ನಾಳೆ ಮಾಜಿ ಸಚಿವ ವಿನಯ್ ಕುಲಕರ್ಣಿ ಭವಿಷ್ಯ – ಯೋಗೇಶ್‌ ಗೌಡ ಕೊಲೆ ಕೇಸ್‌ ತೀರ್ಪು

1 Min Read

ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ (Yogesh Gowda) ಕೊಲೆ ಪ್ರಕರಣದ ತೀರ್ಪನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಾಳೆ ಪ್ರಕಟಿಸಲಿದೆ.

ಕಳೆದ 6 ತಿಂಗಳಿಂದ ಪ್ರಕರಣದ ವಿಚಾರಣೆ ನಡೆಸುತ್ತಾ ಇದ್ದ ನ್ಯಾಯಾಲಯ ಸಂಪೂರ್ಣ ವಾದ-ಪ್ರತಿವಾದ ಆಲಿಸಿತ್ತು. ಮಾರ್ಚ್ ಕೊನೆಯ ವಾರದಲ್ಲಿ ವಾದ ಸಂಪೂರ್ಣವಾಗಿ ಆಲಿಸಿದ್ದ ನ್ಯಾಯಾಲಯ ಪ್ರಾಸಿಕ್ಯೂಷನ್ ಮತ್ತು ಆರೋಪಿಗಳ ಪರ ವಕೀಲರಿಗೆ ಹೆಚ್ಚುವರಿ ಲಿಖಿತ ವಾದ ಸಲ್ಲಿಕೆ ಮಾಡಲು ಅವಕಾಶ ನೀಡಿತ್ತು. ಏಪ್ರಿಲ್ 2 ರಂದು ಎಲ್ಲರೂ ಲಿಖಿತ ವಾದ ಸಲ್ಲಿಸಿದ ಬಳಿಕ ಏಪ್ರಿಲ್ 9 ಕ್ಕೆ ತೀರ್ಪು ಪ್ರಕಟ ಮಾಡುವುದಾಗಿ ಕೋರ್ಟ್ ಹೇಳಿತ್ತು. ತೀರ್ಪು ಪ್ರಕಟಣೆ ದಿನ ಎಲ್ಲಾ 21 ಆರೋಪಿಗಳು ನ್ಯಾಯಾಲಯದ ಮುಂದೆ ಹಾಜರಾಗಬೇಕಿದೆ. ಇದನ್ನೂ ಓದಿ: ಧಾರವಾಡ ಜಿಪಂ ಸದಸ್ಯನ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಜಾಮೀನು ರದ್ದು

ಏನಿದು ಪ್ರಕರಣ?
ರಾಜಕೀಯ ವೈಷಮ್ಯದಿಂದ ಧಾರವಾಡದಲ್ಲಿ 2016ರ ಜೂ.16ರಂದು ಯೋಗೇಶ್ ಗೌಡ ಅವರನ್ನು ಹತ್ಯೆ ಮಾಡಲಾಗಿತ್ತು. ಶಾಸಕ ವಿನಯ್ ಕುಲಕರ್ಣಿ ಮೇಲೆ ಅಪರಾಧಿಕ ಒಳಸಂಚು ಮಾಡಿದ ಆರೋಪವಿದೆ. 2019ರಲ್ಲಿ ರಾಜ್ಯ ಸರ್ಕಾರವು ಈ ಪ್ರಕರಣವನ್ನು ಸಿಬಿಐಗೆ ವರ್ಗಾವಣೆ ಮಾಡಿತ್ತು. ಈ ಬಗ್ಗೆ ತನಿಖೆ ಕೈಗೊಂಡ ಸಿಬಿಐ 2020ರಲ್ಲಿ ವಿನಯ್ ಕುಲಕರ್ಣಿ (Vinay Kulkarni) ಅವರನ್ನು ಬಂಧಿಸಿತ್ತು.

2071ರಲ್ಲಿ ಶಾಸಕ ವಿನಯ್ ಕುಲಕರ್ಣಿ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದಿದ್ದರು. ನಂತರ ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಕಳೆದ ವರ್ಷ ಜೂನ್‌ನಲ್ಲಿ ಸುಪ್ರೀಂ ಕೋರ್ಟ್ ಅವರ ಜಾಮೀನು ರದ್ದು ಮಾಡಿತ್ತು. ಹೀಗಾಗಿ, ಕಳೆದ 6 ತಿಂಗಳಿನಿಂದ ಜೈಲಿನಲ್ಲಿದ್ದರು. ಬಳಿಕ ಫೆ.27ರಂದು ಸುಪ್ರೀಂ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿತ್ತು. ಇದನ್ನೂ ಓದಿ: ಯೋಗೇಶ್‌ ಗೌಡ ಕೇಸ್‌ – ಮಾಜಿ ಸಚಿವ ವಿನಯ್‌ ಕುಲಕರ್ಣಿ ಸಹೋದರನಿಗೆ ಸಿಬಿಐ ಡ್ರಿಲ್‌

Share This Article