ಕನ್ನಡ ಚಿತ್ರರಂಗದ ಭರವಸೆ ನಟ ಯುವ ರಾಜ್‌ಕುಮಾರ್ (Yuva Rajkumar) ಹುಟ್ಟುಹಬ್ಬದ ಅಂಗವಾಗಿ ನಿನ್ನೆ (ಏ.23) ಬಿಡುಗಡೆಯಾಗಬೇಕಿದ್ದ ಯುವ ಟೀಸರ್ ಇಂದು ಅನಾವರಣ ಮಾಡಲಾಗಿದೆ. ಪಹಲ್ಗಾಮ್ ಉಗ್ರರ ದಾಳಿಯಲ್ಲಿ ತಮ್ಮ ಕುಟುಂಬದವರನ್ನು ಕಳೆದುಕೊಂಡವರಿಗೆ ಗೌರವ ಸೂಚಿಸುವ ಸಲುವಾಗಿ ಚಿತ್ರತಂಡ ಟೀಸರ್ ಬಿಡುಗಡೆ ಮುಂದೂಡಿತ್ತು. ಇಂದು (ಏ.24) ಅಣ್ಣಾವ್ರ ಜನ್ಮದಿನದ ಜೊತೆಗೆ ಯುವ ಬರ್ತಡೇಗೆ ಸ್ಪೆಷಲ್ ಆಗಿಯೇ ಟೀಸರ್ ರಿಲೀಸ್ ಆಗಿದೆ. ಇದನ್ನೂ ಓದಿ:ಸೆಟ್ಟೇರಿತು ಯುವ ರಾಜ್‌ಕುಮಾರ್ 2ನೇ ಚಿತ್ರ- ರಿಲೀಸ್ ಡೇಟ್ ಅನೌನ್ಸ್ ಮಾಡಿದ ಚಿತ್ರತಂಡ
1 ನಿಮಿಷ 9 ಸೆಕೆಂಡ್ ಇರುವ ‘ಯುವ’ ಟೀಸರ್ ಸಖತ್ ಆಗಿ ಮೂಡಿ ಬಂದಿದೆ. ಹೊಸ ಅವತಾರದಲ್ಲಿ ಯುವ ರಾಜ್‌ಕುಮಾರ್ ಎಂಟ್ರಿ ಕೊಟ್ಟಿದ್ದಾರೆ. ಮಸ್ತ್ ಆಗಿ ಡೈಲಾಗ್ ಹೊಡೆಯುತ್ತಾ ಕೈಯಲ್ಲಿ ಪೊರಕೆ ಹಿಡಿದು ವಿಭಿನ್ನ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನೊಂದ್ ವಿಷ್ಯ ಇದು ಇಲ್ಲಿಗೆ ನಿಲ್ಲೋದಿಲ್ಲ ಅಂತ ಯುವ ಡೈಲಾಗ್ ಹೊಡೆದಿದ್ದಾರೆ. ಇದರಿಂದ ಸಿನಿಮಾ ಬಗೆಗಿನ ನಿರೀಕ್ಷೆ ಹೆಚ್ಚಿಸಿದೆ. ‘ಎಕ್ಕ’ (Ekka) ಚಿತ್ರದಲ್ಲಿ ಯುವ ನಟನೆ, ರೋಹಿತ್ ಪದಕಿ ನಿರ್ದೇಶನ, ಚರಣ್ ರಾಜ್ ಅವರ ಮ್ಯೂಸಿಕ್ ಕಿಕ್ ಈ ಚಿತ್ರದ ಟೀಸರ್ ತೂಕವನ್ನು ಮತ್ತಷ್ಟು ಹೆಚ್ಚಿಸಿದೆ. ಈಗಾಗಲೇ ‘ಯುವ’ ಸಿನಿಮಾದ ಟೈಟಲ್ ಟ್ರ್ಯಾಕ್ ಚಿಂದಿ ಉಡಾಯಿಸಿದ್ದು, ಈಗ ‘ಎಕ್ಕ’ ಟೀಸರ್ ಸರದಿ ಅಂತ ಫ್ಯಾನ್ಸ್ ಖುಷಿಪಡುತ್ತಿದ್ದಾರೆ. ಇದನ್ನೂ ಓದಿ: ಮಹಾಭಾರತ ಸಿನಿಮಾ ಮಾಡೋದಾಗಿ ಘೋಷಿಸಿದ ಆಮೀರ್ ಖಾನ್

View this post on Instagram
ಕಾರ್ತಿಕ್ ಗೌಡ ಹಾಗೂ ಯೋಗಿ ಜಿ ರಾವ್ ಅವರ ಕೆಆರ್‌ಜಿ ಸಂಸ್ಥೆ, ಜಯಣ್ಣ ಹಾಗೂ ಭೋಗೇಂದ್ರ ಅವರ ಜಯಣ್ಣ ಫಿಲ್ಮ್ಸ್, ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರ ಪಿಆರ್‌ಕೆ ಪ್ರೊಡಕ್ಷನ್ಸ್ ಈ ಸಿನಿಮಾವನ್ನು ಜಂಟಿಯಾಗಿ ನಿರ್ಮಾಣ ಮಾಡುತ್ತಿದೆ. ಈ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದ್ದು, ಜೂನ್ 6ರಂದು ‘ಎಕ್ಕ’ ಸಿನಿಮಾ ರಿಲೀಸ್ ಆಗಲಿದೆ.

