ಬೆಂಗಳೂರು: ರಾಜ್ಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ (Education Department) ಅಧಿಸೂಚನೆ ಹೊರಡಿಸಿದೆ.
ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆಗಸ್ಟ್ 18 ರಿಂದ ಸೆಪ್ಟೆಂಬರ್ 9ರವರೆಗೆ ನಡೆಯಲಿದೆ. ಇದನ್ನೂ ಓದಿ: ಆ.13 ರಿಂದ 15 ರವರೆಗೆ ಕಲಬುರಗಿಯಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ

ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿತ ಅವಧಿಯೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಕೆ ಅವಧಿ: ಆಗಸ್ಟ್ 18ರಿಂದ ಸೆಪ್ಟೆಂಬರ್ 9ರವರೆಗೆ.
ಅರ್ಜಿ ಸಲ್ಲಿಕೆ, ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಿತಿ ಹಾಗೂ ಇತರ ನೇಮಕಾತಿ ವಿವರಗಳನ್ನು ಶಿಕ್ಷಣ ಇಲಾಖೆಯ ಅಧಿಕೃತ ಅಧಿಸೂಚನೆಯಲ್ಲಿ ಪರಿಶೀಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್: https://schooleducation.karnataka.gov.in ಪರಿಶೀಲಿಸಬಹುದಾಗಿದೆ.

