ಬೆಳಗಾವಿ: ನಗರದಲ್ಲಿ ಯಾವುದೇ ಕಾರಣಕ್ಕೂ ಹಿಂದೂ ದೇವಸ್ಥಾನಗಳನ್ನು ತೆರವುಗೊಳಿಸಬಾರದು ಎಂದು ಆಗ್ರಹಿಸಿ ಬೆಳಗಾವಿ ನಗರ ದೇವಸ್ಥಾನ ಮಂಡಳದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ.
Advertisement
ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 46 ಧಾರ್ಮಿಕ ಕೇಂದ್ರಗಳಿದ್ದು, ಅವುಗಳಲ್ಲಿ ಈಗಾಗಲೇ 17 ಧಾರ್ಮಿಕ ಕೇಂದ್ರಗಳನ್ನು ತೆರವುಗೊಳಿಸಲಾಗಿದೆ. ಬೆಳಗಾವಿ ನಗರ ದೇವಸ್ಥಾನ ಮಂಡಳ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿ ಹಿಂದೂ ಧಾರ್ಮಿಕ ಕೇಂದ್ರಗಳನ್ನು ತೆರವುಗೊಳಿಸಬಾರದು ಎಂದು ಆಗ್ರಹಿಸಿ ಮನವಿ ಸಲ್ಲಿಸಿದರು. ಇದನ್ನೂ ಓದಿ: ಚಿತ್ರದುರ್ಗದ ಮಕ್ಕಳಲ್ಲಿ ವಿಚಿತ್ರ ರೋಗ – ಸರ್ಕಾರಿ ಜಿಲ್ಲಾಸ್ಪತ್ರೆ ಹೌಸ್ ಫುಲ್
Advertisement
Advertisement
ಇದೇ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ರಮಾಕಾಂತ್ ಕೊಂಡೂಸ್ಕರ್, ಒಂದು ವೇಳೆ ಹಿಂದೂ ದೇವಸ್ಥಾನಗಳನ್ನು ತೆರವುಗೊಳಿಸಲು ಮುಂದಾದ್ರೆ ಲಕ್ಷಾಂತರ ಹಿಂದೂಗಳು ಬೀದಿಗೆ ಬಂದು ಹೋರಾಟ ಮಾಡಲಿದ್ದಾರೆ. ಹೀಗಾಗಿ ಮುಂದೆ ಆಗುವ ಅನಾಹುತಗಳಿಗೆ ಜಿಲ್ಲಾಡಳಿತವೇ ನೇರ ಹೊಣೆಯಾಗುತ್ತದೆ ಎಂದು ಎಚ್ಚರಿಸಿದರು. ಇದನ್ನೂ ಓದಿ: ಸರ್ವೋಚ್ಚ ನ್ಯಾಯಾಲಯದ ತೀರ್ಮಾನಕ್ಕೆ ಬೆಲೆ ಕೊಡುವುದರ ಜೊತೆಗೆ ಧಾರ್ಮಿಕ ಕ್ಷೇತ್ರಗಳಿಗೆ ಬೆಲೆ ಕೊಡಬೇಕಿದೆ: ಎಸ್ಡಿಪಿಐ
Advertisement
ಈ ಸಂದರ್ಭದಲ್ಲಿ ಬೆಳಗಾವಿ ನಗರ ದೇವಸ್ಥಾನ ಮಂಡಳದ ಅಧ್ಯಕ್ಷ ರಂಜೀತ್ ಚವ್ಹಾಣ್ ಪಾಟೀಲ್, ಪದಾಧಿಕಾರಿಗಳಾದ ಸಾಗರ ಪಾಟೀಲ್, ವಿ.ಎಮ್.ಹಲಗೇಕರ್, ಎಂ.ಬಿ.ಬಾರದೇಶಕರ್, ವಿಕಾಸ ಕಲಘಟಗಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.