ಮಡಿಕೇರಿ: ಶ್ರೀ ಕ್ಷೇತ್ರ ಧರ್ಮಸ್ಥಳದ (Dharmasthal) ಬಗ್ಗೆ ಕೆಲ ಯೂಟ್ಯೂಬರ್‌ಗಳು ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಶ್ರೀ ಧರ್ಮಸ್ಥಳ ಭಕ್ತಾಭಿಮಾನಿ ವೇದಿಕೆ ಕೊಡಗಿನಲ್ಲಿ ಪ್ರತಿಭಟನೆ (Protest In Kodagu) ನಡೆಸಿದೆ.
ಮಡಿಕೇರಿ ನಗರದ (Madikeri City) ಗಾಂಧಿ ಮೈದಾನದಲ್ಲಿ ಸೇರಿದ ಧರ್ಮಸ್ಥಳ ಭಕ್ತಾಭಿಮಾನಿ ವೇದಿಕೆ ಸಂಘಟನೆಯ ಸದಸ್ಯರು, ಅಪಪ್ರಚಾರ ನಡೆಸುತ್ತಿರುವವರನ್ನ ಬಂಧಿಸುವಂತೆ ಆಗ್ರಹಿಸಿದ್ದಾರೆ. ಇದನ್ನೂ ಓದಿ: Dharmasthala Case | ಅಸ್ಥಿ ರಹಸ್ಯ ಭೇದಿಸಲು ಹೊರಟ ಎಸ್‌ಐಟಿ – 13ರ ಬದಲು 15ನೇ ಪಾಯಿಂಟ್‌ನಲ್ಲಿ ಶೋಧ
ಧರ್ಮಸ್ಥಳದಲ್ಲಿ ಈಗಾಗಲೇ ಎಸ್‌ಐಟಿ (SIT) ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಆ ತನಿಖೆ ಪೂರ್ಣಗೊಳ್ಳುವವರೆಗೆ ಎಲ್ಲರೂ ತಾಳ್ಮೆಯಿಂದ ಇರಬೇಕಾಗುತ್ತದೆ. ಆದ್ರೆ ಕೆಲವರು ಶ್ರೀಕ್ಷೇತ್ರದ ಬಗ್ಗೆ ಹಾಗೂ ಧರ್ಮಾಧಿಕಾರಿಗಳ ಬಗ್ಗೆ ಅಪಪ್ರಚಾರ ನಡೆಸುತ್ತಿದ್ದಾರೆ. ಅಲ್ಲದೇ ಹಿಂದೂ ದೇವಾಲಯದ ಮೇಲೆ ಬೌದ್ಧಿಕ ದಾಳಿ ನಡೆಸುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಕೇಸ್ | ಮಾನಹಾನಿಕರ ವರದಿ ಪ್ರಸಾರ ತಡೆ ಕೋರಿ ಅರ್ಜಿ – ರಾಜ್ಯದ ವಿಚಾರಣಾ ನ್ಯಾಯಾಲಯಕ್ಕೆ ವರ್ಗಾಯಿಸಿದ ಸುಪ್ರೀಂ
ಗಿರೀಶ ಮಟ್ಟಣ್ಣನವರ್ ಕೇವಲವಾಗಿ ಮಾತನಾಡುತ್ತಾ ಕೆಸರೆರಚುವ ಪ್ರಯತ್ನ ನಡೆಸುತ್ತಿದ್ದಾರೆ. ಇನ್ನೂ ಭಕ್ತರ ಮೌನಕ್ಕೆ ಅವಕಾಶ ಇಲ್ಲ. ಭಕ್ತವೃಂದ (Dharmasthala Devotees) ಎದ್ದು ನಿಂತಿದೆ. ಸುಳ್ಳು ಆರೋಪ ಮಾಡುವ ಯೂಟೂಬರ್‌ಗಳನ್ನ ಕೂಡಲೇ ಬಂಧಿಸಬೇಕು ಎಂದು ಅಕ್ರೋಶ ಹೋರಹಾಕಿದ್ದಾರೆ. ಇನ್ನೂ ಇದೇ ಸಂದರ್ಭ ಜಿಲ್ಲಾಧಿಕಾರಿ ವೆಂಕಟರಾಜ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಇದನ್ನೂ ಓದಿ: ನನಗೆ ಗನ್‌ಮ್ಯಾನ್ ಭದ್ರತೆ ನೀಡಿ: ಎಸ್‌ಐಟಿ ಮುಂದೆ ದೂರುದಾರನಿಂದ ಬೇಡಿಕೆ
ಯೂಟ್ಯೂಬರ್‌ಗಳ ಮೇಲೆ ಮಾರಣಾಂತಿಕ ಹಲ್ಲೆ
ಬುಧವಾರ (ಆ.6) ಸಂಜೆ ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ್ದರು. ಬಳಿಕ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು. ಇದೇ ವೇಳೆ ವರದಿ ಮಾಡಲು ಹೋಗಿದ್ದ ಖಾಸಗಿ ವಾಹಿನಿ ವರದಿಗಾರ ಹಾಗೂ ಕ್ಯಾಮೆರಾಮ್ಯಾನ್ ಮೇಲೆಯೂ ಹಲ್ಲೆ ನಡೆಸಲಾಗಿತ್ತು. ಧರ್ಮಸ್ಥಳ ಕ್ಷೇತ್ರ ಅಪಪ್ರಚಾರ ಸಹಿಸಲ್ಲ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದರು. ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿದ್ದಂತೆಯೇ ಪೊಲೀಸರು ಲಾಠಿಚಾರ್ಜ್ ಮಾಡಿ ಚದುರಿಸಲು ಪ್ರಯತ್ನಿಸಿದರು. ಆದರೆ, ಇದಕ್ಕೆ ಬಗ್ಗದ ಪ್ರತಿಭಟನಾಕಾರರು ಪೊಲೀಸ್ ಠಾಣೆ ಮುಂದೆ ಧರಣಿ ಕೂತಿದ್ದರು. ಕ್ಷೇತ್ರದ ತೇಜೋವಧೆ ಮಾಡುವವರನ್ನು ಬಂಧಿಸಿ ಎಂದು ಒತ್ತಾಯಿಸಿದ್ದರು. ಇದನ್ನೂ ಓದಿ: ಗಿರೀಶ್ ಮಟ್ಟಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಸಮೀರ್ ವಿರುದ್ಧ ಎಫ್‌ಐಆರ್ ದಾಖಲು