-ಸಿಎಂ ಹಿಮಂತ ಬಿಸ್ವಾ ಶರ್ಮಾ, ಕೇಂದ್ರ ಸಚಿವ ಕಿರಣ್ ಭಾಗಿ
ದಿಸ್ಪುರ್: ಸಿಂಗಾಪುರ್‌ದಲ್ಲಿ ಸ್ಕೂಬಾ ಡೈವಿಂಗ್ ವೇಳೆ ಮೃತಪಟ್ಟಿದ್ದ ಅಸ್ಸಾಂ (Assam) ಮೂಲದ ಖ್ಯಾತ ಗಾಯಕ ಜುಬೀನ್ ಗಾರ್ಗ್ (Zubeen Garg) ಅಂತ್ಯಕ್ರಿಯೆ (Funeral) ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದೆ.
ಅಸ್ಸಾಂನ ಗುವಾಹಟಿಯಲ್ಲಿ ಕುಟುಂಬಸ್ಥರು, ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಸರ್ಕಾರಿ ಗೌರವದೊಂದಿಗೆ ಗಾರ್ಗ್ಗೆ ಅಂತಿಮ ವಿದಾಯ ಹೇಳಲಾಯಿತು. ಅಂತ್ಯಕ್ರಿಯೆಯಲ್ಲಿ ಕೇಂದ್ರ ಸಚಿವ ಕಿರಣ್ ರಿಜಿಜು, ಸರ್ಬಾನಂದ ಸೋನಾವಾಲ, ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿ ಅಂತಿಮ ನಮನ ಸಲ್ಲಿಸಿದರು.ಇದನ್ನೂ ಓದಿ: ಗಾಯಕ ಜುಬೀನ್ ಗಾರ್ಗ್ ಅಂತಿಮ ಯಾತ್ರೆ ಲಿಮ್ಕಾ ದಾಖಲೆಗೆ ಸೇರ್ಪಡೆ
ಅಂತಿಮಯಾತ್ರೆಗೆ ಸಾಗರೋಪಾದಿಯಲ್ಲಿ ಅಭಿಮಾನಿಗಳು ಸೇರಿದ್ದರು. ಈ ಮೂಲಕ ವಿಶ್ವದಲ್ಲೇ ಅತೀ ಹೆಚ್ಚು ಜನರು ಸೇರಿದ 4ನೇ ಅಂತಿಮ ಯಾತ್ರೆಯೆಂದು ದಾಖಲೆ ನಿರ್ಮಿಸಿ, ಲಿಮ್ಕಾ ಬುಕ್ ಆಫ್ ರೆಕಾಡ್ಸ್ಗೆ ಸೇರ್ಪಡೆಯಾಗಿದೆ. ಮೈಕೆಲ್ ಜಾಕ್ಸನ್, ಪೋಪ್ ಫ್ರಾನ್ಸಿಸ್, ರಾಜಕುಮಾರಿ ಡಯಾನಾ ಮತ್ತು ರಾಣಿ ಎಲಿಜಬೆತ್ ಅವರಿಗೆ ನೀಡಿದಂತೆ ಇದು ಕೂಡ ಸ್ಮರಣೀಯ ವಿದಾಯ ಎಂದು ಗುರುತಿಸಲಾಗಿದೆ.
ಇನ್ನು ಅಂತಿಮಯಾತ್ರೆಯಲ್ಲಿ ಜುಬೀನ್‌ಗೆ ಜಯವಾಗಲಿ, ಜುಬೀನ್ ದೀರ್ಘಕಾಲ ಉಳಿಯಲಿ ಎಂಬ ಘೋಷ ವಾಕ್ಯಗಳು ಕೇಳಿಬಂದವು. ಗಾರ್ಗ್ ಸಾವಿನ ಹಿಂದೆ ಯಾವುದೇ ಅಪರಾಧ ಕೃತ್ಯಗಳು ನಡೆದಿಲ್ಲ ಎಂದು ಖಚಿತಪಡಿಸಲು ಸರ್ಕಾರ ಮತ್ತೊಮ್ಮೆ ಮರಣೋತ್ತರ ಪರೀಕ್ಷೆ ನಡೆಸಲು ಸೂಚಿಸಿತ್ತು. ಅದರಂತೆ 2ನೇ ಬಾರಿಗೆ ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಕ್ರಿಯೆ ನಡೆಸಲಾಯಿತು.ಇದನ್ನೂ ಓದಿ: ಗಾಯಕ ಜುಬೀನ್ ಗಾರ್ಗ್ ಸಾವು | ಕಾರ್ಯಕ್ರಮ ಆಯೋಜಕರ ವಿರುದ್ಧ FIR – ತನಿಖೆಗೆ ಮುಂದಾದ ಅಸ್ಸಾಂ ಸರ್ಕಾರ

 
			 
		 
		 
		 
		 
                                
                              
		