ನಿಖಿಲ್ ಕುಮಾರ್ ಸೆಟ್ ನಲ್ಲಿ ಕಾಣಿಸಿಕೊಂಡ ಯುವರಾಜ್

By
1 Min Read

ಬೆಂಗಳೂರಿನ ಸಪೋಟ ಗಾರ್ಡನ್ ನಲ್ಲಿ ನಿಖಿಲ್ ಕುಮಾರ್ (Nikhil Kumar) ನಟನೆಯ ಹೊಸ ಸಿನಿಮಾದ ಶೂಟಿಂಗ್ ನಡೆಯುತ್ತಿದ್ದು, ಚಿತ್ರೀಕರಣ ಸ್ಥಳಕ್ಕೆ ಯುವರಾಜ ಕುಮಾರ್ (Yuva Rajkumar) ಮತ್ತು ನಿರ್ದೇಶಕ ಸಂತೋಷ್ ಆನಂದ್ ರಾಮ್ ಭೇಟಿ ಮಾಡಿದ್ದಾರೆ. ಪ್ರತಿಷ್ಠಿತ ಲೈಕಾ ಸಂಸ್ಥೆ ನಿರ್ಮಾಣದ ಇನ್ನೂ ಹೆಸರಿಡದ ಸಿನಿಮಾ ಶೂಟಿಂಗ್ ನಲ್ಲಿ ನಿಖಿಲ್ ಬ್ಯುಸಿಯಾಗಿದ್ದಾರೆ. ಈ ಸಮಯದಲ್ಲಿ ಕನ್ನಡದ ಅನೇಕ ನಟರು ಶೂಟಿಂಗ್ ಸ್ಥಳಕ್ಕೆ ಭೇಟಿ ನೀಡಿ ವಿಶ್ ಮಾಡುತ್ತಿದ್ದಾರೆ.

ಇತ್ತೀಚೆಗಷ್ಟೇ ಶಿವಣ್ಣ ಹಾಗೂ ಧ್ರುವ ಸರ್ಜಾ, ನಿಖಿಲ್ ಸಿನಿಮಾ ಸೆಟ್ ಗೆ ಭೇಟಿ ನೀಡಿದ್ದರು ಇದೀಗ ದೊಡ್ಮನೆ ನಟ ಯುವ ಭೇಟಿ ಕೊಟ್ಟಿದ್ದಾರೆ. ಸೆಟ್ ನಲ್ಲಿ ಕೆಲ ಸಮಯ ಮಾತುಕಥೆ ನಡೆಸಿದ ನಿಖಿಲ್, ಯುವ ಮತ್ತು ಸಂತೋಷ್ ಆನಂದ್ ರಾಮ್ ಸಿನಿಮಾಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಸಿನಿಮಾ ರಂಗದ ಹಲವಾರು ವಿಚಾರಗಳನ್ನು ನಿಖಿಲ್ ಮತ್ತು ಯುವರಾಜ್ ಕುಮಾರ್ ಹಂಚಿಕೊಂಡಿದ್ದಾರೆ.

 

ಸಂತೋಷ್ ಆನಂದ್ ರಾಮ್  (Santhosh Anand Ram) ನಿರ್ದೇಶನದ, ಹೊಂಬಾಳೆ ಸಂಸ್ಥೆ ನಿರ್ಮಾಣದ ಯುವ ಸಿನಿಮಾದಲ್ಲಿ ಯುವರಾಜ್ ಕುಮಾರ್ ನಟಿಸುತ್ತಿದ್ದಾರೆ. ಮೈಸೂರಿನಲ್ಲಿ ಹಲವು ದಿನಗಳಿಂದ ಶೂಟಿಂಗ್ ನಡೆಯುತ್ತಿತ್ತು. ಆ ಭಾಗದ ಶೂಟಿಂಗ್ ಮುಗಿಸಿಕೊಂಡು ಇದೀಗ ಚಿತ್ರತಂಡ ಬೆಂಗಳೂರಿಗೆ ಬಂದಿಳಿದೆ.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್