ಯುಪಿಯಲ್ಲಿ ಪಡಿತರ ಯೋಜನೆ ವಿಸ್ತರಣೆ- 2ನೇ ಅವಧಿಯಲ್ಲಿ ಯೋಗಿ ಸರ್ಕಾರದ ಮೊದಲ ನಿರ್ಧಾರ

Public TV
1 Min Read

ಲಕ್ನೋ: ಉತ್ತರಪ್ರದೇಶದಲ್ಲಿ ಮುಂದಿನ ಮೂರು ತಿಂಗಳ ಕಾಲ ಉಚಿತ ಪಡಿತರ ಯೋಜನೆಯನ್ನು ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಜೂನ್‍ವರೆಗೆ ಉಚಿತ ಪಡಿತರ ಯೋಜನೆಯನ್ನು ಮುಂದುವರಿಸಲಾಗುತ್ತದೆ. ಇದರಿಂದಾಗಿ ರಾಜ್ಯದ 15 ಕೋಟಿ ಜನರಿಗೆ ಪ್ರಯೋಜನವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ಮುಂದುವರಿಸಲು ನಿರ್ಧರಿಸಿದ್ದೇವೆ. ಇದು ರಾಜ್ಯದ 15 ಕೋಟಿ ಜನರಿಗೆ ಪ್ರಯೋಜನವನ್ನು ನೀಡುತ್ತದೆ. ಈ ಯೋಜನೆಯು ಪ್ರತಿ ಮನೆಗೆ ತಿಂಗಳಿಗೆ ಹೆಚ್ಚುವರಿಯಾಗಿ ಐದು ಕಿ.ಗ್ರಾಂಗಳಷ್ಟು ಆಹಾರ ಧಾನ್ಯವನ್ನು ಒದಗಿಸುತ್ತದೆ. ಸಾಂಕ್ರಾಮಿಕ ರೋಗವು 2020ರಲ್ಲಿ ಬಂದಾಗ ಕೇಂದ್ರವು ಇದನ್ನು ಮೊದಲು ಜಾರಿಗೆ ತಂದಿತು ಎಂದು ತಿಳಿಸಿದರು. ಇದನ್ನೂ ಓದಿ: 2ನೇ ಬಾರಿ ಸಿಎಂ ಆಗಿ ‘ಬುಲ್ಡೋಜರ್ ಬಾಬಾ’ ಚುಕ್ಕಾಣಿ – ಮೋದಿ, ಬಿಜೆಪಿ ಸಿಎಂಗಳ ಸಮ್ಮುಖದಲ್ಲಿ ಪ್ರಮಾಣವಚನ

ಉತ್ತರಪ್ರದೇಶದಲ್ಲಿ ಮುಂದಿನ ಮೂರು ತಿಂಗಳ ಕಾಲ ಉಚಿತ ಪಡಿತರ ನೀಡಲಾಗುವುದು. ಬಡವರನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಂಡಿದ್ದೇವೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ನೀತಿಗಳು ಜನರಿಗೆ ತಲುಪಬೇಕು ಎಂದು ನೂತನ ಉಪಮುಖ್ಯಮಂತ್ರಿ ಬ್ರಿಜೇಶ್ ಪಾಠಕ್ ಹೇಳಿದರು. ಇದನ್ನೂ ಓದಿ: ಹಿಜಬ್ ವಿದ್ಯಾರ್ಥಿನಿಯರಿಗೆ ಶಾಕ್ – ಎಸ್‌ಎಸ್‌ಎಲ್‌ಸಿ ಪರಿಕ್ಷೆಗೆ ಸಮವಸ್ತ್ರ ಕಡ್ಡಾಯ

ಶುಕ್ರವಾರ ಲಕ್ನೋದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ದಾಖಲೆಯ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಯೋಗಿ ಆದಿತ್ಯನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆದ ಮೊದಲ ಕ್ಯಾಬಿನೆಟ್ ಸಭೆಯಲ್ಲಿ ಇಂದು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *