ಕೋಲ್ಕತ್ತಾ: ಪ್ರವಾದಿ ಮೊಹಮ್ಮದ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಮಾಜಿ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ವಿರುದ್ಧ ದೇಶ-ವಿದೇಶಗಳಲ್ಲಿ ಹೊತ್ತಿ ಉರಿಯುವಂತಾಗಿದೆ. ಆದರೆ ಈ ಘಟನೆಯ ಬಳಿಕ ಇಲ್ಲಿಯವರೆಗೆ ನೂಪುರ್ ಎಲ್ಲಿಯೂ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ಇದೀಗ ನೂಪುರ್ ವಿಚಾರಣೆಗೆ ಇನ್ನಷ್ಟು ಸಮಯಾವಕಾಶ ನೀಡಲು ಕೋಲ್ಕತ್ತಾ ಪೊಲೀಸರು ನಿರಾಕರಿಸಿದ್ದಾರೆ.
ವಿವಾದಾತ್ಮಕ ಹೇಳಿಕೆ ನೀಡಿದ ಬಳಿಕ ಅವರ ವಿರುದ್ಧ ನಾರ್ಕೆಲ್ಡಂಗಾ ಹಾಗೂ ಅಮ್ಹೆರ್ಸ್ಟ್ ಸ್ಟ್ರೀಟ್ ಪೊಲೀಸ್ ಠಾಣೆಗಳಲ್ಲಿ ಎಫ್‌ಐಆರ್ ದಾಖಲಾಗಿದೆ. ಎಫ್‌ಐಆರ್ ದಾಖಲಾಗಿದ್ದರೂ, ತನ್ನ ಜೀವಕ್ಕೆ ಅಪಾಯವಿದೆ, ಪೊಲೀಸ್ ಠಾಣೆಗೆ ಹಾಜರಾಗಲು ಸ್ವಲ್ಪ ಕಾಲಾವಕಾಶ ಬೇಕು ಎಂದು ಇ-ಮೇಲ್ ಮೂಲಕ ತಿಳಿಸಿದ್ದಾರೆ. ಇದನ್ನೂ ಓದಿ: ನೇರವಾಗಿ ಒಪಿಡಿಗೆ ಓಡಿಬಂದ ಕತ್ತೆ- ಗಾಬರಿಗೊಂಡ ರೋಗಿಗಳು
ಈಗ ಪೊಲೀಸರು ನೂಪುರ್‌ಗೆ ಇನ್ನಷ್ಟು ಸಮಯಾವಕಾಶ ನೀಡಲು ಹಿಂದೇಟು ಹಾಕುತ್ತಿದ್ದಾರೆ. ಈ ಕೂಡಲೇ ವಿಚಾರಣೆಗೆ ಹಾಜರಾಗಬೇಕೆಂದು ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ.
ವರದಿಗಳ ಪ್ರಕಾರ ಕೋಲ್ಕತ್ತಾ ಪೊಲೀಸರು ಶನಿವಾರ ನೂಪುರ್ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದು, ಇದಕ್ಕೆ ನೂಪುರ್ ಮಂಗಳವಾರ ಪ್ರತಿಕ್ರಿಯಿಸಿದ್ದಾರೆ. ನರ್ಕೆಲ್ಡಂಗಾ ಪೊಲೀಸ್ ಠಾಣೆಗೆ ಇ-ಮೇಲ್ ಮೂಲಕ ಮತ್ತೆ ಜೀವಭಯ ವ್ಯಕ್ತಪಡಿಸಿ ಹೆಚ್ಚಿನ ಸಮಯಾವಕಾಶ ಕೋರಿದ್ದಾರೆ. ಆದರೆ ಇನ್ನು ಸಮಯಾವಕಾಶ ನೀಡಲು ನಿರಾಕರಿಸಿರುವ ಪೊಲೀಸರು, ತಕ್ಷಣವೇ ವಿಚಾರಣೆಗೆ ಹಾಜರಾಗದಿದ್ದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಮೈದಾ, ರವೆ ಸೇರಿದಂತೆ ಹಿಟ್ಟಿನ ರಫ್ತಿಗೆ ನಿಷೇಧ ಹೇರಿದ ಭಾರತ
ನೂಪುರ್ ಶರ್ಮಾ ಅವರ ಒಂದು ವಿವಾದಾತ್ಮಕ ಹೇಳಿಕೆಗೆ ದೇಶಾದ್ಯಂತ ಭೀಕರ ಹಿಂಸಾಚಾರಗಳು ನಡೆದಿದ್ದು, ಈ ಹಿನ್ನೆಲೆ ಸುಪ್ರೀಂ ಕೋರ್ಟ್ ಇದೆಲ್ಲದಕ್ಕೂ ಹೊಣೆ ನೂಪುರ್ ಶರ್ಮಾ ಎಂದು ಹೇಳಿತ್ತು. ಅವರ ಹೇಳಿಕೆಯಿಂದ ದೇಶದಲ್ಲಿ ಅಶಾಂತಿಯ ವಾತಾವರಣ ಸೃಷ್ಟಿಯಾಗಿದ್ದು, ಇದೆಲ್ಲದಕ್ಕೂ ಆಕೆ ಇಡೀ ದೇಶಕ್ಕೆ ಕ್ಷಮೆ ಕೇಳಬೇಕು ಎಂದು ಹೇಳಿದೆ.