ಬೆಂಗಳೂರು: ರಾಜ್ಯಾದ್ಯಂತ ಇನ್ನೂ ಎರಡು ದಿನ ಮಳೆಯಾಗುವ ಸಾಧ್ಯತೆಗಳಿವೆ ಎಂದು ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಉಸ್ತುವಾರಿ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.
ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹಾಗೂ ಛತ್ತೀಸಗಢ್ ದಿಂದ ತಮಿಳುನಾಡಿನವರೆಗೆ ಟ್ರಫ್ (ಮೋಡಗಳ ಸಾಲು) ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಏಪ್ರಿಲ್ 8 ಹಾಗೂ 9 ರಂದು ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಅಂತ ಹೇಳಿದ್ದಾರೆ.
Advertisement
ಬೆಂಗಳೂರಿನಲ್ಲಿ ಮೋಡ ಕವಿತ ವಾತಾವರಣ ಇರಲಿದ್ದು, ಅಲ್ಲಲ್ಲಿ ಚದುರಿದ ಮಳೆಯಾಗಬಹುದು. ಶುಕ್ರವಾರ ರಾಯಚೂರು ಜಿಲ್ಲೆಯಲ್ಲಿ ಭಾರೀ ಬಿರುಗಾಳಿ ಆಲಿಕಲ್ಲು ಸಹಿತ ಮಳೆಯಾಗಿದೆ. ಎರಡು ದಿನಗಳಲ್ಲಿ ಕಟಾವು ಮಾಡಬೇಕಿದ್ದ ಭತ್ತವೆಲ್ಲಾ ಮಳೆಯಿಂದಾಗಿ ಹಾಳಾಗಿ ರೈತ ಕಣ್ಣೀರಲ್ಲಿ ಕೈ ತೊಳೆಯುವಂತಾಗಿದೆ.