ಮೈಸೂರು: ಖರ್ಚಿಗೆ ಹಣ ನೀಡಿಲ್ಲವೆಂದು ಕೋಪಗೊಂಡು ಮಂಗಳಮುಖಿಯರ (Transgender) ಮೇಲೆ ಯುವಕರು ತಲ್ವಾರ್ ನಿಂದ ಹಲ್ಲೆ ಮಾಡಿರುವ ಘಟನೆ ಮೈಸೂರಿನ (Mysuru) ಸಾತಗಳ್ಳಿ ಸಮೀಪದ ಅಮೃತ ಬಡಾವಣೆಯಲ್ಲಿ ನಡೆದಿದೆ.
ಆನಮ್ ಎಂಬ ಮಂಗಳಮುಖಿ ಬಳಿ ಅಮೃತ ಬಡಾವಣೆಯ ಕೆಲ ಯುವಕರು ಖರ್ಚಿಗೆ ಹಣ ಕೇಳಿದ್ದಾರೆ. ಇದಕ್ಕೆ ಆನಮ್ ನಿರಾಕರಿಸಿದಾಗ ಯುವಕರು ಗಲಾಟೆ ತೆಗೆದಿದ್ದಾರೆ. ಇದನ್ನೂ ಓದಿ: ಪ್ರೀತಿಸಿ ಮದುವೆಯಾದ ಒಂದೇ ತಿಂಗಳಲ್ಲಿ ಪತಿ ಸೂಸೈಡ್ – ಪತ್ನಿಯ ಕಿರುಕುಳಕ್ಕೆ ಮನನೊಂದು ಆತ್ಯಹತ್ಯೆ ಆರೋಪ
ಆಗ ಸ್ನೇಹಿತೆಯಾದ ಆನಮ್ ತನ್ನ ಸ್ನೇಹಿತೆ ಪಾರಿಯನ್ನು ಕರೆ ಮಾಡಿ ಕರೆಸಿಕೊಂಡಿದ್ದಾಳೆ. ಗೌಸಿಯಾನಗರದ ಪಾರಿ ಸ್ಥಳಕ್ಕೆ ಬಂದಾಗ ಯುವಕರು ಹಲ್ಲೆ ಮಾಡಿದ್ದಾರೆ.
ಈ ಸಂಬಂಧ ಮೈಸೂರಿನ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಲ್ಲೆ ನಡೆಸಿದ ಯುವಕರ ಬಂಧನಕ್ಕೆ ಶೋಧ ಕಾರ್ಯ ನಡೆದಿದೆ. ಇದನ್ನೂ ಓದಿ: ಹೊನ್ನಾಳಿಯಲ್ಲಿ ಸಿನಿಮೀಯ ರೀತಿಯ ದರೋಡೆ – ಕಾರು ಅಡ್ಡಗಟ್ಟಿ 38 ಲಕ್ಷ ರಾಬರಿ


