Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡಾರ್ಲಿಂಗ್ ಕೃಷ್ಣ ನಟನೆಯ ‘ಫಾದರ್’ ಚಿತ್ರಕ್ಕೆ ಏಪ್ರಿಲ್ 27ರಂದು ಮುಹೂರ್ತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಡಾರ್ಲಿಂಗ್ ಕೃಷ್ಣ ನಟನೆಯ ‘ಫಾದರ್’ ಚಿತ್ರಕ್ಕೆ ಏಪ್ರಿಲ್ 27ರಂದು ಮುಹೂರ್ತ

Cinema

ಡಾರ್ಲಿಂಗ್ ಕೃಷ್ಣ ನಟನೆಯ ‘ಫಾದರ್’ ಚಿತ್ರಕ್ಕೆ ಏಪ್ರಿಲ್ 27ರಂದು ಮುಹೂರ್ತ

Public TV
Last updated: April 23, 2024 6:32 pm
Public TV
Share
2 Min Read
darling krishna 2
SHARE

ಆರ್.ಸಿ. ಸ್ಟುಡಿಯೋಸ್‌. ಇದು ಆರ್‌ ಚಂದ್ರು (R. Chandru) ಅವರ ಬಹುದೊಡ್ಡ ಕನಸು. ಇದೊಂದು ಪ್ಯಾನ್‌ ಇಂಡಿಯಾ ಬ್ಯಾನರ್.‌ ಕನ್ನಡಕ್ಕೆ ಸೀಮಿತವಾಗಿದ್ದ ಶ್ರೀ ಸಿದ್ದೇಶ್ವರ ಮೂವೀಸ್‌ ಬ್ಯಾನರ್‌ ಅನ್ನು ಸೇರಿಸಿಕೊಂಡೇ ಆರ್.ಸಿ. ಸ್ಟುಡಿಯೋಸ್‌ ಹುಟ್ಟು ಕಂಡಿದೆ. ಈವರೆಗೆ ಸ್ಟಾರ್‌ ನಟರ ಐದು ಯಶಸ್ವಿ ಸಿನಿಮಾಗಳನ್ನು ನಿರ್ಮಿಸಿದ್ದ ಆರ್.ಚಂದ್ರು, ಈಗ ಆರ್.ಸಿ. ಸ್ಟುಡಿಯೋಸ್‌ ಸಂಸ್ಥೆ ಮೂಲಕ ಒಟ್ಟಾರೆ ಆರು ಪ್ಯಾನ್‌ ಇಂಡಿಯಾ ಸಿನಿಮಾಗಳನ್ನು ಅನೌನ್ಸ್‌ ಮಾಡಿದ್ದಾರೆ. ಅವೆಲ್ಲವೂ ಬಿಗ್‌ ಬಜೆಟ್‌ ಸಿನಿಮಾಗಳು, ಬಿಗ್‌ ಸ್ಟಾರ್ಸ್‌ ಸಿನಿಮಾಗಳು ಅನ್ನೋದು ವಿಶೇಷ. ಆ ಸಾಲಿನಲ್ಲಿರುವ ಸಿನಿಮಾಗಳ ಪೈಕಿ ‘ಫಾದರ್‌’ (Father) ಎಂಬ ಆರನೇ ಸಿನಿಮಾ ಏಪ್ರಿಲ್‌ 27ರಂದು ಅದ್ಧೂರಿಯಾಗಿ  ಮುಹೂರ್ತ ನೆರವೇರುತ್ತಿದೆ. ಹುಡುಗಿಯರ ಪಾಲಿನ ಪ್ರೀತಿಯ ಡಾರ್ಲಿಂಗ್‌ ಎನಿಸಿಕೊಂಡಿರುವ ಡಾರ್ಲಿಂಗ್‌ ಕೃಷ್ಣ (Darling Krishna) ಮತ್ತು ಪಂಚಭಾಷೆ ನಟ ಪ್ರಕಾರ್‌ ರೈ (Prakash Raj) ಈ ಚಿತ್ರದ ಮುಖ್ಯ ಆಕರ್ಷಣೆ.

R. Chandru 1

ಈ ಸಿನಿಮಾದ ಶೀರ್ಷಿಕೆಯೇ ಹೇಳುವಂತೆ, ಇದೊಂದು ಅಪ್ಪ- ಮಗನ ಬಾಂಧವ್ಯ ಕುರಿತಾದ ಕಥಾಹಂದರ ಹೊಂದಿರುವ ಸಿನಿಮಾ. ಅಪ್ಪನ ಮೌಲ್ಯ ಸಾರಿದ್ದ ಆರ್.‌ ಚಂದ್ರು ಅವರ ಮೊದಲ ಸೂಪರ್‌ ಹಿಟ್‌ ಸಿನಿಮಾ ತಾಜ್‌ ಮಹಲ್‌ ಇಂದಿಗೂ ಕಾಡುತ್ತೆ. ಫಾದರ್‌ ಕೂಡ ಅಂಥದ್ದೇ ಕಂಟೆಂಟ್‌ ಹೊಂದಿರುವ ಸಿನಿಮಾ ಅನ್ನೋ ಫೀಲ್‌ ಹೆಸರಲ್ಲೇ ಇದೆ. ಮೊದಲಿಂದಲೂ ಆರ್. ಚಂದ್ರು ಕಂಟೆಂಟ್‌ಗೆ ಒತ್ತು ಕೊಟ್ಟವರು. ಈ ಫಾದರ್‌ ಕೂಡ ಅದಕ್ಕೆ ಹೊರತಾಗಿರಲ್ಲ ಎಂಬ ಭಾವನೆ ನಮ್ಮದು. ಸದ್ಯಕ್ಕೆ ಫಾದರ್‌ ಏಪ್ರಿಲ್‌ 27 ರಂದು ಸೆಟ್ಟೇರುತ್ತಿದೆ. ಅಂದಿನಿಂದಲೇ ಚಿತ್ರೀಕರಣಕ್ಕೂ ಚಾಲನೆ ಸಿಗಲಿದೆ.

Father 2

ಸಿನಿಮಾ ಅನ್ನೋದಕ್ಕೆ ದೊಡ್ಡ ಶಕ್ತಿ ಇದೆ. ಅಳು-ನಗುವಿನ ಸಂಕೇತವಿದ್ದರೂ ಅಲ್ಲೆಲ್ಲೋ ಒಂದು ಕಡೆ ಆಪ್ತವೆನಿಸೋ ಅಂಶಗಳು ನೋಡುಗರನ್ನು ಬಿಗಿದಪ್ಪುತ್ತವೆ. ಈ ಫಾದರ್‌ ಸಿನಿಮಾ ಕೂಡ ಎದೆ ಭಾರವೆನಿಸುವ ಚಿತ್ರ. ಮನಸ್ಸಿಗೆ ಖುಷಿ ಕೊಡುವ, ಕಣ್ಣಲ್ಲಿ ಆನಂದಭಾಷ್ಪ ತರುವ ಮತ್ತೆ ಮತ್ತೆ ಕಾಡುವ, ಏನೋ ಕಳೆದುಕೊಂಡ ಸಂಕಟ, ಇನ್ನೇನ್ನನ್ನೋ ಪಡೆಯಬೇಕೆಂಬ ಹಂಬಲ, ಮತ್ತೇನೋ ಉಳಿಸಿಕೊಳ್ಳಬೇಕೆಂಬ ಹಠ ಇವೆಲ್ಲದರ ಸಮ್ಮಿಶ್ರಣವೇ ಫಾದರ್ ಅಂತೆ.

R.Chandru

ಇಲ್ಲಿ ನೋವಿದೆ, ನಲಿವಿದೆ. ಬಾಂಧವ್ಯದ ಹೂರಣವಿದೆ. ಎಲ್ಲಕ್ಕಿಂತ ಹೆಚ್ಚಾಗಿ ವಾಸ್ತವದ ತಿರುಳಿದೆ. ಪ್ರತಿಯೊಬ್ಬರ ಮನಸ್ಸಿಗೂ ನಾಟುವ ಅಂಶವಿದೆ. ಕಣ್ಣಿಗೆ ಕಟ್ಟುವ ಚಿತ್ರಣವೂ ಇರಲಿದೆ. ಫಾದರ್‌ ಪ್ರತಿಯೊಬ್ಬರ ಮನಸ್ಸನ್ನು ಹಗುರಾಗಿಸೋ ಚಿತ್ರವಾದರೂ, ಏನೋ ಒಂದು ಮಿಸ್‌ ಆಯ್ತು ಅನ್ನೋ ಭಾವನೆಯ ಚಿತ್ರ ಇದಾಗಲಿದೆ. ಆರ್.ಸಿ. ಸ್ಟುಡಿಯೋದ ಮೊದಲ ಪ್ಯಾನ್‌ ಇಂಡಿಯಾ ಸಿನಿಮಾ ಇದಾಗಿರುವುದರಿಂದ ಸ್ಟುಡಿಯೋ ಮುಖ್ಯಸ್ಥ ಆರ್.ಚಂದ್ರು ಒಂದೊಳ್ಳೆಯ ಕಂಟೆಂಟ್‌ ಆಯ್ಕೆ ಮಾಡಿಕೊಂಡಿದ್ದಾರೆ. ಹೌದು, ಜಗತ್ತಿನಲ್ಲಿ ಅಪ್ಪನ ಸ್ಥಾನ ತುಂಬೋಕೆ ಯಾರಿಂದಲೂ ಸಾಧ್ಯವಿಲ್ಲ. ಅಪ್ಪ ಅನ್ನೋದು ಆಕಾಶಕ್ಕಿಂತಲೂ ಮಿಗಿಲು. ಅಪ್ಪನ ಬಿಸಿಯುಸಿರು, ಅಪ್ಪನ ಅಪ್ಪುಗೆ, ಅಪ್ಪನ ನೋವು, ಅಪ್ಪನ ಬೆವರು, ಅಪ್ಪನ ಕಾತರ, ಆತುರ, ಚಡಪಡಿಕೆ, ಆಸೆ, ಜವಾಬ್ದಾರಿ ಇತ್ಯಾದಿಗಳ ರೂಪವೇ ಈ ಫಾದರ್‌ ಅಂತಂದುಕೊಂಡರೂ ಅದಕ್ಕಿಂತಲೂ ಮಿಗಿಲಾಗಿದ್ದು ಈ ಫಾದರ್‌ ಒಳಗಿದೆ. ಇದು ಎಲ್ಲರಿಗೂ ಇಷ್ಟವಾಗುವ ಚಿತ್ರವಾಗುತ್ತೆ ಎಂಬ ಭರವಸೆ ಆರ್ ಸಿ ಸ್ಟುಡಿಯೋದ್ದು.

 

ಇನ್ನು ಚಂದ್ರು ಕಂಟೆಂಟ್‌ಗೆ ಬೆಲೆ ಕೊಡ್ತಾರೆ. ಆ ಕಾರಣಕ್ಕೆ ಬಿಗ್‌ ಬಜೆಟ್‌ ಆಗಿದ್ದರೂ,  ನಿರ್ದೇಶಕ ರಾಜ ಮೋಹನ್‌ ಎಂಬುವವರನ್ನು ಕನ್ನಡಕ್ಕೆ ಕರೆದು ಅವಕಾಶ ಕೊಡುತ್ತಿದ್ದಾರೆ. ಆ ನಿರ್ದೇಶಕನಿಗೆ ಪ್ಯಾನ್‌ ಇಂಡಿಯಾ ಸಿನಿಮಾ ಮಾಡಲು ಅವಕಾಶ ಕೊಟ್ಟ ಚಂದ್ರು ಕೂಡ ಸಿನಿಮಾದ ಗಾಡ್‌ ಫಾದರ್‌ ಇದ್ದಂತೆ. ಈ ಮಾತು ಅತಿಶಯೋಕ್ತಿಯಲ್ಲ.

TAGGED:Darling KrishnafatherPrakash RajR. Chandruಆರ್.ಚಂದ್ರುಡಾರ್ಲಿಂಗ್ ಕೃಷ್ಣಪ್ರಕಾಶ್ ರಾಜ್ಫಾದರ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Raichur Man Death Heat Stroke Suspected
Districts

ಉದ್ಯೋಗ ಖಾತ್ರಿ ಕೆಲಸಕ್ಕೆ ಹೋಗಿದ್ದ ಕೂಲಿ ಕಾರ್ಮಿಕ ಸಾವು – ಬಿಸಿಲಿನ ತಾಪಕ್ಕೆ ಕುಸಿದು ಬಿದ್ದಿರುವ ಶಂಕೆ

Public TV
By Public TV
6 minutes ago
Husband who killed wife with axe surrenders to police Mysuru
Crime

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ

Public TV
By Public TV
58 minutes ago
Weather 1
Bengaluru City

ಇಂದೂ ಸಹ ಬೆಂಗಳೂರಲ್ಲಿ ಆರ್ಭಟಿಸಲಿದ್ದಾನೆ ವರುಣ – ಮೇ 1ರವರೆಗೂ ಮಳೆ ಮುನ್ಸೂಚನೆ

Public TV
By Public TV
59 minutes ago
Groom dies in an accident while going for a pre wedding shoot sakleshpur hassan
Crime

ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ – ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು

Public TV
By Public TV
1 hour ago
Earthquake General Photo
Latest

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ

Public TV
By Public TV
2 hours ago
West Bengal Election BJP button on EVM taped Perfume on buttons CEO Manoj Kumar Agarwal reports 77 EVM tampering cases hints at repoll on May 2 Diamond harbour falta
Latest

ಬಂಗಾಳದಲ್ಲಿ ಬಿಜೆಪಿ ಚಿಹ್ನೆಗೆ ಟೇಪ್‌, ಸುಗಂಧ ದ್ರವ್ಯ| 77 ಇವಿಎಂನಲ್ಲಿ ಟ್ಯಾಂಪರಿಂಗ್‌ – ಮೇ 2ರ ಒಳಗಡೆ ಮರು ಮತದಾನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?