ವಾಷಿಂಗ್ಟನ್: ಐಫೋನ್, ಐಪ್ಯಾಡ್ ಹಾಗೂ ಮ್ಯಾಕ್ ಕಂಪ್ಯೂಟರ್‌ಗಳ ನಿಯಂತ್ರಣವನ್ನು ಹ್ಯಾಕರ್‌ಗಳು ವಶಪಡಿಸಿಕೊಳ್ಳಲು ಸಾಧ್ಯವಾಗುವಂತಹ ದೋಷದ ಬಗ್ಗೆ ಆಪಲ್ ಎಚ್ಚರಿಕೆ ನೀಡಿದೆ. ಹಾಗೂ ತುರ್ತಾಗಿ ಸಾಫ್ಟ್‌ವೇರ್ ಅಪ್‌ಡೇಟ್ ಮಾಡುವಂತೆ ಬಳಕೆದಾರರಿಗೆ ಒತ್ತಾಯಿಸಿದೆ.
ಆಪಲ್ ಡಿವೈಸ್‌ಗಳಲ್ಲಿ ದೋಷ ಕಂಡುಬಂದಿದ್ದು, ಅದನ್ನು ಲಾಭವಾಗಿ ಉಪಯೋಗಿಸಿಕೊಂಡು ಹ್ಯಾಕರ್‌ಗಳು ದಾಳಿ ನಡೆಸುವ ಸಾಧ್ಯತೆ ಇರುವುದಾಗಿ ಕಂಪನಿ ತಿಳಿಸಿದೆ. ಇದನ್ನು ಸರಿಪಡಿಸಲು ತಕ್ಷಣವೇ ಸಾಫ್ಟ್‌ವೇರ್ ಅಪ್‌ಡೇಟ್ ಮಾಡಲು ಕೇಳಿಕೊಂಡಿದೆ. ಇದನ್ನೂ ಓದಿ: 2 ವಿಮಾನಗಳು ಪರಸ್ಪರ ಡಿಕ್ಕಿ – ಹಲವರು ಸಾವು
Advertisement
Advertisement
ತಾಂತ್ರಿಕ ದೋಷಗಳನ್ನು ಬಳಸಿಕೊಂಡು ಹ್ಯಾಕರ್‌ಗಳು ಆಪಲ್ ಸಾಧನಗಳನ್ನು ಪ್ರವೇಶಿಸಲು ಸಾಧ್ಯವಾಗುತ್ತಿದೆ ಎಂದಿದೆ. ಆದರೆ ಈಗಾಗಲೇ ಎಷ್ಟರ ಮಟ್ಟಿಗೆ ಆಪಲ್ ಡಿವೈಸ್‌ಗಳು ಹ್ಯಾಕರ್‌ಗಳ ವಶವಾಗಿದೆ ಎಂಬುದನ್ನು ಕಂಪನಿ ಸ್ಪಷ್ಟಪಡಿಸಿಲ್ಲ. ಈ ಸಮಸ್ಯೆಯನ್ನು ಪರಿಹರಿಸಲು ಐಫೋನ್, ಐಪ್ಯಾಡ್ ಹಾಗೂ ಮ್ಯಾಕ್ ಕಂಪ್ಯೂಟರ್‌ಗಳಿಗೆ ಈಗಾಗಲೇ ಅಪ್‌ಡೇಟ್‌ಗಳನ್ನು ಬಿಡುಗಡೆ ಮಾಡಲಾಗಿದೆ ಎಂಬ ಮಾಹಿತಿ ನೀಡಿದೆ. ಇದನ್ನೂ ಓದಿ: ಮಹಿಳೆಯರು ಬಾಯ್‍ಫ್ರೆಂಡ್‍ನ ಯಾವಾಗ ಬೇಕಾದ್ರೂ ಚೇಂಜ್ ಮಾಡ್ತಾರೆ – ನಿತೀಶ್ ಕುಮಾರ್‌ಗೆ ಬಿಜೆಪಿ ನಾಯಕನ ಟಾಂಗ್