ಸೆಟ್ಟೇರಿತು ಯುವ ರಾಜ್‌ಕುಮಾರ್‌ 2ನೇ ಚಿತ್ರ- ರಿಲೀಸ್‌ ಡೇಟ್‌ ಅನೌನ್ಸ್‌ ಮಾಡಿದ ಚಿತ್ರತಂಡ

Public TV
3 Min Read

ಪಿ.ಆರ್.ಕೆ ಪ್ರೊಡಕ್ಷನ್ಸ್‌, ಜಯಣ್ಣ ಫಿಲಂಸ್, ಕೆ.ಆರ್.ಜಿ.ಸ್ಟುಡಿಯೋಸ್‌ ಸಹಯೋಗದಲ್ಲಿ ಮೂಡಿಬರುತ್ತಿರುವ ಯುವ ರಾಜ್‌ ಕುಮಾರ್‌ ಅವರ ಬಹುನಿರೀಕ್ಷಿತ ‘ಎಕ್ಕ’ ಸಿನಿಮಾಗೆ (Ekka Film) ಇಂದು (ನ.28) ಮುಹೂರ್ತವನ್ನು ಶ್ರೀ ಬಂಡೆ ಮಾಕಾಳಮ್ಮ ದೇವಸ್ಥಾನದಲ್ಲಿ ನೆರವೇರಿಸಿ, ಚಿತ್ರೀಕರಣವನ್ನು ಆರಂಭಿಸಿದೆ. ಇದನ್ನೂ ಓದಿ:ನಿಮ್ಮ ಪ್ರೀತಿಯನ್ನು ಹೃದಯದಲ್ಲಿ ಬಚ್ಚಿಟ್ಟುಕೊಳ್ಳುತ್ತೀನಿ- ರಶ್ಮಿಕಾರನ್ನು ಹೊಗಳಿದ ಅಲ್ಲು ಅರ್ಜುನ್

ವಿಜಯ್‌ ಕಿರಗಂದೂರ್‌ ಅವರ ಪತ್ನಿ ಶ್ರೀಮತಿ ಶೈಲಜಾ ವಿಜಯ್‌ ಕ್ಲಾಪ್‌ ಮಾಡುವ ಮೂಲಕ ‘ಎಕ್ಕ’ ಚಿತ್ರಕ್ಕೆ ನಾಂದಿ ಹಾಡಲಾಯಿತು, ಮೊದಲ ಶಾಟ್‌ ಅನ್ನು ಡಾಲಿ ಧನಂಜಯ್‌ ನಿರ್ದೇಶಿಸಿದ್ದು, ನಿರ್ಮಾಪಕ ಕಾರ್ತಿಕ್ ಗೌಡ ಅವರ ತಾಯಿ ಶ್ರೀಮತಿ ವಿಜಯಲಕ್ಷ್ಮೀ ರಾಮಕೃಷ್ಣ ಕ್ಯಾಮೆರಾ ಬಟನ್‌ ಆನ್‌ ಮಾಡುವ ಮೂಲಕ ಚಾಲನೆ ನೀಡಿದರು.

ಕಾಶ್ಮೀರ, ಬೆಂಗಳೂರು, ಮೈಸೂರು, ದೆಹಲಿ, ಕೋಲ್ಕತ್ತಾ, ಮುಂಬೈ ಸೇರಿದಂತೆ ಹಲವಾರು ಸ್ಥಳಗಳಲ್ಲಿ ‘ಎಕ್ಕ’ ಚಿತ್ರದ ಚಿತ್ರೀಕರಣ ನಡೆಯುವುದಾಗಿ ತಂಡ ಇಂದು ತಿಳಿಸಿದೆ. ಈ ಚಿತ್ರದ ನಿರ್ದೇಶಕ ರೋಹಿತ್‌ ಪದಕಿ ಮಾತನಾಡಿ, ‘ಎಕ್ಕ’ ಒಂದು ಮೆಗಾ ಚಿತ್ರವಾಗಿದ್ದು, ಇದರ ಜವಾಬ್ದಾರಿ ಹೊತ್ತಿರುವ ಹೆಮ್ಮೆ ನನಗಿದೆ. ಚಿತ್ರದ ಎಲ್ಲ ನಿರ್ಮಾಪಕರು, ಕನ್ನಡ ಜನರು, ಯುವ ರಾಜ್‌ ಕುಮಾರ್‌ ಮತ್ತು ಅವರ ಅಭಿಮಾನಿಗಳ ಎಲ್ಲರ ನಂಬಿಕೆಯನ್ನು ಈ ಚಿತ್ರ ಉಳಿಸಲಿದೆ, ಜನರ ಮೇಲೆ ಆಳವಾದ ಭಾವನಾತ್ಮಕ ಪ್ರಭಾವ ಬೀರಲಿದೆ ಎಂದು ತಿಳಿಸಿದರು.

ನಟ ಯುವ ರಾಜ್‌ ಕುಮಾರ್‌ (Yuva Rajkumar) ಮಾತನಾಡಿ, ತಾಯಿ ಆಶಿರ್ವಾದದೊಂದಿಗೆ, ಅಪ್ಪು ಚಿಕ್ಕಪ್ಪನ ಆಶಿರ್ವಾದದೊಂದಿಗೆ ಇವತ್ತು ‘ಎಕ್ಕ’ ಚಿತ್ರವನ್ನು ಆರಂಭಿಸಿದ್ದೇವೆ. ಮೂರು ಹೆಸರಾಂತ ನಿರ್ಮಾಣ ಸಂಸ್ಥೆಗಳೊಡನೆ, ರೋಹಿತ್ ಪದಕಿ ಅಂತಹ ದೊಡ್ಡ ನಿರ್ದೇಶಕರೊಡನೆ ಕೆಲಸ ಮಾಡುತ್ತಿರುವುದು ನನಗೆ ತುಂಬಾ ಖುಷಿ ಇದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಚಿತ್ರದ ನಾಯಕಿ ಸಂಪದಾ ಮಾತನಾಡಿ, ‘ಎಕ್ಕ’ ಚಿತ್ರದ ಆರಂಭ ಬಹಳ ಮಂಗಳಕರವಾಗಿ ನೆರವೇರಿರುವುದು ನನಗೆ ತುಂಬ ಸಂತೋಷವನ್ನುಂಟು ಮಾಡಿದೆ. ಚಿತ್ರೀಕರಣವನ್ನು ನಾನು ಕಾತುರವಾಗಿ ಎದುರು ನೋಡುತ್ತಿದೇನೆ ಎಂದು ತಿಳಿಸಿದರು. ಇದನ್ನೂ ಓದಿ:ನಿಮ್ಮ ಪ್ರೀತಿಯನ್ನು ಹೃದಯದಲ್ಲಿ ಬಚ್ಚಿಟ್ಟುಕೊಳ್ಳುತ್ತೀನಿ- ರಶ್ಮಿಕಾರನ್ನು ಹೊಗಳಿದ ಅಲ್ಲು ಅರ್ಜುನ್

 

View this post on Instagram

 

A post shared by Yuva Rajkumar (@yuva_rajkumar)

ರೋಹಿತ್‌ ಪದಕಿ ನಿರ್ದೇಶನದ ‘ಎಕ್ಕ’ ಒಬ್ಬ ಯುವಕನ ಕಥೆಯನ್ನು ಹೇಳುತ್ತದೆ. ಒಬ್ಬ ಮನುಷ್ಯನು ಭೂಗತ ಲೋಕಕ್ಕೆ ತುತ್ತಾದಾಗ, ಆತನಿಗೆ ಆಗುವ ಅನುಭವಗಳನ್ನು ಹೇಳುವ ಕಥೆಯೇ ಎಕ್ಕ ಸಿನಿಮಾ. ‘ಎಕ್ಕ’ ಚಿತ್ರದಲ್ಲಿ ಯುವ ರಾಜ್‌ ಕುಮಾರ್‌, ಸಂಪದಾ, ಅತ್ತುಲ್‌ ಕುಲಕರ್ಣೀ, ಶ್ರುತಿ ಕೃಷ್ಣ, ರಾಹುಲ್‌ ದೇವ್‌ ಶೆಟ್ಟಿ ಮುಂತಾದವರು ನಟಿಸಲಿದ್ದು, ಚಿತ್ರಿಕಥೆಯನ್ನು ರೋಹಿತ್‌ ಪದಕಿ ಮತ್ತು ವಿಕ್ರಮ್‌ ಹತ್ವಾರ್‌ ರಚಿಸಿರುತ್ತಾರೆ. ಚಿತ್ರಕ್ಕೆ ಸಂಗೀತವನ್ನು ಚರಣ್‌ ರಾಜ್‌ ಸಂಯೋಜಿಸಲಿದ್ದು, ಹಾಡುಗಳಿಗೆ ಸಾಹಿತ್ಯವನ್ನು ವಿ.ನಾಗೇಂದ್ರ ಪ್ರಸಾದ್‌, ನಾಗಾರ್ಜುನ ಶರ್ಮ, ಡಾಲಿ ಧನಂಜಯ, ರೋಹಿತ್‌ ಪದಕಿ ರಚಿಸಲಿದ್ದಾರೆ.

ಸತ್ಯ ಹೆಗಡೆ ಮುಖ್ಯ ಛಾಯಾಗ್ರಾಹಕರಾಗಿದ್ದು, ದೀಪು ಎಸ್‌ ಕುಮಾರ್‌ ಸಂಕಲನಕಾರರಾಗಲಿದ್ದಾರೆ. ವಿಶ್ವಾಸ್‌ ಕಶ್ಯಪ್‌ ಪ್ರೊಡಕ್ಷನ್‌ ವಿನ್ಯಾಸವನ್ನು ಮಾಡಲಿದ್ದಾರೆ. ಚಿತ್ರದ ಫೈಟ್ಸ್‌ಗಳನ್ನು ಅರ್ಜುನ್‌ ರಾಜ್‌ ಮತ್ತು ಚೇತನ್‌ ಡಿಸೌಜಾ಼ ನಿರ್ದೇಶಿಸಲಿದ್ದಾರೆ. ಈ ಚಿತ್ರವನ್ನು ಶ್ರೀಮತಿ ಅಶ್ವಿನಿ ಪುನೀತ್‌ ರಾಜ್‌ ಕುಮಾರ್‌ ಪಿ.ಆರ್.ಕೆ ಪ್ರೊಡಕ್ಷನ್ಸ್‌ ಲಾಂಛನದಡಿಯಲ್ಲಿ, ಜಯಣ್ಣ ಮತ್ತು ಭೋಗೇಂದ್ರ ಜಯಣ್ಣ ಫಿಲಂಸ್‌ ಲಾಂಛನದಡಿಯಲ್ಲಿ‌ ಹಾಗು ಕಾರ್ತಿಕ್‌ ಗೌಡ ಮತ್ತು ಯೋಗಿ ಜಿ ರಾಜ್‌ ಕೆ.ಆರ್.ಜಿ.ಸ್ಟುಡಿಯೋಸ್‌ ಲಾಂಛನದಡಿಯಲ್ಲಿ ನಿರ್ಮಿಸಲ್ಲಿದ್ದಾರೆ. ‘ಎಕ್ಕ’ ಚಿತ್ರವು ಜೂನ್ 6 , 2025 ರಂದು ತೆರೆ ಕಾಣುವುದಾಗಿ ಚಿತ್ರತಂಡ ತಿಳಿಸಿದೆ. ಈ ಚಿತ್ರವು ಕನ್ನಡ ಚಿತ್ರರಂಗದಲ್ಲಿ ಹೊಸ‌ ಮೈಲಿಗಲ್ಲನ್ನು ಸಾಧಿಸಲಿದೆ ಎಂಬ ಆಶ್ವಾಸನೆಯನ್ನು ಚಿತ್ರ ತಂಡ ನೀಡಿದೆ.

Share This Article