ಮದುವೆಯಲ್ಲಿ ಡ್ಯಾನ್ಸ್ ಮಾಡುತ್ತಿದ್ದ 19ರ ಯುವಕ ಕುಸಿದು ಬಿದ್ದು ಸಾವು

Public TV
1 Min Read

ಹೈದರಾಬಾದ್: ಯುವಕನೊಬ್ಬ ಸಂಬಂಧಿಕರ ಮದುವೆಯಲ್ಲಿ (Wedding) ನೃತ್ಯ (Dance) ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ತೆಲಂಗಾಣದಲ್ಲಿ (Telangana) ನಡೆದಿದೆ.

ಮಹಾರಾಷ್ಟ್ರ ಮೂಲದ ಮುತ್ಯಂ (19) ಮೃತ ಯುವಕ. ತೆಲಂಗಾಣದ ನಿರ್ಮಲ್ ಜಿಲ್ಲೆಯ ಪಾರ್ಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮುತ್ಯುಂ ಸಂಬಂಧಿಕರ ವಿವಾಹ ಆರತಕ್ಷತೆಯಲ್ಲಿ ನೃತ್ಯ ಮಾಡುತ್ತಿದ್ದ.

ಈ ವೇಳೆ ಆತ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಪ್ರಜ್ಞೆ ತಪ್ಪಿದ್ದಾನೆ. ತಕ್ಷಣ ಮದುವೆಯಲ್ಲಿ ನೆರೆದಿದ್ದ ಅತಿಥಿಗಳು ಮುತ್ಯಂನನ್ನು ಭೈಂಸಾ ಏರಿಯಾ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಮಾರ್ಗ ಮಧ್ಯೆಯೇ ಮುತ್ಯುಂ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಇದನ್ನೂ ಓದಿ: ಬಿಎಸ್‍ವೈಗೆ ಹೈಕಮಾಂಡ್ ಬಹುಪರಾಕ್ – ಸಕ್ಸಸ್ ಆಗುತ್ತಾ ನಮೋ ಗೇಮ್‍ಪ್ಲಾನ್?

ಕಳೆದ 4 ದಿನಗಳಲ್ಲಿ ತೆಲಂಗಾಣದಲ್ಲಿ ನಡೆದ ಎರಡನೇ ಘಟನೆ ಇದಾಗಿದೆ. ಇದಕ್ಕೂ ಮೊದಲು, 24 ವರ್ಷದ ಪೊಲೀಸ್ ಪೇದೆಯೊಬ್ಬರು ಫೆ. 22ರಂದು ಹೈದರಾಬಾದ್‍ನ ಜಿಮ್‍ನಲ್ಲಿ ವ್ಯಾಯಾಮ ಮಾಡುವಾಗ ಹೃದಯ ಸ್ತಂಭನದಿಂದ ಸಾವನ್ನಪ್ಪಿದರು. ಇದನ್ನೂ ಓದಿ: UK ನಲ್ಲಿ ಕೆಲಸ ಕೊಡಿಸೋದಾಗಿ ಮಹಿಳೆಯರಿಗೆ ವಂಚನೆ- ಬೆಂಗ್ಳೂರಲ್ಲಿ ನೈಜೀರಿಯಾ ಪ್ರಜೆ ಅರೆಸ್ಟ್

Share This Article
Leave a Comment

Leave a Reply

Your email address will not be published. Required fields are marked *