ಕಲಬುರಗಿ: ಕಬ್ಬು ನಾಟಿ ಮಾಡುತ್ತಿದ್ದಾಗ ಸಿಡಿಲು(Thunder) ಬಡಿದು ಯುವ ರೈತ ಸಾವನ್ನಪ್ಪಿರುವ ಘಟನೆ ಕಲಬುರಗಿ (Kalaburagi) ಜಿಲ್ಲೆ ಚಿಂಚೋಳಿ (Chincholi) ತಾಲೂಕಿನ ಶಾದಿಪುರ ತಾಂಡಾದಲ್ಲಿ ನಡೆದಿದೆ.
ಮಹೇಶ್ ಚೌವ್ಹಾಣ್ (24) ಸಿಡಿಲಿಗೆ ಬಲಿಯಾದ ರೈತ. ಕಲಬುರಗಿ ಜಿಲ್ಲೆಯ ವಿವಿಧೆಡೆ ಇಂದು ಬಿರುಗಾಳಿ, ಗುಡುಗು ಸಹಿತ ಮಳೆಯಾಗಿದೆ. ಈ ವೇಳೆ ಜಮೀನಿನಲ್ಲಿ ಕಬ್ಬು ನಾಟಿ ಮಾಡಲೆಂದು ಹೋಗಿದ್ದ ಮಹೇಶ್ ಸಿಡಿಲಿಗೆ ಬಲಿಯಾಗಿದ್ದಾನೆ. ಇದನ್ನೂ ಓದಿ: ರಾಣೇಬೆನ್ನೂರಿನಲ್ಲಿ 3,200 ವರ್ಷಗಳ ಹಿಂದಿನ ಆದಿ ಮಾನವರ ಸಮಾಧಿ ಪತ್ತೆ
ಘಟನಾ ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಂಚಾವರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಎರಡು ಕುಟುಂಬದ ಮಧ್ಯೆ ಆಸ್ತಿ ವೈಷಮ್ಯ – ಅಪ್ರಾಪ್ತನಿಂದ ವ್ಯಕ್ತಿಯ ಕೊಲೆ

