಕ ವಿ.ಎಸ್ ಪಾಟೀಲ್ ಅವರ ಪುತ್ರನನ್ನು ಶನಿವಾರ ರಾತ್ರಿ ಬೆಂಗಳೂರಿನಲ್ಲಿ ಮುಂಡಗೋಡು ಪೊಲೀಸರು (Mundgod Police) ಬಂಧಿಸಿದ್ದಾರೆ.

ಬಾಪುಗೌಡ ಪಾಟೀಲ್ (Bapugouda Patil) ಬಂಧಿತ ಆರೋಪಿ. 2011ರಲ್ಲಿ ಮುಂಡಗೋಡ ಅರಣ್ಯ ಇಲಾಖೆಯ ಐಬಿಯಲ್ಲಿ ಕುಡಿದ ಮತ್ತಿನಲ್ಲಿ15 ಜನರ ಜೊತೆ ಸೇರಿ ಎಎಸ್‌ಐ ಬಾಲಕೃಷ್ಣ ಪಾಲೇಕರ್ ಮೇಲೆ ಹಲ್ಲೆ ನಡೆಸಿದ್ದರು. ಇದಲ್ಲದೇ ಎರಡು ಚೆಕ್ ಬೌನ್ಸ್ ಪ್ರಕರಣ ಸೇರಿ ಬಾಪು ಗೌಡ ಪಾಟೀಲ್ ವಿರುದ್ಧ ಸೆಕ್ಷನ್ 353, 141,143, 147, 323, 353, 504, 506,149 ಅಡಿ ಪ್ರಕರಣ ಸಹ ದಾಖಲಾಗಿತ್ತು.

ನ್ಯಾಯಾಲಯಕ್ಕೆ ಹಾಜರಾಗದೇ ಕಳೆದ ಆರು ತಿಂಗಳಿಂದ ತಲೆಮರೆಸಿಕೊಂಡಿದ್ದ ಬಾಪುಗೌಡ ಪಾಟೀಲ್‌ನನ್ನು ಪೊಲೀಸರು ಶನಿವಾರ ಬಂಧಿಸಿ ಇಂದು ಮುಂಜಾನೆ ಮುಂಡಗೋಡಿನಲ್ಲಿ ನ್ಯಾಯಾಧೀಶರ ಮುಂದೆ ಹಾಜುರುಪಡಿಸಿದ್ದರು. ನ್ಯಾಯಾಧೀಶರು ನ್ಯಾಯಾಂಗ ಬಂಧನ ವಿಧಿಸಿದ್ದಾರೆ. ಆರೋಪಿಯನ್ನು ಶಿರಸಿ ಜೈಲಿಗೆ ಕಳುಹಿಸಲಾಗಿದೆ.

 

Share This Article