ರಾತ್ರೋರಾತ್ರಿ ಮಾರಕಾಸ್ತ್ರಗಳಿಂದ ಯುವಕನನ್ನು ಕೊಲೆಗೈದು ಪರಾರಿಯಾದ್ರು!

Public TV
1 Min Read

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ದುಷ್ಕರ್ಮಿಗಳು ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ರಾಜಗೋಪಾಲ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಅನ್ನಪೂರ್ಣೇಶ್ವರಿ ನಗರದಲ್ಲಿ ನೆಡೆದಿದೆ.

ವಿನೋದ್ ಅಲಿಯಾಸ್ ನರಸಿಂಹ ಕೊಲೆಯಾದ ಯುವಕ. ಮಾರಕಾಸ್ತ್ರಗಳಿಂದ ಕೊಚ್ಚಿ ಹಂತಕರು ಕೊಲೆ ಮಾಡಿದ್ದಾರೆ. ಮಂಗಳವಾರ ರಾತ್ರಿ ಈ ಕೊಲೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

ಅನ್ನಪೂರ್ಣೇಶ್ವರಿ ನಗರದಲ್ಲಿ ಮೂರರಿಂದ ನಾಲ್ಕು ಜನರ ಗುಂಪು ಏಕಾಏಕಿ ನರಸಿಂಹನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ. ಹತ್ಯೆ ಮಾಡಿದ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ.

ಈ ಘಟನೆ ಸಂಬಂಧ ರಾಜಗೋಪಾಲ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲೆಯಾದ ವಿನೋದ್ ಮೇಲೆ ಕಳ್ಳತನ ಯತ್ನ ಸೇರಿ ಒಂದೆರಡು ಪ್ರಕರಣಗಳಿರುವುದು ಪತ್ತೆಯಾಗಿದೆ. ರಾಜಗೋಪಾಲ್ ನಗರ ಪೊಲೀಸರು ಹಂತಕರ ಬೆನ್ನು ಬಿದ್ದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *