ಬೆಂಗಳೂರು: ಕೃಷಿ ಮಾರಾಟ, ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಮತ್ತು ಬೆಂಗಳೂರು ಜಲಮಂಡಲಿಯಲ್ಲಿ ಖಾಲಿ ಇರುವ ವಿವಿಧ ರೀತಿಯ ಒಟ್ಟು 37 ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಜೂನ್ 4 ಕೊನೇ ದಿನ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ (H Prasanna) ತಿಳಿಸಿದ್ದಾರೆ.
ಪರಿಶಿಷ್ಟ ಜಾತಿಯ ಒಳ ಮೀಸಲಾತಿ ನಿಗದಿ ನಂತರ ಪರೀಕ್ಷೆ ನಡೆಸದೇ ಇರುವ ನೇಮಕಾತಿ ಪ್ರಕ್ರಿಯೆಯನ್ನು ತಡೆ ಹಿಡಿದು, ಮರು ಅಧಿಸೂಚನೆ ಹೊರಡಿಸಲು ಸರ್ಕಾರ ಸೂಚಿಸಿತ್ತು. ಆ ಪ್ರಕಾರ ಸಂಬಂಧಪಟ್ಟ ಇಲಾಖೆಗಳಿಂದ ಒಳ ಮೀಸಲಾತಿ ಅಳವಡಿಸಿಕೊಂಡು ಮರು ಅಧಿಸೂಚನೆ ಹೊರಡಿಸಿದ ನಂತರ ಅರ್ಜಿ ಕರೆದಿದ್ದು, ಈ ಹಿಂದೆ ಅರ್ಜಿ ಸಲ್ಲಿಸಿದವರು ಪುನಃ ಅರ್ಜಿ ಸಲ್ಲಿಸುವ ಅಗತ್ಯ ಇಲ್ಲ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಮೇ 23ಕ್ಕೆ ಡಿಸಿಇಟಿ, ಎಂ.ಟೆಕ್ ಪ್ರವೇಶ ಪರೀಕ್ಷೆ – ಕೆಇಎ

ಪರಿಶಿಷ್ಟ ಜಾತಿಯ ಎ, ಬಿ ಮತ್ತು ಸಿ ವರ್ಗ ಗಳ ಆರ್‌ಡಿ ಸಂಖ್ಯೆ ದಾಖಲು ಮಾಡದವರು ಕೂಡ ಈ ಹಿಂದಿನ ಅರ್ಜಿಯಲ್ಲೇ ಎಡಿಟ್ ಮಾಡಿ, ದಾಖಲಿಸಬಹುದು ಎಂದು ಅವರು ವಿವರಿಸಿದ್ದಾರೆ.
ಹೊಸದಾಗಿ ಅರ್ಜಿ ಸಲ್ಲಿಸುವವರು ಕೂಡ ಅರ್ಜಿ ಸಲ್ಲಿಸಬಹುದು. ಆದರೆ ಈ ಹುದ್ದೆಗಳಿಗೆ ಈ ಮೊದಲು ಅರ್ಜಿ ಸಲ್ಲಿಸಿದ್ದು, ಪುನಃ ಸಲ್ಲಿಸುವ ಅಗತ್ಯ ಇರುವುದಿಲ್ಲ ಎಂದು ಅವರು ತಿಳಿಸಿದರು. ಇದನ್ನೂ ಓದಿ: ಸೋಷಿಯಲ್ ಮೀಡಿಯಾದಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಅಬ್ಬರ – ಫಾಲೋವರ್ಸ್ ಸಂಖ್ಯೆಯಲ್ಲಿ BJPಯನ್ನೇ ಹಿಂದಿಕ್ಕಿದ CJP

