ಚಿಕ್ಕೋಡಿ: 2018ರಲ್ಲಿ ನಡೆದಿದ್ದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಕಾರ ಸಚಿವ ಹಾಗೂ ಅಥಣಿ ಶಾಸಕ ಲಕ್ಷ್ಮಣ ಸವದಿಗೆ(Laxman Savadi) ಅಥಣಿ JMFC ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ಅಕ್ಟೋಬರ್ 9ರಂದು ನ್ಯಾಯಾಲಯಕ್ಕೆ(Court) ಖುದ್ದು ಹಾಜರಾಗುವಂತೆ ಸೂಚಿಸಲಾಗಿದೆ. ತಳವಾರ ಸಮುದಾಯಕ್ಕೆ ಎಷ್ಟು ಅನುದಾನ ನೀಡಲಾಗಿದೆ ಎಂದು ಪ್ರಶ್ನಿಸಿದ್ದಕ್ಕೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಪ್ರಕರಣ ಇದಾಗಿದೆ. ಅಥಣಿ ಪಟ್ಟಣದ ಲಕ್ಷ್ಮೀ ದೇವಸ್ಥಾನದ ಸಮೀಪ ಲಕ್ಷ್ಮಣ ಸವದಿ ಅವರ ಸಮ್ಮುಖದಲ್ಲೇ ಗಲಾಟೆ ನಡೆದಿತ್ತು.
ಈ ಕುರಿತು ರಾಜು ಜಮಖಂಡಿಕರ ಎಂಬುವವರು ಅಥಣಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಲಕ್ಷ್ಮಣ ಸವದಿ ಅವರ ಪ್ರಚೋದನೆಯಿಂದಲೇ ಗಲಾಟೆ ನಡೆದಿದೆ ಎಂಬ ಆರೋಪವೂ ದೂರಿನಲ್ಲಿ ಉಲ್ಲೇಖವಾಗಿತ್ತು. ಇದನ್ನೂ ಓದಿ: ದರ್ಶನ್‌ಗೆ ಬಿಗ್ ಶಾಕ್- ಮುಚ್ಚಿದ ಕೊಠಡಿಯಲ್ಲಿ ಪ್ರದೋಷ್ ಮಾಫಿ ಸಾಕ್ಷ್ಯ ದಾಖಲು

