ಮೋದಿ ಸರ್ಕಾರಕ್ಕೆ ಸೊನ್ನೆ ಅಂಕ: ಸಿದ್ದರಾಮಯ್ಯ

Public TV
1 Min Read

ಮೈಸೂರು: ಮೋದಿ (Narendra Modi) ಸರ್ಕಾರಕ್ಕೆ ಹತ್ತರಲ್ಲಿ ಸೊನ್ನೆ ಅಂಕ ಕೊಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹೇಳಿದ್ದಾರೆ.

ಮೋದಿ 3.0 ಸರ್ಕಾರ ಒಂದು ವರ್ಷ ಪೂರೈಸಿದ ಕುರಿತು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೋದಿ ಸರ್ಕಾರ ಪ್ರಚಾರದಿಂದ ಬದುಕಿದೆ. ನೋಟು ಅಮಾನ್ಯೀಕರಣದಿಂದ ಯಾರಿಗೆ ಅನುಕೂಲವಾಗಿದೆ? ಅಚ್ಚೇ ದಿನ್ ಆಯೇಗಾ ಅಂದಿದ್ರು, ಅಚ್ಚೇ ದಿನ್ ಬಂತಾ? ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಕೊಡುತ್ತೇನೆ ಎಂದಿದ್ದರು, ಉದ್ಯೋಗ ಕೊಟ್ಟರಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಕಳ್ಳತನ ಮಾಡಲು ಬಾರದಿದ್ದಕ್ಕೆ ವ್ಯಕ್ತಿಗೆ ಚಾಕು ಇರಿತ

ಮೋದಿ ಸರ್ಕಾರ ಪ್ರಮುಖವಾಗಿ ಏನು ಹೇಳಿದ್ದರೋ ಅದನ್ನು ಮಾಡಿಲ್ಲ. ಹನ್ನೊಂದು ವರ್ಷ ತುಂಬಿಸಿದ್ದಾರೆ ಅಷ್ಟೇ. ಮಾಧ್ಯಮಗಳು ಅವರಿಗೆ ಹೆಚ್ಚಿನ ಪ್ರಚಾರ ನೀಡುತ್ತಿವೆ. ಅವುಗಳ ಮೂಲಕ ಸುಳ್ಳು ವಿಚಾರಗಳಿಗೆ ಪ್ರಚಾರ ಸಿಗುತ್ತಿದೆ ಅಷ್ಟೇ. ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದಾಗ ಇದನ್ನು ಅನುಷ್ಠಾನ ಮಾಡಲಾಗುವುದಿಲ್ಲ, ರಾಜ್ಯ ಸರ್ಕಾರ ದಿವಾಳಿಯಾಗುತ್ತದೆ ಎಂದವರು ಅದನ್ನೇ ನಕಲು ಮಾಡಿ ರಾಜಸ್ಥಾನ, ಉತ್ತರ ಪ್ರದೇಶ, ದೆಹಲಿಯಲ್ಲಿ ಅದನ್ನೇ ಜಾರಿ ಮಾಡಿದರು ಎಂದು ಟೀಕಿಸಿದರು. ಇದನ್ನೂ ಓದಿ: ನೀವು ರಾಜ್ಯದ ಮುಖ್ಯಮಂತ್ರಿಗಳೋ or ವಿಧಾನಸೌಧ ಮೆಟ್ಟಿಲುಗಳ ಮುಖ್ಯಮಂತ್ರಿಗಳೋ: ಸಿದ್ದರಾಮಯ್ಯಗೆ ಹೆಚ್‌ಡಿಕೆ ಟಾಂಗ್‌

Share This Article