ಸಿಎಂರ ಜನಸ್ಪಂದನವನ್ನು ಅಭಿನಂದಿಸುತ್ತೇನೆ, ಎಲ್ಲವನ್ನು ಟೀಕಿಸಲ್ಲ: ಹೆಚ್‌ಡಿಕೆ

Public TV
1 Min Read
HD Kumaraswamy 2

ಮಡಿಕೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ನಿನ್ನೆ ದಿನ ನಡೆಸಿದ ಜನತಾ ದರ್ಶನವನ್ನು ಜನಸ್ಪಂದನಾ (Janaspandana) ಎಂದಿದ್ದಾರೆ. ಸಿಎಂ ಅವರ ಜನ ಸ್ಪಂದನವನ್ನು ಅಭಿನಂದಿಸುತ್ತೇನೆ ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ತಿಳಿಸಿದ್ದಾರೆ.

ಕೊಡಗಿನ (Kodagu) ಮಡಿಕೇರಿ (Madikeri) ತಾಲೂಕಿನ ಹಾಕತ್ತೂರಿನಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳನ್ನು ಬರಲು ಹೇಳಿ ನಾಡಿನ ಜನತೆಯ ಸಮಸ್ಯೆ ಆಲಿಸಿದ್ದಾರೆ. ಈಗಲಾದರೂ ಇವರಿಗೆ ರಾಜ್ಯದ ಜನತೆಯ ಗ್ರೌಂಡ್ ರಿಯಾಲಿಟಿ ಅರ್ಥವಾಗಿದೆ ಎಂದುಕೊಂಡಿದ್ದೇನೆ. ವಿವಿಧ ಸಮಸ್ಯೆಗಳು ಜನಸ್ಪಂದನದಲ್ಲಿ ಅರ್ಥವಾಗಿರಬಹುದು. ಒಬ್ಬ ಸಿಎಂ ಜನಸ್ಪಂದನೆ ಮಾಡುವುದನ್ನು ನಾನು ಅಭಿನಂದಿಸುತ್ತೇನೆ. ಈ ವಿಷಯದಲ್ಲಿ ನಾನು ಎಲ್ಲವನ್ನು ಟೀಕಿಸುವುದಿಲ್ಲ ಎಂದಿದ್ದಾರೆ.

siddaramaiah

ಮುಂದಿನ 3 ತಿಂಗಳಲ್ಲಿ ಮತ್ತೆ ಜನಸ್ಪಂದನಾ ಮಾಡುತ್ತೇನೆ ಎಂದಿದ್ದಾರೆ. ಅಧಿಕಾರಿಗಳಿಗೆ 3 ತಿಂಗಳ ಗಡುವು ನೀಡಿದ್ದಾರೆ. ಈಗ ಅವರಿಗೆ ಅರ್ಥ ಆಗಿರಬಹುದು. ಅಧಿಕಾರಿಗಳು ಹೇಗೆ ಕೆಲಸ ಮಾಡುತ್ತಿದ್ದಾರೆ ಎಂದು. ನಾನು ಜನತಾ ದರ್ಶನ ಮಾಡಿದಾಗ ಬೆಳಗ್ಗೆ 9 ರಿಂದ ರಾತ್ರಿ 1 ಗಂಟೆವರೆಗೆ ಮಾಡಿದ್ದೆ. ಅಂದು ಇದ್ದ ಸಮಸ್ಯೆಗಳು ಈಗಲೂ ಮುಂದುವರಿದಿವೆ ಎಂದು ತಿಳಿಸಿದರು. ಇದನ್ನೂ ಓದಿ: ಡಿಕೆಶಿ ಕೇಸ್ ವಾಪಸ್; ಹೈಕೋರ್ಟ್ ಮೆಟ್ಟಿಲೇರಿದ ಯತ್ನಾಳ್

ಬಿಜೆಪಿ ಸರ್ಕಾರದಲ್ಲಿ ಕಂದಾಯ ಸಚಿವರಾಗಿದ್ದ ಆರ್ ಅಶೋಕ್ ಅವರು ಕೂಡ ಮಾಡಿದ್ದರು. ಜಿಲ್ಲಾಧಿಕಾರಿಗಳ ನಡಿಗೆ ಹಳ್ಳಿ ಕಡೆಗೆ ಅಂತ ಮಾಡಿದ್ದರು. ತಿಂಗಳಿಗೆ ಒಂದು ಗ್ರಾಮಕ್ಕೆ ಅವರು ಭೇಟಿ ನೀಡಿದ್ದರು. ಈಗ ಸಿಎಂ ಅವರು ಜನಸ್ಪಂದನಾ ಮಾಡಿದ್ದಾರೆ. ಅವರಿಗೆ ಮನವರಿಕೆ ಆಗಿರುವ ಕಷ್ಟಗಳನ್ನು ಸಿಎಂ ಆದಷ್ಟು ಬಗೆಹರಿಸಲಿ. ಆಗ ಅವು ಅರ್ಥಪೂರ್ಣ ಆಗುತ್ತವೆ ಎಂದು ಹೆಚ್‌ಡಿಕೆ ಹೇಳಿದರು. ಇದನ್ನೂ ಓದಿ: ಯಾರೇ ನಿಂತರೂ 2 ಲಕ್ಷ ಮತಗಳ ಅಂತರದಿಂದ ಗೆಲ್ತೀನಿ: ಪ್ರತಾಪ್‌ ಸಿಂಹ

Share This Article