ಕೆಂಗೇರಿ ಫ್ಲೈಓವರ್ ಬಳಿಯ ರೈಲ್ವೇ ಸೇತುವೆ ಕಂಬಿಗೆ ನೇಣು ಹಾಕ್ಕೊಂಡು ಯುವಕ ಆತ್ಮಹತ್ಯೆ

Public TV
0 Min Read

ಬೆಂಗಳೂರು: ನಗರದ ಕೆಂಗೇರಿಯ ಫ್ಲೈಓವರ್ ಬಳಿ ಅಪರಿಚಿತ ಯುವಕನೊಬ್ಬ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.

ಫ್ಲೈಓವರ್ ಬಳಿಯ  ರೈಲ್ವೇ ಬ್ರಿಡ್ಜ್ ನ ಕಂಬಿಯೊಂದಕ್ಕೆ ನೇಣು ಬಿಗಿದುಕೊಂಡು ಯುವಕ ಸಾವನ್ನಪ್ಪಿದ್ದಾನೆ. ಈತನಿಗೆ ಸುಮಾರು 25 ವರ್ಷ ವಯಸ್ಸಾಗಿರಬಹುದು ಎಂದು ಅಂದಾಜಿಸಲಾಗಿದೆ.

ಯುವಕನ ಗುರುತು ಪತ್ತೆಯಾಗಿಲ್ಲ. ಅಲ್ಲದೇ ಯುವಕನ ಆತ್ಮಹತ್ಯೆಗೆ ನಿಖರ ಕಾರಣವೂ ತಿಳಿದು ಬಂದಿಲ್ಲ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆ ಸಂಬಂಧ ಕೆಂಗೇರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸ್ಥಳಕ್ಕೆ ಕೆಂಗೇರಿ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *