ಚಿಕ್ಕೋಡಿ: ಬಸ್ ಇಳಿಯುತ್ತಿದ್ದಂತೆ ಯುವಕನ ಮೇಲೆ ದುಷ್ಕರ್ಮಿಗಳು ಮಚ್ಚಿನಿಂದ ದಾಳಿ ನಡೆಸಿ ಕೊಚ್ಚಿ ಕೊಲೆಗೈದ ಪ್ರಕರಣ ಹುಕ್ಕೇರಿ (Hukkeri) ಶಹಾಬಂದರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮಹಾಂತೇಶ್ ಬುಕನಟ್ಟಿ (24) ಕೊಲೆಯಾದ ಯುವಕ ಎಂದು ತಿಳಿದು ಬಂದಿದೆ. ಯುವಕ ಕೆಲಸ ಮುಗಿಸಿ ಊರಿಗೆ ವಾಪಸ್ ಆಗಿದ್ದ. ಈ ವೇಳೆ ಬಸ್ ಇಳಿಯುತ್ತಿದ್ದಂತೆ ಹಿಂದಿನಿಂದ ಬಂದು ಮಚ್ಚಿನಿಂದ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಹಾಸನ | ಅಪ್ರಾಪ್ತನಿಂದ ಮಹಿಳೆಯ ಬರ್ಬರ ಹತ್ಯೆ
ಕೊಲೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಸ್ಥಳಕ್ಕೆ ಯಮಕನಮರಡಿ (Yemkanmardi) ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳದಲ್ಲಿ ಮತ್ತೆ ಅಸ್ಥಿಪಂಜರ ಸದ್ದು – ಬಂಗ್ಲೆಗುಡ್ಡದಲ್ಲಿ 5 ತಲೆಬುರುಡೆ, 113 ಮೂಳೆಗಳು ಪತ್ತೆ