ಕೇರಳ ನಂತ್ರ ಚಿಕ್ಕಬಳ್ಳಾಪುರದಲ್ಲಿ ಮಾರಕ ಝಿಕಾ ವೈರಸ್‌ ಪತ್ತೆ – ಸ್ಥಳೀಯರಲ್ಲಿ ಭೀತಿ

Public TV
1 Min Read

ಚಿಕ್ಕಬಳ್ಳಾಪುರ: ಕೆಲ ದಿನಗಳ ಹಿಂದೆಯಷ್ಟೇ ಕೇರಳದ ಕೋಝಿಕೋಡ್‌ನಲ್ಲಿ ಪತ್ತೆಯಾಗಿ ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದ ಝಿಕಾ ವೈರಸ್‌ (Zika Virus) ಇದೀಗ ಚಿಕ್ಕಬಳ್ಳಾಪುರದಲ್ಲಿ (Chikkaballapur) ಪತ್ತೆಯಾಗಿದೆ. ಆರೋಗ್ಯ ಇಲಾಖೆ ಹೈಅಲರ್ಟ್‌ ಆಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟ ಗ್ರಾಮದಲ್ಲಿ ಸೊಳ್ಳೆಗಳನ್ನ ಪರೀಕ್ಷೆಗೆ ಒಳಪಡಿಸಿದಾಗ ಸೊಳ್ಳೆಗಳಲ್ಲಿ ಝಿಕಾ ವೈರಸ್ ಇರೋದು ಧೃಡವಾಗಿದೆ. ಇದನ್ನೂ ಓದಿ: ಹಾಸನಾಂಬ ಜಾತ್ರಾ ಮಹೋತ್ಸವಕ್ಕೆ ಕ್ಷಣಗಣನೆ- ಶುಕ್ರವಾರದಿಂದ ಸಾರ್ವಜನಿಕರ ದರ್ಶನಕ್ಕೆ ಅವಕಾಶ

ಹೀಗಾಗಿ ತಲಕಾಯಲಬೆಟ್ಟ ಗ್ರಾಮ ಸೇರಿದಂತೆ ಸುತ್ತಮುತ್ತಲ 5 ಕಿಮೀ ವ್ಯಾಪ್ತಿಯಲ್ಲಿ ಆರೋಗ್ಯ ಇಲಾಖೆಯಿಂದ (Health  Department) ಸರ್ವೆ ಕಾರ್ಯ ರ‍್ಯಾಂಡಮ್‌ ಚೆಕಪ್‌ ಮಾಡಲಾಗುತ್ತಿದೆ. ತಲಕಾಯಲಬೆಟ್ಟ, ದಿಬ್ಬೂರಹಳ್ಳಿ, ವಡ್ಡಹಳ್ಳಿ, ಬಚ್ಚಹಳ್ಳಿ ಗ್ರಾಮದ 880 ಮನೆಗಳಲ್ಲಿ ಸರಿಸುಮಾರು 4,800 ಜನರ ಮೇಲೆ ಆರೋಗ್ಯ ಇಲಾಖೆ ನಿಗಾವಹಿಸಿದೆ. ಇದನ್ನೂ ಓದಿ: ನಿಗಮ-ಮಂಡಳಿ ನೇಮಕ ವಿಚಾರದಲ್ಲಿ ಸಿದ್ದು- ಡಿಕೆಶಿ ಟಾಕ್‌ವಾರ್‌- ಹೈಕಮಾಂಡ್‌ ಸಭೆಯ ಇನ್‌ಸೈಡ್‌ ಸ್ಟೋರಿ ಇಲ್ಲಿದೆ

ಈಗಾಗಲೇ 30 ಮಂದಿ ಗರ್ಭಿಣಿಯರು ಹಾಗೂ ಜ್ವರದಿಂದ ಬಳಲುತ್ತಿರುವ 3 ಮಂದಿಯ ರಕ್ತ ಪರೀಕ್ಷೆ ಮಾಡಲಾಗಿದೆ. ಇನ್ನೂ ಮುಂಜಾಗ್ರತಾ ಕ್ರಮವಾಗಿ ಜ್ವರದಿಂದ ಬಳಲುತ್ತಿರುವವರ ಮೇಲೆ ನಿಗಾವಹಿಸಲಾಗಿದೆಯಾದರೂ ಝಿಕಾ ವೈರಸ್ ಸೋಂಕು ಹುಟ್ಟುವ ಮಕ್ಕಳ ಅಂಗವೈಕಲ್ಯಕ್ಕೆ ತುತ್ತಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಗರ್ಭಿಣಿಯರ ಮೇಲೂ ನಿಗಾ ವಹಿಸಲಾಗಿದೆ.

ಇದುವರೆಗೂ ಮನುಷ್ಯರಲ್ಲಿ ಝಿಕಾ ವೈರಸ್ ಪತ್ತೆಯಾಗಿಲ್ಲ. ಈ ಬಗ್ಗೆ ಚಿಕ್ಕಬಳ್ಳಾಪುರ ಜಿಲ್ಲಾ ಆರೋಗ್ಯಾಧಿಕಾರಿ ಮಹೇಶ್ ಕುಮಾರ್ ಪಬ್ಲಿಕ್ ಟಿವಿಗೆ ಝಿಕಾ ವೈರಸ್ ಪತ್ತೆಯಾಗಿರುವ ಬಗ್ಗೆ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಹಣ ಕಳ್ಳತನ ಪ್ರಕರಣ – ಸಂಘದ ಸಿಬ್ಬಂದಿ ಸೇರಿ 10 ಕಳ್ಳರು ಅಂದರ್

ಝಿಕಾ ವೈರಸ್ ರೋಗ ಲಕ್ಷಣಗಳು: ಜ್ವರ, ತಲೆನೋವು, ತುರಿಕೆ, ಕಣ್ಣಿನ ಬಣ್ಣ ಬದಲಾವಣೆ, ಮೈ ಕೈ ನೋವು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್