ಹೆಚ್‌ಡಿಕೆ ಬಣ್ಣದ ಬಗ್ಗೆ ಜಮೀರ್ ಮಾತಾಡಿದ್ದು ಸರಿಯಲ್ಲ- ಪ್ರಿಯಾಂಕ್ ಖರ್ಗೆ

Public TV
1 Min Read

ಬೆಂಗಳೂರು : ಕುಮಾರಸ್ವಾಮಿ (HD Kumaraswamy) ಬಣ್ಣದ ಬಗ್ಗೆ ಜಮೀರ್ (Zameer Ahmed) ಮಾತಾಡಿದ್ದು ಸರಿಯಲ್ಲ ಎಂದು ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಪ್ರತಿಕ್ರಿಯೆ ನೀಡಿದ್ದಾರೆ.

ಜಮೀರ್ ಹೇಳಿಕೆ ಬಗ್ಗೆ ಈಗಾಗಲೇ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ಅವರು ಹಾಗೆ ಮಾತನಾಡುವುದು ಸರಿಯಲ್ಲ. ಯಾರೂ ವೈಯಕ್ತಿಕವಾಗಿ ನಿಂದನೆ ಮಾಡಬಾರದು ಅಂತ ಹೇಳಿದ್ದಾರೆ ಎಂದರು.

 

ಬಿಜೆಪಿ ಶಾಸಕ ಅರಗ ಜ್ಞಾನೇಂದ್ರ ಮಲ್ಲಿಕಾರ್ಜುನ ಖರ್ಗೆ ಬಗ್ಗೆ ಮಾತಾಡಿದ್ರು. ಖರ್ಗೆ ಮುಖ ಸುಟ್ಟು ಹೋದ ಹಾಗೆ ಕಾಣುತ್ತೆ. ಅವರ ಚರ್ಮ ಸುಟ್ಟು ಹೋಗಿದೆ, ಬ್ಲ್ಯಾಕ್ ಆಗಿದೆ ಅಂತ ಮಾತಾಡಿದ್ರು. ಆಗ ಯಾಕೆ ಬಿಜೆಪಿ-ಜೆಡಿಎಸ್ ನವರು ಅದನ್ನ ವಿರೋಧ ಮಾಡಲಿಲ್ಲ. ಅರಗ ಜ್ಞಾನೇಂದ್ರ ವಿರುದ್ದ ಏನಾದ್ರು ಮಾಡಿದ್ರಾ? ಇದು ರಾಷ್ಟ್ರೀಯ ಸುದ್ದಿ ಆಯ್ತಾ ಎಂದು ಪ್ರಶ್ನೆ ಮಾಡಿದರು.  ಇದನ್ನೂ ಓದಿ: ʼ40% ಕಮಿಷನ್ ಆರೋಪ ಸುಳ್ಳುʼ – ಪ್ರಶ್ನೆ ಕೇಳಿದ್ದಕ್ಕೆ ಸಿಡಿಮಿಡಿಗೊಂಡ ಸಿಎಂ

ಜಮೀರ್ ಹೇಳಿಕೆಗೆ ನಾನು ಸಮರ್ಥನೆ ಮಾಡುವುದಿಲ್ಲ. ಈಗಾಗಲೇ ಸಿಎಂ, ಡಿಸಿಎಂ, ವರಿಷ್ಠರು ಚರ್ಚೆ ಮಾಡಿದ್ದಾರೆ. ಯಾರು ಕೂಡಾ ಬಣ್ಣದ ಬಗ್ಗೆ, ಹಾವ-ಭಾವದ ಬಗ್ಗೆ ಮಾತನಾಡುವುದು ಸರಿಯಲ್ಲ ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದರು.

 

Share This Article