ನಾನು ಯಾವತ್ತಿದ್ದರೂ ಸಿದ್ದರಾಮಯ್ಯ ಪರ, ಸಚಿವರ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟಿದ್ದು: ಜಮೀರ್ ಅಹ್ಮದ್

Public TV
2 Min Read

ಬೆಂಗಳೂರು: ಎರಡೂವರೆ ವರ್ಷದ ಬಳಿಕ ಪವರ್ ಶೇರಿಂಗ್ ಆಗುವ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ಈ ವಿಚಾರದಲ್ಲಿ ನಾನು ಸಿದ್ದರಾಮಯ್ಯ (Siddaramaiah) ಪರ ಎಂದು ಸಚಿವ ಜಮೀರ್ ಅಹ್ಮದ್ (Zameer Ahmed) ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ. ಈ ವೇಳೆ ಎರಡೂವರೆ ವರ್ಷದ ಬಳಿಕ ಡಿ.ಕೆ ಶಿವಕುಮಾರ್ ಸಿಎಂ ಆಗುತ್ತಾರೆ ಎಂಬ ಶಾಸಕರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಪವರ್ ಶೇರಿಂಗ್ ಬಗ್ಗೆ ಯಾವುದೇ ಚರ್ಚೆ ಅಗಿಲ್ಲ. ಇದು ಮಾಧ್ಯಮಗಳ ಸೃಷ್ಟಿ, ಬಿಜೆಪಿಗರು (BJP) ಏನೇ ತಿಪ್ಪರಲಾಗ ಹಾಕಿದರೂ ಏನು ಮಾಡಲು ಸಾಧ್ಯವಿಲ್ಲ. ನಾವೆಲ್ಲ ಒಗ್ಗಟ್ಟಾಗಿ, ಒಂದಾಗಿ ಇದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ನಮ್ಮ ಮೆಟ್ರೋಗೆ ಬಸವಣ್ಣನವರ ಹೆಸರು ಇಡಬೇಕು: ಎಂ.ಬಿ ಪಾಟೀಲ್

ನಮ್ಮ ಪಕ್ಷ (Congress) ಹೈಕಮಾಂಡ್ ಪಕ್ಷವಾಗಿದೆ. ಈ ವಿಚಾರದಲ್ಲಿ ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತದೆಯೋ ಅದಕ್ಕೆ ಯಾರು ವಿರೋಧ ಮಾಡುವುದಿಲ್ಲ. ಈ ವಿಚಾರದಲ್ಲಿ ನಾವು ನಮ್ಮ ಅಭಿಪ್ರಾಯವನ್ನು ಹೇಳಬಹುದು ಅಷ್ಟೇ ಎಂದಿದ್ದಾರೆ.

ನಾನು ಯಾವತ್ತೂ ಸಿದ್ದರಾಮಯ್ಯ ಪರವಾಗಿ ಇರುತ್ತೇನೆ. ಇವತ್ತು ನಾನು ಸಿದ್ದರಾಮಯ್ಯ ಪರನೇ ಇದ್ದೇನೆ. ನಾನು ತೀರ್ಮಾನ ತೆಗೆದುಕೊಳ್ಳಲು ಆಗುತ್ತದೆಯೇ? ನಮ್ಮ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರು ಏನು ನಿರ್ಧಾರ ಮಾಡುತ್ತಾರೋ ಅದಕ್ಕೆ ನಾವು ಬದ್ಧ ಎಂದು ಹೇಳಿದ್ದಾರೆ.

ಸಿಎಂ ಬದಲಾವಣೆ ಇಲ್ಲ ಎಂಬ ಸಚಿವ ಮಹದೇವಪ್ಪ ಹೇಳಿಕೆ ವಿಚಾರವಾಗಿ, ಶಾಸಕರು ಅವರ ಅಭಿಪ್ರಾಯ ಹೇಳಿದ್ದಾರೆ. ಅಂತಿಮವಾಗಿ ಇದೆಲ್ಲ ನಿರ್ಧರಿಸುವುದು ಹೈಕಮಾಂಡ್, ಅವರು ನಾಳೆ ನನ್ನನ್ನು ತೆಗೆಯಬೇಕು ಎಂದರೆ ತೆಗೆಯಬೇಕು ಅಷ್ಟೇ. ಸಚಿವರ ಬದಲಾವಣೆ ವಿಚಾರ ಅವರಿಗೆ ಬಿಟ್ಟಿದ್ದು ಎಂದಿದ್ದಾರೆ.

ಸಚಿವ ಪರಮೇಶ್ವರ್ ಮನೆಯಲ್ಲಿ ಸಿಎಂ ಸಭೆ ವಿಚಾರಕ್ಕೆ, ಡಿನ್ನರ್ ಮೀಟಿಂಗ್ ಮಾಡೋದು ತಪ್ಪಾ?ಮಾಧ್ಯಮದವರು ಏನೇನೋ ಸೃಷ್ಟಿ ಮಾಡಿಕೊಳ್ಳುತ್ತಿದ್ದಾರೆ. ನನ್ನ ಮನೆಯಲ್ಲೂ ಡಿನ್ನರ್ ಕರೆಯುತ್ತೇನೆ. ಸತೀಶ್ ಜಾರಕಿಹೊಳಿ ನನ್ನನ್ನು ಕರೆದಿದ್ದರು. ನಾನು ಊರಲ್ಲಿ ಇರಲಿಲ್ಲ ಅದಕ್ಕೆ ಹೋಗಿರಲಿಲ್ಲ. ಊಟಕ್ಕೆ ಸೇರೋದು ತಪ್ಪಾ? ಎಂದು ಅವರು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ರಾಜಕೀಯ ಪಕ್ಷಗಳ ಹಣದ ಬಗ್ಗೆ ತಿಳಿದುಕೊಳ್ಳುವ ಹಕ್ಕು ಮತದಾರರಿಗೆ ಇಲ್ಲ- ಸುಪ್ರೀಂಗೆ ಕೇಂದ್ರ ಸರ್ಕಾರದ ಹೇಳಿಕೆ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್