ಯುವನಟ ಶ್ರೇಯಸ್ ತಲ್ಪಾಡೆಗೆ ಹೃದಯಾಘಾತ

Public TV
1 Min Read

ಬಾಲಿವುಡ್ (Bollywood) ನ ಖ್ಯಾತ ಯುವನಟ ಶ್ರೇಯಸ್ ತಲ್ಪಾಡೆಗೆ (Shreyas Talpade) ಹೃದಯಾಘಾತವಾಗಿದೆ (Heart Attack). ಶೂಟಿಂಗ್ ಸಮಯದಲ್ಲಿ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು ಆರೋಗ್ಯ ತಪಾಸಣೆಗೆ ಒಳಗಾಗಿದ್ದಾರೆ. ಲಘು ಹೃದಯಾಘಾತವಾಗಿರುವ ಹಿನ್ನೆಲೆಯಲ್ಲಿ ಅವರನ್ನು ಮುಂಬೈನ ಅಂಧೇರಿ ಪ್ರದೇಶದ ಬೆಲ್ಲೆವ್ಯೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ನಿನ್ನೆ ರಾತ್ರಿ 10 ಗಂಟಗೆ ವೈದ್ಯರು ಆಂಜಿಯೋಪ್ಲಾಸ್ಟಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಆರೋಗ್ಯ ಸ್ಥಿರವಾಗಿದ್ದು, ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ನಡೆದಿದೆ ಎಂದು ವೈದ್ಯರು ತಿಳಿಸಿದ್ದಾರೆ. ಕೆಲವೇ ದಿನಗಳಲ್ಲೇ ನಟ ಮನೆಗೆ ವಾಪಸ್ಸಾಗಲಿದ್ದಾರೆ.

 

ಲಘು ಹೃದಯಾಘಾತವಾದಾಗ ಶ್ರೇಯಸ್ ವೆಲ್ ಕಲ್ ಟು ಜಂಗಲ್ ಸಿನಿಮಾದ  ಶೂಟಿಂಗ್ ನಲ್ಲಿ ಭಾಗಿಯಾಗಿದ್ದರು. ಹೃದಯಾಘಾತ ಸಂದರ್ಭದಲ್ಲಿ ಕುಸಿದು ಬಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ.

Share This Article