ಬೆಂಗಳೂರು/ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ (Yogesh Gowda) ಕೊಲೆ ಪ್ರಕರಣದ ಅಪರಾಧಿಗಳು ಇದೀಗ ಹೈಕೋರ್ಟ್ (High Court) ಮೆಟ್ಟಿಲೇರಿದ್ದಾರೆ. ವಿನಯ್ ಕುಲಕರ್ಣಿ ಸೇರಿ ಇಬ್ಬರು ಜೀವಾವಧಿ ಶಿಕ್ಷೆ ತೀರ್ಪಿಗೆ ತಡೆಯಾಜ್ಞೆ ಕೋರಿ ಮೇಲ್ಮನವಿ ಸಲ್ಲಿಸಿದ್ದಾರೆ.

ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶ ಪ್ರಶ್ನಿಸಿ ಅಪರಾಧಿ ವಿನಯ್ ಕುಲಕರ್ಣಿ (Vinay Kulkarni) ಮತ್ತು ಚಂದ್ರಶೇಖರ್ ಇಂಡಿ ಹೈಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ. ಜೀವಾವಧಿ ಶಿಕ್ಷೆ ತೀರ್ಪಿಗೆ ತಡೆಯಾಜ್ಞೆ ನೀಡಿ, ಅಮಾನತಿನಲ್ಲಿ ಇಡುವಂತೆ ಮನವಿ ಮಾಡಿಕೊಂಡಿದ್ದಾರೆ. ಈ ಅರ್ಜಿ (ಏ.27) ಸೋಮವಾರ ವಿಚಾರಣೆಗೆ ಬರುವ ಸಾಧ್ಯತೆಯಿದೆ.ಇದನ್ನೂ ಓದಿ: ವಿನಯ್ ಕುಲಕರ್ಣಿಗೆ ಜೀವಾವಧಿ |ತೀರ್ಪಿನಲ್ಲಿ ರಾಜಧರ್ಮದ ಪಾಠ – ಉಪನಿಷತ್ ಸಾರ ಉಲ್ಲೇಖ


ತೀರ್ಪು ಪ್ರಕಟವಾದ 90 ದಿನಗಳಲ್ಲಿ ತೀರ್ಪನ್ನು ಅಮಾನತಿನಲ್ಲಿ ಇಡದೇ ಹೋದರೆ ಶಾಸಕ ಸ್ಥಾನ ಅನರ್ಹ ಆಗುವ ಭಯದಲ್ಲಿ ವಿನಯ್ ಕುಲಕರ್ಣಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.

ಏನಿದು ಪ್ರಕರಣ?
2016ರಲ್ಲಿ ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆಯಾಗಿತ್ತು. ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಸೇರಿ ಒಟ್ಟು 21 ಮಂದಿ ಮೇಲೆ ಆರೋಪ ಕೇಳಿ ಬಂದಿತ್ತು. ಪ್ರಕರಣವನ್ನು ಬಿಜೆಪಿ ಸರ್ಕಾರ ಸಿಬಿಐಗೆ ಒಪ್ಪಿಸಿತ್ತು. ಇಂಚಿಂಚು ತನಿಖೆ ನಡೆಸಿದ್ದ ಸಿಬಿಐ ಚಾರ್ಜ್‌ಶೀಟ್ ಸಲ್ಲಿಸಿತ್ತು. 10 ವರ್ಷಗಳ ನಿರಂತರ ತನಿಖೆ, ವಿಚಾರಣೆ ಬಳಿಕ ಕೊಲೆ, ಕ್ರಿಮಿನಲ್ ಸಂಚು, ಸಾಕ್ಷ್ಯನಾಶ, ಮಾರಕಾಸ್ತ್ರಗಳಿಂದ ಹಲ್ಲೆ, ಅಕ್ರಮ ಕೂಟ ಆರೋಪದಡಿ ದೋಷಿ ಎಂದು ಜನಪ್ರತಿನಿಧಿಗಳ ಕೋರ್ಟ್ ಆದೇಶಿಸಿತ್ತು.ಇದನ್ನೂ ಓದಿ: ಯೋಗೀಶ್ ಗೌಡ ಕೊಲೆ ಕೇಸ್ – ವಿನಯ್ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
ಸೋಮಶೇಖರ್ ನ್ಯಾಮಗೌಡ ಹಾಗೂ ವಾಸುದೇವ್ ನಿಲೇಕಣಿಯನ್ನ ಕೋರ್ಟ್ ಖುಲಾಸೆಗೊಳಿತ್ತು. ಇನ್ನು ಇಬ್ಬರು ನಿರ್ದೋಷಿಗಳನ್ನ ಬಿಟ್ಟು ಉಳಿದವರನ್ನು ಸಿಬಿಐ ವಶಕ್ಕೆ ಪಡೆದಿತ್ತು. ಬಳಿಕ ಬೌರಿಂಗ್ ಆಸ್ಪತ್ರೆಯಲ್ಲಿ 17 ಅಪರಾಧಿಗಳ ವೈದ್ಯಕೀಯ ಪರೀಕ್ಷೆ ನಡೆಸಿ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಲಾಗಿತ್ತು. ಬಳಿಕ ಆದೇಶ ಪ್ರಕಟಿಸಿದ ಕೋರ್ಟ್ ಶಾಸಕ ವಿನಯ್ ಕುಲಕರ್ಣಿ ಸೇರಿ 16 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದ್ದು, ಇನ್‌ಸ್ಪೆಕ್ಟರ್ ಚನ್ನಕೇಶವ ಟಿಂಕರಿಕರ್‌ಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಯೋಗೀಶ್ ಗೌಡ ಕುಟುಂಬಕ್ಕೆ 16 ಲಕ್ಷ ಪರಿಹಾರ
ಟಿಂಕರಿಕರ್ ಕೊಲೆ ಪ್ರಕರಣದಲ್ಲಿ ಭಾಗಿಯಾಗದೇ ಇದ್ದರೂ, ಭ್ರಷ್ಟಾಚಾರ ಎಸಗಿದ್ದಾರೆ ಅನ್ನೋ ಆರೋಪ ಸಾಬೀತಾದ ಹಿನ್ನೆಲೆ ಕೋರ್ಟ್ 7 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ. ಇನ್ನುಳಿದಂತೆ ಬಸವರಾಜ್ ಮುತ್ತಗಿಗೆ ಮಾಫಿ ಸಾಕ್ಷಿ ಸ್ಥಾನ ಖಚಿತಪಡಿಸಿದೆ. ಮೃತ ಯೋಗೀಶ್ ಗೌಡ ಮಕ್ಕಳಿಗೆ 16 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಸೂಚನೆ ನೀಡಿದೆ.ಇದನ್ನೂ ಓದಿ: ಜೈಲಲ್ಲಿರೋ ತಂದೆ ವಿನಯ್ ಕುಲಕರ್ಣಿ ನೆನೆದು ಫೋಟೊ ಜೊತೆ ಭಾವನಾತ್ಮಕ ಪೋಸ್ಟ್ ಹಂಚಿಕೊಂಡ ಮಕ್ಕಳು

