ಕಾರವಾರ: ಗಂಧದಗುಡಿ (Gandhadagudi) ಸಿನಿಮಾ ವೀಕ್ಷಣೆಗಾಗಿ ಚಿತ್ರಮಂದಿರಕ್ಕೆ ತೆರಳಿದ್ದ ಅಪ್ಪು (Appu) ಅಭಿಮಾನಿಗಳು ಚಿತ್ರಮಂದಿರದ ದಿನಗೂಲಿ ನೌಕರನ ಪತ್ನಿಯ ಮೃತದೇಹ ತರಲು ಆಸ್ಪತ್ರೆಗೆ ಹಣ ಪಾವತಿಸಿ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
Advertisement
ಉತ್ತರ ಕನ್ನಡ (Uttar Kannada) ಜಿಲ್ಲೆಯ ಶಿರಸಿಯ (Sirsi) ನಟರಾಜ ಚಿತ್ರಮಂದಿರದ ದಿನಗೂಲಿ ನೌಕರನಾಗಿರುವ ಪರಶುರಾಮ ಛಲವಾದಿಯ ಗರ್ಭಿಣಿ ಪತ್ನಿ ವನಜಾ ಅವರ ಹೊಟ್ಟೆಯಲ್ಲೇ ಮಗು ಸತ್ತು ಸೋಂಕಾಗಿತ್ತು. ಶಿರಸಿಯ ಟಿಎಸ್‍ಎಸ್ ಆಸ್ಪತ್ರೆಯಲ್ಲಿ ಮೃತ ಮಗುವನ್ನು ಹೊರತೆಗೆದು ಮಹಿಳೆಗೆ ಚಿಕಿತ್ಸೆ ನೀಡುವಾಗ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಸಾವನ್ನಪ್ಪಿದ್ದರು.
Advertisement
Advertisement
ಮಹಿಳೆಯ ಮೃತದೇಹ ಕೊಂಡೊಯ್ಯುವ ಮುನ್ನ ಶಿರಸಿಯ ಟಿಎಸ್‍ಎಸ್ ಆಸ್ಪತ್ರೆಯವರು 24,000ರೂ. ಚಾರ್ಜ್ ಮಾಡಿದ್ದರು, ಪತ್ನಿಯ ಮೃತದೇಹ ಬಿಡಿಸಿಕೊಳ್ಳಲು ಹಣವಿಲ್ಲದೇ ಪರದಾಡಿದ್ದ ಪರಶುರಾಮ ಛಲವಾದಿ ಇಂದು ತನ್ನ ನೋವನ್ನು ಚಿತ್ರಮಂದಿರಕ್ಕೆ ಆಗಮಿಸಿದ್ದ ಪುನೀತ್ ರಾಜ್‍ಕುಮಾರ್ (Puneeth Rajkumar) ಅಭಿಮಾನಿಗಳ ಜೊತೆ ತೋಡಿಕೊಂಡಿದ್ದಾರೆ. ಇದನ್ನೂ ಓದಿ: ಟೀ ನಿರಾಕರಿಸಿದ ಡಿಸಿಗೆ ಮದ್ಯ ಕುಡಿತೀರಾ ಅಂದ ಮಹಾರಾಷ್ಟ್ರ ಕೃಷಿ ಸಚಿವ – ವೀಡಿಯೋ ವೈರಲ್
Advertisement
ನಂತರ ವಿಷಯ ತಿಳಿದ ಅಪ್ಪು ಅಭಿಮಾನಿಗಳ ಬಳಗದಲ್ಲೇ 100 – 200 ರೂಪಾಯಿಯಂತೆ ಹಣವನ್ನು ಒಟ್ಟು ಸೇರಿಸಿ ಟಿಎಸ್‍ಎಸ್ ಆಸ್ಪತ್ರೆಗೆ ತೆರಳಿತ್ತು. ಈ ವೇಳೆ ಆಸ್ಪತ್ರೆಯವರು ಸಹ ಅಪ್ಪು ಅಭಿಮಾನಿಗಳ ಮನವಿಗೆ ಸ್ಪಂದಿಸಿ ವೆಚ್ಚವನ್ನು ಕಡಿತಗೊಳಿಸಿ ಮೃತದೇಹ ಬಿಟ್ಟುಕೊಟ್ಟಿದ್ದು, ನಂತರ ಅಭಿಮಾನಿಗಳು ಮಹಿಳೆ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ. ಇದನ್ನೂ ಓದಿ: IPC, CRPC ಸುಧಾರಣೆಗೆ ಶೀಘ್ರದಲ್ಲೇ ನೂತನ ಕರಡು ಮಂಡನೆ – ಶಾ ಹೇಳಿಕೆ