4 ದಿನಗಳ ಹಿಂದಷ್ಟೇ ನಿಶ್ಚಿತಾರ್ಥ ಮಾಡ್ಕೊಂಡಿದ್ದ ಯುವತಿಯ ರೇಪ್ & ಮರ್ಡರ್!

By
1 Min Read

ಕಲಬುರಗಿ/ಯಾದಗಿರಿ: ಯುವತಿಯ ಮೇಲೆ ಅತ್ಯಾಚಾರ ಎಸಗಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಯಾದಗಿರಿ (Yadagiri) ತಾಲೂಕಿನ ಕಂಚಗಾರಹಳ್ಳಿ ಕ್ರಾಸ್ ಬಳಿ ನಡೆದಿದೆ.

ಸವಿತಾ ರಾಠೋಡ್ (35) ಕೊಲೆಯಾದ ಮೃತ ದುರ್ದೈವಿ. ಯಾದಗಿರಿ ತಾಲೂಕಿನ ಮುದ್ನಾಳ್ ತಾಂಡದ ನಿವಾಸಿಯಾಗಿರುವ ಈಕೆಯ ಯುವತಿಯ ಕುತ್ತಿಗೆ ಹಾಗೂ ಕಿವಿಗೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಇದನ್ನೂ ಓದಿ: ಮುಂಬೈ-ಗುವಾಹಟಿ ವಿಮಾನದಲ್ಲಿ ಅನುಚಿತವಾಗಿ ವರ್ತಿಸಿದ ಪ್ರಯಾಣಿಕ ಅರೆಸ್ಟ್

ಹೆತ್ತವರು ಇಲ್ಲದ ಕಾರಣ ವಿಕಲಚೇತನ ಸಹೋದರನ ಜೊತೆ ವಾಸವಾಗಿದ್ದ ಸವಿತಾ, ಕಳೆದ ನಾಲ್ಕೈದು ದಿನಗಳ ಹಿಂದೆಯಷ್ಟೆ ನಿಶ್ಚಿತಾರ್ಥ ಮಾಡಿಕೊಂಡಿದ್ದಳು. ಅಂತೆಯೇ ಎಂದಿನಂತೆ ಶನಿವಾರ ಕೂಡ ತನ್ನ ಜಮೀನಿಗೆ ಕೆಲಸ ಮಾಡಲು ಹೋದಾಗ ದುಷ್ಕರ್ಮಿಗಳು ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾರೆ.

ಚಾಕುವಿನಿಂದ ಇರಿದು ಬಿಸಾಕಿದ್ದ ಸವಿತಾಳನ್ನ ಗ್ರಾಮಸ್ಥರು ಕಲಬುರಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಇಂದು ನಸುಕಿನ ಜಾವ ಚಿಕಿತ್ಸೆ ಫಲಿಸದೆ ಕಲಬುರಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಇದನ್ನೂ ಓದಿ: ಪತಿಯಿಂದ್ಲೇ ಸುಪ್ರೀಂಕೋರ್ಟ್ ವಕೀಲೆಯ ಬರ್ಬರ ಹತ್ಯೆ

ಸಚಿನ್ ಎಂಬ ಯುವಕ ಕೊಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಯಾದಗಿರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್