ಮಂಡ್ಯ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ ಕನ್ನಹಳ್ಳಿ ಗ್ರಾಮದ ಬಳಿ ಜರುಗಿದೆ.
ಅಂಚೇದೊಡ್ಡಿ ಗ್ರಾಮದ ತಿಬ್ಬೇಗೌಡ(24) ಮೃತ ದುರ್ದೈವಿ. ತಿಬ್ಬೇಗೌಡ ಬೈಕ್‍ನಲ್ಲಿ ಮೈಸೂರಿಗೆ ತೆರಳುವ ವೇಳೆ ಈ ಘಟನೆ ನಡೆದಿದೆ. ಕನ್ನಹಳ್ಳಿ ಗ್ರಾಮದ ರಸ್ತೆಯಲ್ಲಿ ಹೋಗುವ ವೇಳೆ ಅಪರಿಚಿತ ವಾಹನ ಬೈಕ್‍ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಯುವಕನ ತಲೆಗೆ ಗಂಭೀರವಾಗಿ ಪೆಟ್ಟಾಗಿದ್ದು, ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ಅಪಘಾತವಾದ ತಕ್ಷಣ ವಾಹನ ಸವಾರ ವಾಹನ ನಿಲ್ಲಿಸದೇ ಪರಾರಿಯಾಗಿದ್ದಾನೆ. ಸ್ಥಳದಲ್ಲಿ ಯಾರು ಇಲ್ಲದ ಪರಿಣಾಮ ಯಾವ ವಾಹನ ಬೈಕ್‍ಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದಿಲ್ಲ. ಈ ಘಟನೆ ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.