ಮುರಿದ ಹೃದಯಗಳ ಭಾರಕ್ಕೆ ದೇವರ ಸಿಂಹಾಸನವೂ ನಡುಗಬಹುದು: ಡಿವೋರ್ಸ್ ಬಗ್ಗೆ ಎ.ಆರ್. ರೆಹಮಾನ್ ರಿಯಾಕ್ಷನ್

Public TV
1 Min Read
a r rahman

ಖ್ಯಾತ ಸಂಗೀತ ಸಂಯೋಜಕ, ಗಾಯಕ ಎ.ಆರ್. ರೆಹಮಾನ್ (A.R. Rahman) ಮತ್ತು ಸಾಯಿರಾ ಬಾನು (Saira Banu) 29 ವರ್ಷಗಳ ದಾಂಪತ್ಯಕ್ಕೆ (Divorce) ಅಂತ್ಯ ಹಾಡಿದ್ದಾರೆ. ಡಿವೋರ್ಸ್ ಕುರಿತು ನಿನ್ನೆ (ನ.19) ಅಧಿಕೃತವಾಗಿ ಸಾಯಿರಾ ಖಚಿತಪಡಿಸಿದ್ದರು. ಇದೀಗ ಎ.ಆರ್. ರೆಹಮಾನ್ ಅವರು ವಿಚ್ಛೇದನ ಕುರಿತು ಮೌನ ಮುರಿದ್ದಾರೆ.  ಇದನ್ನೂ ಓದಿ:ಬಹುಕಾಲದ ಗೆಳೆಯನ ಜೊತೆ ಮದುವೆಗೆ ರೆಡಿಯಾದ್ರಾ ಕೀರ್ತಿ ಸುರೇಶ್?- ಫೋಟೋ ವೈರಲ್

AR Rahman Saira Banuಸೋಶಿಯಲ್ ಮೀಡಿಯಾದಲ್ಲಿ ಎ.ಆರ್. ರೆಹಮಾನ್ ಪ್ರತಿಕ್ರಿಯಿಸಿ, ನಾವು ಇನ್ನೇನು 30 ವರ್ಷಗಳ ದಾಂಪತ್ಯಕ್ಕೆ ಕಾಲಿಡಬೇಕಿತ್ತು. ಆದರೆ, ಯಾರೂ ಊಹಿಸದ ಅಂತ್ಯ ಸಿಕ್ಕಿದೆ. ಮುರಿದ ಹೃದಯಗಳ ಭಾರಕ್ಕೆ ದೇವರ ಸಿಂಹಾಸನವೂ ನಡುಗಬಹುದು. ಆದರೂ, ಈ ಚೂರಾದ ಸಂಬಂಧದಲ್ಲೂ ನಾವು ಅರ್ಥವನ್ನು ಹುಡುಕುತ್ತೇವೆ. ಒಡೆದ ತುಣುಕುಗಳು ಮತ್ತೆ ಎಂದಿಗೂ ಒಂದಾಗಲಾರದು. ನಮ್ಮ ಖಾಸಗಿತನ ಗೌರವಿಸಿದ ಗೆಳೆಯರಿಗೆ ಧನ್ಯವಾದ ಎಂದಿದ್ದಾರೆ.

ಅಂದಹಾಗೆ, ಈ ನಿರ್ಧಾರವು ಅವರ ಸಂಬಂಧದಲ್ಲಿ ಗಮನಾರ್ಹವಾದ ಭಾವನಾತ್ಮಕ ಒತ್ತಡದ ನಂತರ ಬಂದಿದೆ. ಒಬ್ಬರಿಗೊಬ್ಬರು ಆಳವಾದ ಪ್ರೀತಿಯ ಹೊರತಾಗಿಯೂ, ಉದ್ವಿಗ್ನತೆ ಮತ್ತು ತೊಂದರೆಗಳು ತಮ್ಮ ನಡುವೆ ದುಸ್ತರವಾದ ಅಂತರವನ್ನು ಸೃಷ್ಟಿಸಿವೆ ಎಂದು ಸಾಯಿರಾ ಬಾನು ಅವರು ದಾಂಪತ್ಯ ಅಂತ್ಯವಾಗಿರುವ ಬಗ್ಗೆ ಖಚಿತಪಡಿಸಿದ್ದರು.

ಎ.ಆರ್.ರೆಹಮಾನ್ ಅವರು 1995ರಲ್ಲಿ ಸಾಯಿರಾ ಬಾನು ಅವರೊಂದಿಗೆ ವಿವಾಹವಾಗಿದ್ದರು. ದಂಪತಿಗೆ ಖತೀಜಾ, ರಹೀಮಾ ಮತ್ತು ಅಮೀನ್ ಎಂಬ ಮೂವರು ಮಕ್ಕಳಿದ್ದಾರೆ.

Share This Article