Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಅಪ್ಪಾ ಐ ಲವ್ ಯು’ ಚಿತ್ರದ ಸಾಂಗ್ ಔಟ್- ‘ನೆನಪಿರಲಿ’ ಪ್ರೇಮ್‌ಗೆ ಯಂಗ್ ರೆಬಲ್ ಸ್ಟಾರ್ ಸಾಥ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ‘ಅಪ್ಪಾ ಐ ಲವ್ ಯು’ ಚಿತ್ರದ ಸಾಂಗ್ ಔಟ್- ‘ನೆನಪಿರಲಿ’ ಪ್ರೇಮ್‌ಗೆ ಯಂಗ್ ರೆಬಲ್ ಸ್ಟಾರ್ ಸಾಥ್

Cinema

‘ಅಪ್ಪಾ ಐ ಲವ್ ಯು’ ಚಿತ್ರದ ಸಾಂಗ್ ಔಟ್- ‘ನೆನಪಿರಲಿ’ ಪ್ರೇಮ್‌ಗೆ ಯಂಗ್ ರೆಬಲ್ ಸ್ಟಾರ್ ಸಾಥ್

Public TV
Last updated: February 2, 2024 1:24 pm
Public TV
Share
3 Min Read
prem
SHARE

ಲವ್ಲಿ ಸ್ಟಾರ್ ಪ್ರೇಮ್ ಮತ್ತು ಟಗರು ಪುಟ್ಟಿ ಖ್ಯಾತಿಯ ಮಾನ್ವಿತ್ ಕಾಮತ್ (Manvitha Kamath) ಮೊದಲ ಬಾರಿಗೆ ಜೋಡಿಯಾಗಿ ನಟಿಸುತ್ತಿರುವ ‘ಅಪ್ಪಾ ಐ ಲವ್ ಯು’ (Appa I Love U) ಸಿನಿಮಾದ ಮೊದಲ ಹಾಡು ಅನಾವರಣ ಮಾಡಲಾಗಿದೆ. ಬೆಂಗಳೂರಿನ ಜಿಟಿ ಮಾಲ್‌ನಲ್ಲಿರುವ ಎಂಎಂ ಲೆಗಸಿಯಲ್ಲಿ ಆಡಿಯೋ ಬಿಡುಗಡೆ ಕಾರ್ಯಕ್ರಮ ನಡೆಯಿತು. ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಆಡಿಯೋ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಸಾಥ್ ನೀಡಿದ್ದಾರೆ.

appa i love uಅಭಿಷೇಕ್ ಅಂಬರೀಶ್ (Abhishek Ambareesh) ಮಾತನಾಡಿ, ನಮ್ಮ ಅಪ್ಪನ ಬಗ್ಗೆ ಮಾತಾಡಬೇಕು ಎಂದರೆ ಗಂಟೆಗಟ್ಟಲೇ ಮಾತನಾಡಬೇಕಾಗುತ್ತದೆ. ಪ್ರೇಮ್ ಅವರು ನನ್ನ ಯಾಕೆ ಪ್ರೋಗ್ರಾಂಗೆ ಕರೆಯುತ್ತಾರೆ ಅನಿಸಿತ್ತು. ಟೈಟಲ್ ನೋಡಿದಾಗ ಯಾಕೆ ಎಂದು ತಿಳಿಯಿತು. ಅಪ್ಪ-ಮಗನ ಬಾಂಧವ್ಯದ ಕುರಿತ ಸಿನಿಮಾ ಆಗಿರುವ ಕಾರಣ ನನ್ನ ಕರೆದಿದ್ದಾರೆ ಅಂದುಕೊಂಡೆ. ಪ್ರತಿಯೊಬ್ಬರಿಗೂ ತಮ್ಮ ಅಪ್ಪನ ಜೊತೆಗೆ ಒಂದು ಮೆಮೋರಿ ಇದ್ದೇ ಇರುತ್ತದೆ ಎಂದುಕೊಂಡಿದ್ದೇನೆ. ತಂದೆ ಇರುವವರಿಗೂ ಅವರ ಬೆಲೆ ಗೊತ್ತಾಗುವುದಿಲ್ಲ. ಪ್ರೇಮ್ ಹೀರೋ ಆದವರು ಮನೆಯಿಂದ ಹೀರೋಯಿನ್ ತಂದಿದ್ದಾರೆ. ಕವಿ ರಾಜ್ ಸರ್ ತುಂಬಾ ಚೆನ್ನಾಗಿ ಹಾಡು ಬರೆದಿದ್ದಾರೆ. ತಬಲ ನಾಣಿ ಅವರು ಒಂದೊಳ್ಳೆ ಮೆಸೇಜ್ ಇಟ್ಟುಕೊಂಡು, ಒಂದೊಳ್ಳೆ ಕಂಟೆಂಟ್ ಇಟ್ಕೊಂಡು ಸೊಸೈಟಿಗೆ ಏನಾದರೂ ಕೊಡಬೇಕು ಅಂತಾ ಬಂದಿದ್ದಾರೆ. ನಿಮಗೆ ಒಳ್ಳೆಯದಾಗಲಿ ಎಂದು ಮಾತನಾಡಿದ್ದಾರೆ. ಇದನ್ನೂ ಓದಿ:ತಂದೆ ಸಿ.ವಿ ಶಿವಶಂಕರ್ ಹಾದಿಯಲ್ಲಿ ಪುತ್ರ ವೆಂಕಟ್ ಭಾರದ್ವಾಜ್!

MANVITHA KAMATH 3

ನೆನಪಿರಲಿ ಪ್ರೇಮ್ (Prem) ಮಾತನಾಡಿ, ಸಿನಿಮಾರಂಗದಲ್ಲಿ 22 ವರ್ಷ ಪೂರೈಸಿದ್ದೇನೆ ಅಂದರೆ ಅದು ನಮ್ಮ ತಂದೆಯಿಂದ ಅಂತಾ ಹೆಮ್ಮೆಯಿಂದ ಹೇಳಲು ಇಷ್ಟಪಡುತ್ತೇನೆ. ಕಾರಣ ಏನೆಂದರೆ ಸಿನಿಮಾ ಹೀರೋ ಆಗಬೇಕು ಅಂತಾ ಕನಸು ಕಟ್ಟಿಕೊಂಡಾಗ ಗಾಂಧಿನಗರದಲ್ಲಿ ಫೋಟೋ ಇಟ್ಟುಕೊಂಡು ತಿರುಗಾಡುತ್ತಿದ್ದೆ. ಮದುವೆ ಆಗಿತ್ತು. ಆಗ ತಾನೇ ಮಗಳು ಹುಟ್ಟಿದ್ದಳು. ಆಗ ಕಷ್ಟದಲ್ಲಿ ಇದ್ದೆ.  ನನ್ನ ತಂದೆ ಅಂದು ಹೇಳಿದ ಒಂದು ಮಾತು ನಾನು ಸ್ಟಾರ್ ಆಗಿ ಇಂದು ಇಲ್ಲಿ ನಿಂತಿದ್ದೇನೆ. ತಬಲನಾಣಿ ಸಿನಿಮಾರಂಗದಲ್ಲಿ ತಮ್ಮದೇ ಶೈಲಿಯಲ್ಲಿ ಛಾಪೂ ಮೂಡಿಸಿದ್ದಾರೆ. ಹೆಮ್ಮೆಯಾಗುತ್ತದೆ ಈಗ ಸ್ನೇಹಿತರ ಜೊತೆಗೂಡಿ ಅವರು ನಿರ್ಮಾಪಕರು ಆಗಿದ್ದಾರೆ. ಸಿನಿಮಾ ನಿರ್ಮಾಣ ಮಾಡಿದ್ದಾರೆ. ಅವರ ಮೊದಲ ಪ್ರೊಡಕ್ಷನ್‌ನಲ್ಲಿ ಹೊಸಬರಿಗೆ ಅವಕಾಶ ಕೊಟ್ಟಿದ್ದಾರೆ. ಅಥರ್ವ ಆರ್ಯ ಮೊದಲ ಸಿನಿಮಾದಲ್ಲಿ ಅದ್ಭುತ ಕಂಟೆಂಟ್ ತೆಗೆದುಕೊಂಡು ಬಂದಿದ್ದಾರೆ. ನಮಗೆಲ್ಲರಿಗೂ ಅವಕಾಶ ಕೊಟ್ಟಿದ್ದಾರೆ. ಇಡೀ ತಂಡಕ್ಕೆ ಒಳ್ಳೆಯದಾಗಲಿ ಎಂದರು.

appa i love u 1

ನಿರ್ದೇಶಕ ಅಥರ್ವ ಆರ್ಯ ಮಾತನಾಡಿ, ನಾವು ಮಂಡ್ಯದವರು. ಅಂಬರೀಶ್ ಅಣ್ಣ ಅಂದರೆ ನಮಗೆ ವಿಶೇಷವಾದ ಪ್ರೀತಿ. ಅವರು ರೋಲ್ ಮಾಡೆಲ್. ನಮಗೆ ಬುದ್ಧಿ ಬಂದಾಗಿನಿಂದ ನಮ್ಮ ಫಸ್ಟ್ ಹೀರೋ ಯಾರು ಅಂದರೆ ಅಂಬರೀಶ್ ಅಣ್ಣ. ಅಂಬರೀಶ್ ಅಣ್ಣನ ಸಿನಿಮಾ ನೋಡಿಕೊಂಡು ಬಂದವರು ನಾವು. ಅಂಬಿಯಣ್ಣನ ಸ್ಫೂರ್ತಿಯಿಂದ ಇಂಡಸ್ಟ್ರೀಗೆ ಬಂದಿದ್ದೇವೆ. ಜೀವನದಲ್ಲಿ ಪ್ರತಿಯೊಬ್ಬ ಮಕ್ಕಳು ತಮ್ಮ ತಂದೆಗೆ ಅಪ್ಪಾ ಐ ಲವ್ ಯು ಅಂತಾ ಹೇಳಲೇಬೇಕು. ಚಿಕ್ಕವರು ಇದ್ದಾಗ ಹೇಳುವುದು ಸಾಮಾನ್ಯ. ವಯಸ್ಸಾಗಿ, ಏನೂ ಆಗುತ್ತಿಲ್ಲ ಅಂತಾದಾಗ ಅವರ ಮುಂದೆ ನಿಂತು ‘ಅಪ್ಪಾ ಐ ಲವ್ ಯು’ ಅಂತಾ ಹೇಳಬೇಕು. ಅವರ ಪ್ರೀತಿಗೆ, ತ್ಯಾಗಕ್ಕೆ ನಾವು ಪ್ರತಿಫಲ ಕೊಡಬೇಕು ಅಂದಾಗ ಅಪ್ಪಾ ಐ ಲವ್ ಯು ಅಂತಾ ಹೇಳಬೇಕು. ಸಂಸಾರದಲ್ಲಿ ಅಪ್ಪ ಎಷ್ಟು ಮುಖ್ಯ. ಸಮಾಜಕ್ಕೆ ತಂದೆ ಸ್ಥಾನ ಏನು ಅನ್ನೋದು ಕಥೆಯ ತಿರುಳು ಎಂದರು.

prem

ಅಪ್ಪ-ಮಗನ ಬಾಂಧವ್ಯದ ಗೀತೆಯಾಗಿರುವ ಮನೆಗೊಂದು ಮಾಳಿಗೆ ಹಾಡಿಗೆ ಕಿನ್ನಾಳ್ ರಾಜ್ ಸಾಹಿತ್ಯ ಬರೆದಿದ್ದು, ವಿಜಯ್ ಪ್ರಕಾಶ್ ಧ್ವನಿಯಾಗಿದ್ದು, ಆಕಾಶ್ ಪರ್ವ ಸಂಗೀತ ಒದಗಿಸಿದ್ದಾರೆ. ತಬಲಾ ನಾಣಿ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿದ್ದಾರೆ. ಉಳಿದಂತೆ ಸಂಜಯ್, ಜೀವಿತಾ, ರಂಗೀತರಂಗ ಅರವಿಂದ್, ವಿಜಯ್ ಚೆಂಡೂರ್, ಬಲ ರಾಜ್ವಾಡಿ, ಮಿಮಿಕ್ರಿ ಗೋಪಿ, ಅರುಣ ಬಾಲರಾಜ್, ವರ್ಧನ್ ತೀರ್ಥಹಳ್ಳಿ, ಗಿರೀಶ್ ಜತ್ತಿ, ಪಟೇಲ್ ಅಣ್ಣಯ್ಯಪ್ಪ ಸೇರಿದಂತೆ ಹಲವು ತಾರಾಬಳಗ ಚಿತ್ರದಲ್ಲಿದೆ.

appa i love u 2

‘ಜೂಟಾಟ’ ಸಿನಿಮಾ ಬಿಡುಗಡೆಗೆ ಎದುರು ನೋಡುತ್ತಿರುವ ಅಥರ್ವ್ ಆರ್ಯ ಈಗ ‘ಅಪ್ಪಾ ಐ ಲವ್’ ಯೂ ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳುತ್ತಿದ್ದು, ಇದು ಇವರ ಎರಡನೇ ಪ್ರಯತ್ನ. ಟೈಟಲ್ ಹೇಳುವಂತೆ ಇದು ತಂದೆಯ ಮಹತ್ವ ಸಾರುವ ಸಿನಿಮಾ. ಕುಟುಂಬದಲ್ಲಿ ಅಥವಾ ಸಮಾಜದಲ್ಲಿ ತಂದೆ ಕಡೆಗಣನೆಗೆ ಒಳಗಾದಾಗ ಯಾವ ರೀತಿ ನೋವು ಅನುಭವಿಸುತ್ತಾನೆ ಎಂಬುದೇ ಕಥೆಯ ತಿರುಳು. ಇಲ್ಲಿ ತಂದೆಯಾಗಿ ತಬಲಾನಾಣಿ (Tabla Nani)  ಬಣ್ಣ ಹಚ್ಚಿದ್ದು, ರಂಗಭೂಮಿ ಕಲಾವಿದರಾದ ಸಂಜಯ್ ಹಾಗೂ ಜೀವಿತ ವಸಿಷ್ಠ ಚಿತ್ರರಂಗಕ್ಕೆ ಪರಿಚಿತರಾಗುತ್ತಿದ್ದಾರೆ.

‘ಅಪ್ಪಾ ಐ ಲವ್ ಯೂ’ ಸಿನಿಮಾಗೆ ನಾಗಾರ್ಜುನ್ ಆರ್. ಡಿ ಛಾಯಾಗ್ರಹಣ, ವೇದಿಕ್ ವೀರ ಸಂಕಲನ, ಗಂಗಮ್ ರಾಜು ಕೊರಿಯೋಗ್ರಫಿ ಚಿತ್ರಕ್ಕಿದೆ. ಆಕಾಶ್ ಪರ್ವ ಸಂಗೀತ ನಿರ್ದೇಶನದ ಹಾಡುಗಳಿಗೆ ಡಾ.ನಾಗೇಂದ್ರ ಪ್ರಸಾದ್, ಕವಿರಾಜ್, ಕಿನ್ನಾಳ್ ರಾಜ್ ಸಾಹಿತ್ಯ ಬರೆದಿದ್ದಾರೆ. ಬೆಂಗಳೂರು, ಮೈಸೂರು, ಮಂಗಳೂರು ಸುತ್ತಮುತ್ತ 65 ದಿನಗಳ ಕಾಲ ಶೂಟಿಂಗ್ ಮಾಡಲಾಗಿದೆ.

TAGGED:'ಅಪ್ಪಾ ಐ ಲವ್'Manvitha Kamathpremತಬಲಾ ನಾಣಿಪ್ರೇಮ್ಮಾನ್ವಿತಾ ಕಾಮತ್
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Congress BJP
Bagalkot

ದಾವಣಗೆರೆ, ಬಾಗಲಕೋಟೆ ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ

Public TV
By Public TV
3 hours ago
ipl 2026 Vaibhav Sooryavanshi stuns Jasprit Bumrah with first ball six Mumbai Indiansace can only smile
Cricket

ಬುಮ್ರಾಗೆ 2 ಸಿಕ್ಸ್‌ – ಮತ್ತೆ 5 ಸಿಕ್ಸ್‌ ಸಿಡಿಸಿದ ಸೂರ್ಯವಂಶಿ

Public TV
By Public TV
3 hours ago
IPL match Rain
Cricket

IPL 2026 | ರಾಜಸ್ಥಾನ ರಾಯಲ್ಸ್‌ Vs ಮುಂಬೈ ಇಂಡಿಯನ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
3 hours ago
JD Vance
Latest

ಇರಾನ್‌ ಮೇಲೆ ಪರಮಾಣು ದಾಳಿಯಾಗುತ್ತಾ?- ವ್ಯಾನ್ಸ್‌ ಹೇಳಿಕೆಯಿಂದ ಬಿಸಿ ಬಿಸಿ ಚರ್ಚೆ

Public TV
By Public TV
4 hours ago
Bandipura Vulture
Chamarajanagar

ಬಂಡೀಪುರದಲ್ಲಿ ಸಫಾರಿ ಹೋಗಿದ್ದ ಪ್ರವಾಸಿಗರಿಗೆ ರಣಹದ್ದುಗಳ ದರ್ಶನ – ಸಂತತಿ ಹೆಚ್ಚಳ

Public TV
By Public TV
4 hours ago
Mallikarjun kharge
Latest

RSS, BJP ಕಾರ್ಯಕರ್ತರನ್ನು ಕೊಲ್ಲಲು ಮುಸ್ಲಿಮರಿಗೆ ಮಲ್ಲಿಕಾರ್ಜುನ ಖರ್ಗೆ ಕರೆ ಆರೋಪ – ಬೆಂಗ್ಳೂರಲ್ಲಿ ದೂರು ದಾಖಲು

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?