ನಬಾರ್ಡ್ ಸಾಲದ ಮೊತ್ತ ಹೆಚ್ಚಿಸುವಂತೆ ಕೇಂದ್ರ ಹಣಕಾಸು ಸಚಿವರಿಗೆ ಮನವಿ: ಸಿದ್ದರಾಮಯ್ಯ

Public TV
1 Min Read
Siddaramaiah 13

ಬೆಂಗಳೂರು: ನಬಾರ್ಡ್ (NABARD) ಸಾಲದ ಮೊತ್ತ ಹೆಚ್ಚಿಸುವಂತೆ ಕೇಂದ್ರ ಹಣಕಾಸು ಸಚಿವರಿಗೆ ಮನವಿ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ (Siddaramaiah)  ತಿಳಿಸಿದ್ದಾರೆ.

ಇಂದು ದೆಹಲಿ ಪ್ರವಾಸಕ್ಕೆ ತೆರಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಗುರುವಾರ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರನ್ನು ಭೇಟಿಯಾಗಲು ಸಮಯ ಕೋರಲಾಗಿದೆ ಎಂದರು. ಇದನ್ನೂ ಓದಿ: ವಿಕ್ರಂಗೌಡ ಹತ್ಯೆ | ನಕ್ಸಲ್ ಚಟುವಟಿಕೆ ನಿಗ್ರಹಿಸಲು ಎನ್‌ಕೌಂಟರ್: ಸಿದ್ದರಾಮಯ್ಯ

ರಾಜ್ಯಕ್ಕೆ ನಬಾರ್ಡ್‌ನಿಂದ ರಾಜ್ಯಕ್ಕೆ ನೀಡಲಾಗುವ ಸಾಲದ ಮೊತ್ತವನ್ನು ಕಳೆದ ವರ್ಷದ 5,600 ಕೋಟಿ ರೂ.ಗಳಿಂದ ಈ ವರ್ಷ 2,340 ಕೋಟಿ ರೂ.ಗಳಿಗೆ ಇಳಿಸಲಾಗಿದೆ. ಆದ್ದರಿಂದ ಕೇಂದ್ರ ವಿತ್ತ ಸಚಿವರನ್ನು ಭೇಟಿಯಾಗಿ ಈ ಬಗ್ಗೆ ಮನವಿ ಮಾಡಿಕೊಳ್ಳಲಾಗುವುದು. ಈ ಮಧ್ಯೆ ಸಮಯಾವಕಾಶವಿದ್ದಲ್ಲಿ ಪಕ್ಷದ ವರಿಷ್ಠರನ್ನು ಭೇಟಿ ಮಾಡಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ವಿಕ್ರಂ ಗೌಡ ಮೃತದೇಹ ಸಾಗಿಸುತ್ತಿದ್ದ ಅಂಬುಲೆನ್ಸ್‌ ಪಲ್ಟಿ

Share This Article