ನವದೆಹಲಿ: ದೇಶದ ಒಟ್ಟು ರಾಷ್ಟ್ರೀಯ ಉತ್ಪನ್ನ (ಜಿಡಿಪಿ) ಏಪ್ರಿಲ್‍ನಿಂದ ಜೂನ್ ವರೆಗಿನ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಶೇ.5ಕ್ಕೆ ಕುಸಿದಿದೆ.
ಕಳೆದ ಆರುವರೆ ವರ್ಷಗಳಲ್ಲಿ ಅತ್ಯಂತ ಮಂದಗತಿಯ ಬೆಳವಣಿಗೆ ಇದಾಗಿದ್ದು, ಕೃಷಿ ಮತ್ತು ತಯಾರಿಕಾ ವಲಯದ ಕಳಪೆ ನಿರ್ವಹಣೆಯ ಜಿಡಿಪಿ ಕಡಿಮೆ ದಾಖಲಾಗಿದೆ. ಮೇ ಅಂತ್ಯಕ್ಕೆ ಕೊನೆಗೊಂಡ ಕೊನೆಯ ತ್ರೈಮಾಸಿಕದಲ್ಲಿ ಶೇ.5.8 ಜಿಡಿಪಿ ದಾಖಲಾಗಿತ್ತು.
Advertisement
ಇಳಿಕೆಗೆ ಕಾರಣ ಏನು?
2018-19ರ ಮೊದಲ ತ್ರೈಮಾಸಿಕದಲ್ಲಿ ಉತ್ಪಾದನಾ ವಲಯ ಶೇ.12.1 ರಷ್ಟು ಪ್ರಗತಿ ಸಾಧಿಸಿದ್ದರೆ ಈ ಬಾರಿ ಶೇ.0.6 ಬೆಳವಣಿಗೆ ಸಾಧಿಸಿದೆ. ಕೃಷಿ, ಅರಣ್ಯ, ಮೀನುಗಾರಿಗೆ ಕ್ಷೇತ್ರ ಶೇ.2 ರಷ್ಟು ಬೆಳವಣಿಗೆ ಸಾಧಿಸಿದರೆ ಕಳೆದ ಬಾರಿ ಈ ಅವಧಿಯಲ್ಲಿ ಶೇ.5.1 ರಷ್ಟು ಪ್ರಗತಿ ಸಾಧಿಸಿತ್ತು. ನಿರ್ಮಾಣ ವಲಯ 2018-19 ಮೊದಲ ತ್ರೈಮಾಸಿಕದಲ್ಲಿ ಶೇ.9.6 ರಷ್ಟು ಪ್ರಗತಿ ಸಾಧಿಸಿದ್ದರೆ ಈ ಬಾರಿ ಶೇ.5.7ಕ್ಕೆ ಕುಸಿದಿದೆ.
Advertisement
Advertisement
ಕೈಗಾರಿಕಾ ಉತ್ಪಾದನ ಭಾರೀ ಇಳಿಕೆಯಾಗಿದೆ. ಈ ಹಿಂದೆ ಈ ಅವಧಿಯಲ್ಲಿ ಶೇ.5.1 ರಷ್ಟು ಪ್ರಗತಿ ಸಾಧಿಸಿದರೆ ಈ ಬಾರಿ ಶೇ.3.6ಕ್ಕೆ ಇಳಿಕೆಯಾಗಿದೆ. ಕಳೆದ 19 ವರ್ಷದಲ್ಲಿ ಪ್ರಯಾಣಿಕ ವಾಹನ ಕೈಗಾರಿಕೆ ವಲಯದ ಪ್ರಗತಿ ಇಳಿಕೆಯಾಗಿದ್ದು ಜುಲೈ ತಿಂಗಳಿನಲ್ಲಿ ಶೇ.31 ರಷ್ಟು ಮಾರಾಟದಲ್ಲಿ ಇಳಿಕೆಯಾಗಿತ್ತು.
Advertisement
ವಾರ್ಷಿಕ ಜಿಡಿಪಿ ದರ ಎಷ್ಟಿತ್ತು?
2014-15 – 7.4 %
2015-16 – 8 %
2016-17 – 8.1 %
2017-18 – 7.2 %
2018-19 – 6.9 %
2019-20 – 5 %(ಮೊದಲ ತ್ರೈಮಾಸಿಕ)