ನವದೆಹಲಿ: ಆಪಲ್ ಕಂಪನಿಯು ಐಫೋನ್‌ನ ಮುಂಬರುವ 18ರ ಸರಣಿಯನ್ನು ಬಿಡುಗಡೆ ಮಾಡುವ ಬಗ್ಗೆ ಇದೀಗ ಅಧಿಕೃತ ಮಾಹಿತಿ ಹಂಚಿಕೊಂಡಿದೆ. ಸೆ.9ರಂದು ಲಾಂಚ್ ಇವೆಂಟ್ ನಡೆಯಲಿದೆ. ಈ ವೇಳೆ ಹಲವು ಹೊಸ ಪ್ರಾಡಕ್ಟ್‌ಗಳು ರಿಲೀಸ್ ಆಗಲಿದ್ದು, ಐಫೋನ್ 18 ಪ್ರೋ, ಐಫೋನ್ 18 ಪ್ರೋ ಮ್ಯಾಕ್ಸ್ ಬಿಡುಗಡೆಯಾಗುವ ನಿರೀಕ್ಷೆಯಿದೆ.
ಈ ಕುರಿತು ಆಪಲ್ ಕಂಪನಿಯು ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ಸೆಪ್ಟೆಂಬರ್ 9ರಂದು ಬೆಳಿಗ್ಗೆ 10 ಗಂಟೆಗೆ “ಸರ್ಪ್ರೈಸ್ ಅಂಡ್ ಶೈನ್” ಎಂಬ ಟ್ಯಾಗ್‌ಲೈನ್‌ನೊಂದಿಗೆ ಲಾಂಚ್ ಇವೆಂಟ್ ನಡೆಯಲಿದೆ. ಇದನ್ನೂ ಓದಿ: ಪ್ರಶ್ನೆ ಪತ್ರಿಕೆ ಸೋರಿಕೆ ನೇಮಕಾತಿ ಅಕ್ರಮ ತಡೆಗೆ ಸಚಿವ ಸಂಪುಟ ಉಪಸಮಿತಿ ರಚನೆ – ಖಾದರ್‌ಗೆ ಅಧ್ಯಕ್ಷ ಪಟ್ಟ
These are some of the new products Apple could launch at the #AppleEvent next month 🔥 pic.twitter.com/rdu4nTp5TP
— Apple Hub (@theapplehub) August 26, 2026
ಐಫೋನ್ ಪ್ರಿಯರು ಸೆ.9ರಂದು ಐಫೋನ್ 18ರ ಸರಣಿ ಬಿಡುಗಡೆಯಾಗುವ ನಿರೀಕ್ಷೆಯಲ್ಲಿದ್ದು, ಆದರೆ ಕಂಪನಿ ಈ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ. ಬದಲಾಗಿ ಏನೆಲ್ಲಾ ಬಿಡುಗಡೆಯಾಗಬಹುದು ಎಂಬ ಪಟ್ಟಿ ಬಿಡುಗಡೆ ಮಾಡಿದ್ದು, ಐಫೋನ್ 18 ಪ್ರೋ, ಐಫೋನ್ 18 ಪ್ರೋ ಮ್ಯಾಕ್ಸ್, ಐಫೋನ್ ಫೋಲ್ಡ್, ಆಪಲ್ ವಾಚ್ ಸೀರಿಸ್ 12, ಆಪಲ್ ವಾಚ್ ಅಲ್ಟ್ರಾ 4, ಏರ್‌ಪಾಡ್ 6, ಐಪ್ಯಾಡ್ ಮಿನಿ, ಹೋಮ್‌ಪಾಡ್ ಮಿನಿ 2, ಆಪಲ್ ಟಿವಿ 4ಕೆ, ಆಪಲ್ ಹೋಮ್ ಹಬ್ ಬಿಡುಗಡೆಯಾಗುವ ಸಾಧ್ಯತೆಯಿದೆ.
ಲಾಂಚ್ ಇವೆಂಟ್ ಯೂಟ್ಯೂಬ್, ಆಪಲ್ ವೆಬ್‌ಸೈಟ್ ಮತ್ತು ಆಪಲ್ ಟಿವಿಯಲ್ಲಿ ನೇರಪ್ರಸಾರವಾಗಲಿದೆ. ಇದನ್ನೂ ಓದಿ: ಮಾನಸ ಸರೋವರ ಯಾತ್ರೆಗೆ ತೆರಳಿದ್ದ ನಾಲ್ವರು ಕನ್ನಡಿಗರು ನಾಪತ್ತೆ – ಕಲಬುರಗಿಯ ಇಬ್ಬರು ಸುರಕ್ಷಿತ
It’s official! Apple will launch new products at the next #AppleEvent on September 9th at 10 a.m. PDT 🚨
Apple is expected to announce the iPhone 18 Pro models and its first foldable iPhone at the event pic.twitter.com/nZ9cTCB4Po
— Apple Hub (@theapplehub) August 26, 2026
