ಬೆಂಗಳೂರಿಗೆ ಯಲ್ಲೋ ಅಲರ್ಟ್ – ಮುಂದಿನ 3 ಗಂಟೆ ಭಾರೀ ಮಳೆ

Public TV
1 Min Read

ಬೆಂಗಳೂರು: ನಗರದ ಹಲವೆಡೆ ಮಳೆ ಆರಂಭವಾಗಿದ್ದು, ಮುಂದಿನ ಮೂರು ಗಂಟೆಗಳ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಇದನ್ನೂ ಓದಿ: ಹಲವು ಮಹಿಳೆಯರ ರೇಪ್‌, ವೀಡಿಯೋ ಮಾಡಿ ಸುಲಿಗೆ – ಪೊಲ್ಲಾಚಿ ಕೇಸ್‌ನ 9 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ನಗರದಾದ್ಯಂತ ಮೋಡ ಕವಿದ ವಾತಾವರಣವಿದ್ದು, ಔಟರ್ ರಿಂಗ್ ರೋಡ್ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಎಂ.ಜಿ ರೋಡ್, ಚಿನ್ನಸ್ವಾಮಿ ಸ್ಟೇಡಿಯಂ, ವಿಧಾನಸೌಧ, ಕೆ.ಆರ್ ಸರ್ಕಲ್, ಮೆಜೆಸ್ಟಿಕ್, ಕೆ.ಆರ್ ಮಾರ್ಕೆಟ್, ಟೌನ್ ಹಾಲ್ ಸೇರಿದಂತೆ ಹಲವು ಕಡೆ ಮಳೆ ಆರಂಭವಾಗಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ.

ಮುಂದಿನ ಮೂರು ಗಂಟೆಗಳ ಕಾಲ ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ಯಲ್ಲೋ ಅಲರ್ಟ್ ಘೋಷಿಸಲಾಗಿದೆ.ಇದನ್ನೂ ಓದಿ: ಬಾಯ್‌ಫ್ರೆಂಡ್ ಜೊತೆಗಿನ ಹಸಿಬಿಸಿ ಪ್ರಣಯದ ಫೋಟೋ ಹಂಚಿಕೊಂಡ ‘ಬಿಗ್ ಬಾಸ್’ ನಿಕ್ಕಿ

Share This Article